Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:4 - ಕನ್ನಡ ಸಮಕಾಲಿಕ ಅನುವಾದ

4 ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ, ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದ್ ದೇಶದವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿ ದಾವೀದನಿಗೆ ತಿಳಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ತರುವಾಯ ಯೆಹೂದ್ಯರು ಅಲ್ಲಿಗೆ ಬಂದು ದಾವೀದನನ್ನು ಅಭಿಷೇಕಿಸಿ ತಮ್ಮ ಕುಲಕ್ಕೆ ಅರಸನನ್ನಾಗಿ ಮಾಡಿಕೊಂಡರು. ಸೌಲನ ಶವವನ್ನು ಸಮಾಧಿಮಾಡಿದವರು ಯಾಬೇಷ್ ಗಿಲ್ಯಾದಿನವರೇ ಎಂಬ ಸಂಗತಿಯು ದಾವೀದನಿಗೆ ಗೊತ್ತಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೂದದ ಜನರು ಬಂದು ದಾವೀದನನ್ನು ಯೆಹೂದದ ರಾಜನನ್ನಾಗಿ ಅಭಿಷೇಕಿಸಿದರು. ಬಳಿಕ ಅವರು ದಾವೀದನಿಗೆ, “ಸೌಲನ ಸಮಾಧಿ ಮಾಡಿದವರು ಯಾಬೇಷ್ ಗಿಲ್ಯಾದಿನವರೇ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:4
16 ತಿಳಿವುಗಳ ಹೋಲಿಕೆ  

ಅವನು ಹೆಬ್ರೋನಿನಲ್ಲಿ ಯೆಹೂದದ ಮೇಲೆ ಏಳುವರೆ ವರ್ಷ ಆಳಿದನು. ಯೆರೂಸಲೇಮಿನಲ್ಲಿ ಸಮಸ್ತ ಇಸ್ರಾಯೇಲರ ಮೇಲೆಯೂ, ಸಮಸ್ತ ಯೆಹೂದದ ಜನರ ಮೇಲೆಯೂ ಮೂವತ್ತು ಮೂರು ವರ್ಷ ಆಳಿದನು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಆಗ ಯೆಹೂದದವರೆಲ್ಲರೂ ಇಸ್ರಾಯೇಲರಿಗೆ ಉತ್ತರವಾಗಿ, “ಅರಸನು ನಮಗೆ ಸಮೀಪ ಬಂಧುವಾದುದರಿಂದ, ಈ ಕಾರ್ಯಕ್ಕೋಸ್ಕರ ನೀವು ಕೋಪಗೊಂಡಿರುವುದೇನು? ನಾವು ಅರಸನ ಖರ್ಚಿನಿಂದ ಏನಾದರೂ ಊಟ ಮಾಡಿದೆವೋ? ನಾವು ನಮಗಾಗಿ ಏನನ್ನಾದರೂ ತೆಗೆದುಕೊಂಡಿದ್ದೇವೆಯೇ?” ಎಂದರು.


ಆಗ ಅರಸನಾದ ದಾವೀದನು ಯಾಜಕರಾದ ಚಾದೋಕನ ಬಳಿಗೂ, ಅಬಿಯಾತರನ ಬಳಿಗೂ ಸೇವಕರನ್ನು ಕಳುಹಿಸಿ, “ನೀವು ಯೆಹೂದದ ಹಿರಿಯರಿಗೆ, ‘ಸಮಸ್ತ ಇಸ್ರಾಯೇಲಿನ ಮಾತು ಅರಸನಿಗೆ ಅವನ ಅರಮನೆಯಲ್ಲಿಯೇ ತಿಳಿದಿರುವಾಗ, ಅರಸನನ್ನು ಅವನ ಮನೆಗೆ ತಿರುಗಿ ಕರೆದುಕೊಂಡು ಬರುವಂತೆ ನೀವು ಹಿಂಜರಿದದ್ದೇನು?


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಹೊಂದಿದ್ದಾನೆಂದು ಫಿಲಿಷ್ಟಿಯರು ಕೇಳಿದಾಗ, ಫಿಲಿಷ್ಟಿಯರೆಲ್ಲರೂ ದಾವೀದನನ್ನು ಸೆರೆಹಿಡಿಯಲು ಹೋದರು. ದಾವೀದನು ಅದನ್ನು ಕೇಳಿ ಕೋಟೆ ಸ್ಥಳಕ್ಕೆ ಹೋದನು.


ದಾವೀದನು ಹೆಬ್ರೋನಿನಲ್ಲಿ ಯೆಹೂದ ಗೋತ್ರದವರ ಮೇಲೆ ಅರಸನಾಗಿದ್ದ ಕಾಲವು ಏಳು ವರ್ಷ ಆರು ತಿಂಗಳು.


ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.


ಯೆಹೋವ ದೇವರ ವಾಕ್ಯದ ಪ್ರಕಾರ ಸೌಲನ ರಾಜ್ಯವನ್ನು ದಾವೀದನ ಕಡೆಗೆ ತಿರುಗಿಸುವುದಕ್ಕೆ, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಯುದ್ಧಕ್ಕೆ ಆಯುಧಗಳನ್ನು ಧರಿಸಿಕೊಂಡು ಬಂದ ದಂಡುಗಳ ಸಂಖ್ಯೆ ಇದು:


ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.


ಆಗ ದಾವೀದನು ಹೋಗಿ ಸೌಲನ ಮತ್ತು ಅವನ ಮಗನಾದ ಯೋನಾತಾನನ ಎಲುಬುಗಳನ್ನು ತರುವುದಕ್ಕೆ ಯಾಬೇಷ್ ಗಿಲ್ಯಾದಿಗೆ ಹೋದನು. ಫಿಲಿಷ್ಟಿಯರು ಗಿಲ್ಬೋವದಲ್ಲಿ ಸೌಲನನ್ನು ಸೋಲಿಸಿದ ನಂತರ, ಅವನ ಮತ್ತು ಅವನ ಮಗನಾದ ಯೋನಾತಾನನ ಶವಗಳನ್ನು ಬೇತ್ ಷೆಯಾನಿನ ಬೀದಿಗಳಲ್ಲಿ ತೂಗುಹಾಕಿದ್ದರು. ಯಾಬೇಷ್ ಗಿಲ್ಯಾದಿನವರು ಅಲ್ಲಿಂದ ಆ ಶವಗಳನ್ನು ಕದ್ದುಕೊಂಡು ಹೋಗಿದ್ದರು.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ಫಿಲಿಷ್ಟಿಯರು ಸೌಲನಿಗೆ ಮಾಡಿದ್ದನ್ನೆಲ್ಲಾ ಯಾಬೇಷ್ ಗಿಲ್ಯಾದಿನವರೆಲ್ಲರು ಕೇಳಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು