Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:3 - ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ದಾವೀದನು ತನ್ನ ಸಂಗಡ ಇದ್ದ ಜನರನ್ನೂ, ಅವರವರ ಮನೆಯವರನ್ನೂ ಕರೆದುಕೊಂಡು ಹೋದನು. ಅವರು ಹೆಬ್ರೋನಿನ ಪಟ್ಟಣಗಳಲ್ಲಿ ವಾಸವಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ದಾವೀದನ ಜನರೂ ತಮ್ಮ ತಮ್ಮ ಕುಟುಂಬಗಳನ್ನು ಕರೆದುಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ದಾವೀದನ ಜನರೂ ತಮ್ಮತಮ್ಮ ಕುಟುಂಬಗಳನ್ನು ಕರಕೊಂಡು ಅವನ ಜೊತೆಯಲ್ಲಿ ಹೋಗಿ ಹೆಬ್ರೋನಿಗೆ ಸೇರಿದ ಊರುಗಳಲ್ಲಿ ವಾಸಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದಾವೀದನು ತನ್ನ ಜನರನ್ನು ಮತ್ತು ಅವರ ಕುಟುಂಬಗಳನ್ನು ಸಹ ಕರೆತಂದನು. ಅವರೆಲ್ಲರೂ ಹೆಬ್ರೋನ್ ಮತ್ತು ಅದರ ಸಮೀಪದ ನಗರಗಳಲ್ಲಿ ನೆಲೆಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:3
7 ತಿಳಿವುಗಳ ಹೋಲಿಕೆ  

ದಾವೀದನೂ, ಅವನ ಜನರೂ ಮೂರನೆಯ ದಿವಸದಲ್ಲಿ ಚಿಕ್ಲಗ್ ಊರಿಗೆ ಬಂದು ಸೇರಿದರು. ಅಮಾಲೇಕ್ಯರು ದಕ್ಷಿಣ ಸೀಮೆಯ ಮೇಲೆಯೂ, ಚಿಕ್ಲಗಿನ ಮೇಲೆಯೂ ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಟ್ಟರು.


ಇದಲ್ಲದೆ ಶ್ರಮಪಟ್ಟವರೂ, ಸಾಲಗಾರರೂ, ಅಸಂತುಷ್ಟರೂ ಅವನ ಸಂಗಡ ಕೂಡಿಕೊಂಡರು. ಆಗ ದಾವೀದನು ಅವರಿಗೆ ಅಧಿಪತಿಯಾದನು. ಹೆಚ್ಚು ಕಡಿಮೆ ನಾನೂರು ಜನರು ಅವನ ಬಳಿಯಲ್ಲಿ ಇದ್ದರು.


ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು