Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 2:7 - ಕನ್ನಡ ಸಮಕಾಲಿಕ ಅನುವಾದ

7 ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ, ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ನಿಮ್ಮ ಅರಸನಾದ ಸೌಲನು ಸತ್ತುಹೋದರೂ ನೀವು ಶೂರರಾಗಿರಿ, ನಿಮ್ಮ ಕೈಗಳು ಜೋಲುಬೀಳದಿರಲಿ” ಎಂದು ಹೇಳಿ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿದ್ದಾರೆ. ಆದುದರಿಂದ ಸೌಲನು ಸತ್ತುಹೋಗಿದ್ದರೂ ನೀವು ಶೂರರಾಗಿರಿ; ನಿಮ್ಮ ಕೈಗಳು ಜೋಲುಬೀಳದಿರಲಿ,” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಯೆಹೂದ್ಯರು ನನ್ನನ್ನು ಅಭಿಷೇಕಿಸಿ ತಮ್ಮ ಅರಸನನ್ನಾಗಿ ಮಾಡಿಕೊಂಡಿರುವದರಿಂದ ಸೌಲನು ಸತ್ತು ಹೋದರೂ ಶೂರರಾಗಿರ್ರಿ, ನಿಮ್ಮ ಕೈಗಳು ಜೋಲು ಬೀಳದಿರಲಿ ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಿಮ್ಮ ಒಡೆಯನಾದ ಸೌಲನು ಮರಣ ಹೊಂದಿರುವುದರಿಂದ, ಯೆಹೂದ ಕುಲದವರು ನನ್ನನ್ನು ತಮ್ಮ ರಾಜನನ್ನಾಗಿ ಅಭಿಷೇಕಿಸಿದ್ದಾರೆ. ಆದ್ದರಿಂದ ನೀವು ಬಲಿಷ್ಠರಾಗಿರಿ ಮತ್ತು ಧೈರ್ಯದಿಂದಿರಿ” ಎಂದು ಹೇಳಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 2:7
12 ತಿಳಿವುಗಳ ಹೋಲಿಕೆ  

ಕೊನೆಯದಾಗಿ, ಕರ್ತನಲ್ಲಿಯೂ ಅವರ ಪರಾಕ್ರಮ ಶಕ್ತಿಯಲ್ಲಿಯೂ ಬಲಗೊಳ್ಳಿರಿ.


ದೃಢವಾಗಿರು; ನಾವು ನಮ್ಮ ಜನರಿಗೋಸ್ಕರವೂ ನಮ್ಮ ದೇವರ ಪಟ್ಟಣಗಳಿಗೋಸ್ಕರವೂ ಧೈರ್ಯವಾಗಿ ಹೋರಾಡೋಣ, ಯೆಹೋವ ದೇವರು ತಮ್ಮ ದೃಷ್ಟಿಗೆ ಉತ್ತಮವಾದದ್ದನ್ನು ಮಾಡಲಿ,” ಎಂದನು.


ಅವರಲ್ಲಿರುವ ಸಮಸ್ತ ಪರಾಕ್ರಮಶಾಲಿಗಳು ಎದ್ದು, ರಾತ್ರಿಯೆಲ್ಲಾ ನಡೆದುಹೋಗಿ, ಬೇತ್ ಷೆಯಾನಿನ ಗೋಡೆಗೆ ಜಡಿದಿದ್ದ ಸೌಲನ ಶವವನ್ನೂ, ಅವನ ಪುತ್ರರ ಶವಗಳನ್ನೂ ತೆಗೆದುಕೊಂಡು ಯಾಬೇಷಿಗೆ ಬಂದು, ಅವುಗಳನ್ನು ಅಲ್ಲಿ ದಹಿಸಿದರು.


ಇಸ್ರಾಯೇಲರ ಸೈನಿಕರು ಸೋತು ಹೋದರೆಂದೂ, ಸೌಲನೂ, ಅವನ ಪುತ್ರರೂ ಸತ್ತರೆಂದೂ, ತಗ್ಗಿನ ಆಚೆಯಲ್ಲಿಯೂ ಯೊರ್ದನಿನ ಆಚೆಯಲ್ಲಿಯೂ ವಾಸವಾಗಿದ್ದ ಇಸ್ರಾಯೇಲರು ಕಂಡಾಗ, ಅವರು ತಮ್ಮ ಪಟ್ಟಣಗಳನ್ನು ಬಿಟ್ಟು ಓಡಿಹೋದರು. ಆಗ ಫಿಲಿಷ್ಟಿಯರು ಬಂದು ಅವುಗಳಲ್ಲಿ ವಾಸಿಸಿದರು.


ಫಿಲಿಷ್ಟಿಯರೇ, ನೀವು ಬಲಗೊಂಡು ಶೂರರಾಗಿರಿ. ಹಿಬ್ರಿಯರು ನಿಮಗೆ ಗುಲಾಮರಾಗಿ ಮಾಡಿದ ಪ್ರಕಾರ ನೀವು ಅವರಿಗೆ ಗುಲಾಮರಾಗದ ಹಾಗೆ ಶೂರರಾಗಿ ಇದ್ದು, ಯುದ್ಧಮಾಡಿರೆಂದು ಹೇಳಿಕೊಂಡರು.


ಇವುಗಳಾದ ಮೇಲೆ ಯೆಹೋವ ದೇವರ ವಾಕ್ಯವು ಅಬ್ರಾಮನಿಗೆ ದರ್ಶನದಲ್ಲಿ ಉಂಟಾಗಿ ಹೇಳಿದ್ದೇನೆಂದರೆ: “ಅಬ್ರಾಮನೇ, ಭಯಪಡಬೇಡ. ನಾನು ನಿನಗೆ ಗುರಾಣಿಯಾಗಿದ್ದೇನೆ. ನಾನೇ ನಿನಗೆ ಅತ್ಯಧಿಕ ಬಹುಮಾನವಾಗಿದ್ದೇನೆ.”


ಎಚ್ಚರವಾಗಿರಿ, ವಿಶ್ವಾಸದಲ್ಲಿ ಸ್ಥಿರವಾಗಿ ನಿಲ್ಲಿರಿ, ಧೈರ್ಯವಾಗಿರಿ, ಬಲಗೊಳ್ಳಿರಿ.


ಈಗ ಯೆಹೋವ ದೇವರು ನಿಮಗೆ ದಯೆಯನ್ನೂ, ನಂಬಿಗಸ್ತಿಕೆಯನ್ನೂ ತೋರಿಸಲಿ. ನೀವು ಈ ಕಾರ್ಯವನ್ನು ಮಾಡಿದ್ದರಿಂದ, ನಾನು ನಿಮಗೆ ಪ್ರತ್ಯುಪಕಾರ ಮಾಡುವೆನು.


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಇದಲ್ಲದೆ, ನನ್ನ ದೇವರ ಕೃಪಾಹಸ್ತ ನನ್ನನ್ನು ಹೇಗೆ ನಡೆಸಿತೆಂಬುದನ್ನೂ, ರಾಜನು ನನಗೆ ಹೇಳಿದ್ದನ್ನೂ ಅವರಿಗೆ ವಿವರಿಸಿದೆ. ಆಗ ಅವರು, “ಬನ್ನಿ, ಪುನಃ ಕಟ್ಟೋಣ,” ಎಂದು ಹೇಳಿ, ಆ ಒಳ್ಳೆಯ ಕೆಲಸಕ್ಕೆ ಕೈಹಾಕಲು ಧೈರ್ಯಗೊಂಡರು.


ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಆಗ ಯೆಹೋಯಾದಾವನು ರಾಜಪುತ್ರನನ್ನು ಹೊರಗೆ ಕರೆತಂದು, ಅವನ ತಲೆಯ ಮೇಲೆ ಕಿರೀಟವನ್ನಿಟ್ಟು, ಕೈಗೆ ದೇವರ ನಿಯಮ ಗ್ರಂಥವನ್ನು ಕೊಟ್ಟು, ಅರಸನನ್ನಾಗಿ ಮಾಡಿ ಅವನನ್ನು ಅಭಿಷೇಕಿಸಿದರು. ಕೂಡಲೆ ಜನರು ಚಪ್ಪಾಳೆ ಹೊಡೆದು, “ಅರಸನು ಚಿರಂಜೀವಿಯಾಗಿರಲಿ!” ಎಂದು ಹರಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು