Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:1 - ಕನ್ನಡ ಸಮಕಾಲಿಕ ಅನುವಾದ

1 ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಕಸ್ಮಾತ್ತಾಗಿ ಬೆನ್ಯಾಮೀನ ಕುಲದವನೂ, ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಾಯೇಲರೇ, ದಾವೀದನಲ್ಲಿ ನಮಗೆ ಪಾಲಿಲ್ಲ. ಇಷಯನ ಮಗನಲ್ಲಿ ನಮಗೆ ಸ್ವತ್ತು ಇಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಬೆನ್ಯಾಮೀನ್ ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ನೀಚ ವ್ಯಕ್ತಿ ಅಲ್ಲಿಗೆ ಹೇಗೋ ಬಂದಿದ್ದನು. ಅವನು ಕಹಳೆಯನ್ನು ಊದಿ, “ಇಸ್ರಯೇಲರೇ, ದಾವೀದನಿಗೂ ನಮಗೂ ಏನೂ ಸಂಬಂಧವಿಲ್ಲ. ಜೆಸ್ಸೆಯನ ಮಗನಲ್ಲಿ ನಮಗೆ ಹಕ್ಕುಭಾದ್ಯತೆಯಿಲ್ಲ. ಪ್ರತಿ ಒಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ತೆರಳೋಣ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅಕಸ್ಮಾತ್ತಾಗಿ ಬೆನ್ಯಾಮೀನ್‍ಕುಲದವನೂ ಬಿಕ್ರೀಯ ಮಗನೂ ಆದ ಶೆಬನೆಂಬ ಒಬ್ಬ ದುಷ್ಟ ಮನುಷ್ಯನು ಅಲ್ಲಿ ಹೇಗೋ ಬಂದಿದ್ದನು. ಅವನು ತುತೂರಿಯನ್ನು ಊದಿ - ಇಸ್ರಾಯೇಲ್ಯರೇ, ದಾವೀದನಲ್ಲಿ ನಮಗೆ ಪಾಲಿಲ್ಲ; ಇಷಯನ ಮಗನಲ್ಲಿ ನಮಗೆ ಸ್ವಾಸ್ತ್ಯವಿಲ್ಲ. ಪ್ರತಿಯೊಬ್ಬನೂ ನಮ್ಮ ನಮ್ಮ ನಿವಾಸಗಳಿಗೆ ಹೋಗೋಣ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಬಿಕ್ರೀಯ ಮಗನಾದ ಶೆಬ ಅಲ್ಲಿದ್ದನು. ಇವನು ದುಷ್ಟನಾಗಿದ್ದನು; ಬೆನ್ಯಾಮೀನ್ ಕುಲದವನಾಗಿದ್ದ ಇವನು, ತುತ್ತೂರಿಯನ್ನು ಊದುತ್ತಾ, “ದಾವೀದನಲ್ಲಿ ನಮ್ಮ ಪಾಲು ಏನೂ ಇಲ್ಲ. ಇಷಯನ ಮಗನಲ್ಲಿ ನಮಗೇನೂ ಇಲ್ಲ. ನಾವೆಲ್ಲ, ಅಂದರೆ ಇಸ್ರೇಲರೆಲ್ಲ ನಮ್ಮನಮ್ಮ ಗುಡಾರಗಳಿಗೆ ಹೋಗೋಣ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:1
31 ತಿಳಿವುಗಳ ಹೋಲಿಕೆ  

ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ, ಇಸ್ರಾಯೇಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ಅರಸನು ಅವರ ಮಾತನ್ನು ಕೇಳದೆ ಹೋದನೆಂದು ಸಮಸ್ತ ಇಸ್ರಾಯೇಲರು ತಿಳಿದಾಗ, ಜನರು ಅರಸನಿಗೆ ಉತ್ತರವಾಗಿ, “ದಾವೀದನಲ್ಲಿ ನಮಗೆ ಭಾಗವೇನು? ಇಷಯನ ಮಗನಲ್ಲಿ ನಮಗೆ ಬಾಧ್ಯತೆ ಏನು? ಇಸ್ರಾಯೇಲರೇ, ನಿಮ್ಮ ಡೇರೆಗಳಿಗೆ ಹೋಗಿರಿ. ದಾವೀದನೇ, ಈಗ ನಿನ್ನ ಕುಟುಂಬವನ್ನು ನೀನೇ ನೋಡಿಕೋ,” ಎಂದು ಹೇಳಿ ಇಸ್ರಾಯೇಲರೆಲ್ಲರು ತಮ್ಮ ತಮ್ಮ ಡೇರೆಗಳಿಗೆ ಹೋದರು.


ದುಷ್ಟಜನರು ಎದ್ದು ತಮ್ಮ ಪಟ್ಟಣದಲ್ಲಿರುವ ಜನರನ್ನು, “ನೀವು ತಿಳಿಯದಿರುವ ಇತರ ದೇವರುಗಳನ್ನು ಪೂಜಿಸೋಣ ಬನ್ನಿರಿ,” ಎಂದು ಹೇಳಿ ದುರ್ಮಾಗಕ್ಕೆ ಎಳೆದಿದ್ದಾರೆ ಎಂಬ ಸುದ್ದಿ ನಿಮಗೆ ತಿಳಿಸಿದರೆ,


ಆದರೆ ತಮ್ಮ ಮೇಲೆ ನಾನು ಆಳಿಕೆ ಮಾಡುವುದನ್ನು ಇಷ್ಟಪಡದ ಆ ನನ್ನ ವಿರೋಧಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ,’ ಎಂದನು.”


“ಆದರೆ ಅವನ ನಾಡಿನವರೋ ಅವನನ್ನು ದ್ವೇಷಿಸುತ್ತಿದ್ದರು. ‘ಇವನು ನಮ್ಮ ಅರಸನಾಗುವುದು ಬೇಡ,’ ಎಂದು ತಿಳಿಸಲು ಅವನ ಹಿಂದೆಯೇ ಪ್ರತಿನಿಧಿಗಳನ್ನು ಕಳುಹಿಸಿದರು.


ಕೆಂಡಗಳಿಗೆ ಇದ್ದಲು, ಬೆಂಕಿಗೆ ಕಟ್ಟಿಗೆ; ಹಾಗೆಯೇ ಜಗಳವನ್ನು ಕೆರಳಿಸುವಂತೆ ಕಲಹ ಮಾಡುವವನು ಇರುವನು.


ದುಡುಕಿ ವ್ಯಾಜ್ಯಮಾಡುವುದಕ್ಕಾಗಿ ಹೋಗಬೇಡ. ಏಕೆಂದರೆ ನಿನ್ನ ನೆರೆಯವನು ನಿನ್ನನ್ನು ಅವಮಾನ ಮಾಡಿದಾಗ, ನೀನು ಕಡೆಯಲ್ಲಿ ಏನು ಮಾಡುವೆ?


ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


ಯೆಹೋವ ದೇವರೇ, ಎದ್ದು ಅವರನ್ನು ಎದುರಿಸಿ ಕೆಳಗೆ ಕೆಡವಿಬಿಡಿರಿ; ನಿಮ್ಮ ಖಡ್ಗದ ಮೂಲಕ ನನ್ನನ್ನು ದುಷ್ಟರಿಂದ ಕಾಪಾಡಿರಿ.


ಆಗ ಅರಸನಾದ ರೆಹಬ್ಬಾಮನು, ತನ್ನ ತಂದೆ ಸೊಲೊಮೋನನು ಬದುಕಿರುವಾಗ, ಮಂತ್ರಿಗಳಾಗಿದ್ದ ಹಿರಿಯರನ್ನು ಕೂಡಿಸಿ ಅವರಿಗೆ, “ನಾನು ಈ ಜನರಿಗೆ ಪ್ರತ್ಯುತ್ತರವನ್ನು ಕೊಡಲು ನಿಮ್ಮ ಆಲೋಚನೆಯೇನು?” ಎಂದು ಕೇಳಿದನು.


ಆದರೆ ದುಷ್ಟಜನರೆಲ್ಲರು ಕೈಗಳಿಂದ ಕೂಡಿಸದೆ, ಎಸೆದುಬಿಡುವ ಮುಳ್ಳಿನಂತೆ ಇದ್ದಾರೆ.


ಅಬ್ಷಾಲೋಮನು ಇಸ್ರಾಯೇಲಿನ ಸಮಸ್ತ ಗೋತ್ರಗಳಿಗೆ ಗೂಢಚಾರರನ್ನು ಕಳುಹಿಸಿ ಅವರಿಗೆ, “ನೀವು ತುತೂರಿಯ ಶಬ್ದ ಕೇಳಿದಾಗ, ‘ಅಬ್ಷಾಲೋಮನು ಹೆಬ್ರೋನಿನಲ್ಲಿ ಅರಸನಾದನೆಂದು ಘೋಷಿಸಿರಿ’ ಎಂದು ಹೇಳಿರಿ,” ಎಂದನು.


ಆಗ ದಾವೀದನ ಸಂಗಡ ಬಂದ ಮನುಷ್ಯರಲ್ಲಿ ದುಷ್ಟರಾದ ಕೆಲವರು, “ನಮ್ಮ ಸಂಗಡ ಬಾರದೆ ಇದ್ದುದರಿಂದ, ನಾವು ತೆಗೆದುಕೊಂಡು ಬಂದ ಕೊಳ್ಳೆಯ ವಸ್ತುಗಳಲ್ಲಿ ಅವರಿಗೆ ಒಂದನ್ನೂ ಕೊಡುವುದಿಲ್ಲ. ಪ್ರತಿಯೊಬ್ಬನು ತನ್ನ ತನ್ನ ಹೆಂಡತಿ, ಮಕ್ಕಳನ್ನು ಮಾತ್ರವೇ ಕರೆದುಕೊಂಡು ಹೋಗಲಿ,” ಎಂದರು.


ಆದರೆ ಏಲಿಯ ಪುತ್ರರು ಯೆಹೋವ ದೇವರನ್ನು ಗೌರವಿಸದೆ ದುಷ್ಟರಾಗಿದ್ದರು.


ಅವರು ಸಂತೋಷಿಸುತ್ತಿರುವ ವೇಳೆಯಲ್ಲಿ ಆ ಪಟ್ಟಣದ ದುಷ್ಟ ಮನುಷ್ಯರಲ್ಲಿ ಕೆಲವರು ಆ ಮನೆಯನ್ನು ಸುತ್ತಿಕೊಂಡು, ಕದವನ್ನು ಬಡಿದು, ಆ ಮನೆಯ ಯಜಮಾನನಾದ ಮುದುಕನಿಗೆ, “ನಿನ್ನ ಮನೆಗೆ ಬಂದ ಆ ಮನುಷ್ಯನೊಡನೆ ನಮಗೆ ಸಂಗಮವಾಗಬೇಕು, ಹೊರಗೆ ಬಾ,” ಎಂದು ಹೇಳಿದರು.


ಅವನು ಅಲ್ಲಿ ಬಂದಾಗ, ಎಫ್ರಾಯೀಮನ ಬೆಟ್ಟದಲ್ಲಿ ತುತೂರಿಯನ್ನು ಊದಿದನು. ಆಗ ಇಸ್ರಾಯೇಲರು ಅವನ ಸಂಗಡ ಬೆಟ್ಟದಿಂದ ಇಳಿದರು. ಅವನು ಇವರ ಮುಂದೆ ನಡೆದರು.


ಪೇತ್ರನು ಯೇಸುವಿಗೆ, “ನೀವು ನನ್ನ ಪಾದಗಳನ್ನು ಎಂದಿಗೂ ತೊಳೆಯಬಾರದು,” ಎಂದನು. ಯೇಸು ಅವನಿಗೆ, “ನಾನು ನಿನ್ನ ಪಾದಗಳನ್ನು ತೊಳೆಯದಿದ್ದರೆ ನನ್ನೊಂದಿಗೆ ನಿನಗೆ ಪಾಲು ಇಲ್ಲ,” ಎಂದು ಹೇಳಿದರು.


ಬೆನ್ಯಾಮೀನನ ಪುತ್ರರು: ಬೆಳ, ಬೆಕೆರ್, ಅಷ್ಬೇಲ್, ಗೇರಾ, ನಾಮಾನ್, ಏಹೀ, ರೋಷ್, ಮುಪ್ಪೀಮ್, ಹುಪ್ಪೀಮ್ ಮತ್ತು ಆರ್ದ್ ಎಂಬುವರು.


ಸೌಲನು ಇಸ್ರಾಯೇಲರೊಳಗಿಂದ ಮೂರು ಸಾವಿರ ಜನ ಪುರುಷರನ್ನು ಆಯ್ದುಕೊಂಡನು. ಅವರಲ್ಲಿ ಎರಡು ಸಾವಿರ ಜನರು ಅವನೊಂದಿಗೆ ಮಿಕ್ಮಾಷಿನಲ್ಲಿಯು, ಬೇತೇಲಿನ ದಿನ್ನೆ ಪ್ರದೇಶಗಳಲ್ಲಿಯು ಇದ್ದರು. ಒಂದು ಸಾವಿರ ಜನರು ಬೆನ್ಯಾಮೀನ್ಯರ ಗಿಬೆಯದಲ್ಲಿ ಯೋನಾತಾನನ ಜೊತೆಗಿದ್ದರು. ಉಳಿದ ಜನರನ್ನು ಅವನು ಅವರವರ ಮನೆಗಳಿಗೆ ಕಳುಹಿಸಿಬಿಟ್ಟನು.


ಶಿಮ್ಮಿಯು ಅರಸನನ್ನು ದೂಷಿಸುತ್ತಾ, “ಕೊಲೆಗಾರನೇ, ನೀಚನೇ, ಹೊರಟು ಹೋಗು; ಹೊರಟು ಹೋಗು.


ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.


ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.


ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.


‘ನೀನು ದೇವರನ್ನೂ, ಅರಸನನ್ನೂ ದೂಷಿಸಿದಿ,’ ಎಂದು ಅವನಿಗೆ ವಿರೋಧವಾಗಿ ಸಾಕ್ಷಿ ಹೇಳಲು ಅವನ ಮುಂದೆ ದುಷ್ಟರಾದ ಇಬ್ಬರು ಮನುಷ್ಯರನ್ನು ಕೂರಿಸಿರಿ. ತರುವಾಯ ಅವನನ್ನು ಹೊರಗೆ ತೆಗೆದುಕೊಂಡುಹೋಗಿ ಅವನು ಸಾಯುವ ಹಾಗೆ ಕಲ್ಲೆಸೆಯಿರಿ,” ಎಂದು ಬರೆದಿತ್ತು.


ರೂತಳು ಹೊಲದಲ್ಲಿ ಕೊಯ್ಯುವವರ ಹಿಂದೆ ಹೋಗಿ ತೆನೆಗಳನ್ನು ಆಯ್ದುಕೊಳ್ಳುತ್ತಿದ್ದಳು. ಆ ಹೊಲದ ಭಾಗ ಎಲೀಮೆಲೆಕನ ಕುಲದವನಾದ ಬೋವಜನದಾಗಿತ್ತು.


ದಾವೀದನು ಅಬೀಷೈಯನಿಗೂ, ತನ್ನ ಸಮಸ್ತ ಸೇವಕರಿಗೂ, “ನನ್ನ ಹೊಟ್ಟೆಯಲ್ಲಿ ಹುಟ್ಟಿದ ನನ್ನ ಮಗನು ನನ್ನ ಪ್ರಾಣವನ್ನು ಹುಡುಕಿದರೆ, ಎಷ್ಟೋ ಅಧಿಕವಾಗಿ ಬೆನ್ಯಾಮೀನನಾದವನು ಈಗ ಏನು ಮಾಡಿಯಾನು? ಅವನನ್ನು ಬಿಟ್ಟುಬಿಡಿರಿ. ಅವನು ದೂಷಿಸಲಿ. ಏಕೆಂದರೆ ಯೆಹೋವ ದೇವರು ಅವನಿಗೆ ಹಾಗೆಯೇ ಹೇಳಿದ್ದಾರೆ.


ಒಂದು ರಾಜ್ಯ ತನಗೆ ವಿರೋಧವಾಗಿ ವಿಭಾಗಿಸಿಕೊಂಡರೆ ಆ ರಾಜ್ಯವು ನಿಲ್ಲುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು