Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:15 - ಕನ್ನಡ ಸಮಕಾಲಿಕ ಅನುವಾದ

15 ಯೋವಾಬನ ಜೊತೆಗಿದ್ದ ಸೈನಿಕರು ಬಂದು ಆಬೇಲ್ ಬೇತ್ ಮಾಕಾ ಊರಿಗೆ ಮುತ್ತಿಗೆ ಹಾಕಿ, ಪಟ್ಟಣಕ್ಕೆದುರಾಗಿ ಊರು ಗೋಡೆಯವರೆಗೆ ಮಣ್ಣಿನ ದಿಬ್ಬವನ್ನು ಮಾಡಿದರು. ಯೋವಾಬನ ಸಂಗಡದಲ್ಲಿರುವ ಜನರೆಲ್ಲರೂ ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಯೋವಾಬನ ಕಡೆಯವರು ಆಬೇಲ್ ಬೇತ್ಮಾಕಾಕ್ಕೆ ಊರಿಗೆ ಮುತ್ತಿಗೆ ಹಾಕಿ ಅದಕ್ಕೆ ಎದುರಾಗಿ ಊರು ಗೋಡೆಗೆ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ, ಗೋಡೆಯನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಯೋವಾಬನ ಕಡೆಯವರು ಅಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿದರು. ಅದರ ಹೊರಗೋಡೆಯ ಹತ್ತಿರ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯ ಕೆಳಗೆ ಅಗೆಯುತ್ತಾ ಅದನ್ನು ಕೆಡವಿಬಿಡುವುದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಯೋವಾಬನ ಕಡೆಯವರು ಆಬೇಲ್ಬೇತ್ಮಾಕಾ ಊರಿಗೆ ಮುತ್ತಿಗೆಹಾಕಿ ಅದಕ್ಕೆ ಎದುರಾಗಿ ಊರುಗೋಡೆಗೆ ತಗಲುವ ಒಂದು ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಕೆಡವಿಬಿಡುವದಕ್ಕೆ ಪ್ರಯತ್ನಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಯೋವಾಬನು ತನ್ನ ಜನರೊಂದಿಗೆ ಆಬೇಲ್ಬೇತ್ಮಾಕಾ ಊರಿಗೆ ಬಂದನು. ಯೋವಾಬನ ಸೈನ್ಯವು ಪಟ್ಟಣವನ್ನು ಸುತ್ತುಗಟ್ಟಿತು. ಅವರು ನಗರದ ಗೋಡೆಯ ಹತ್ತಿರ ಮಣ್ಣಿನ ದಿಬ್ಬವನ್ನು ಮಾಡಿ ಗೋಡೆಯನ್ನು ಸಮೀಪಿಸಿದರು; ನಂತರ ಆ ಗೋಡೆಯನ್ನು ಬೀಳಿಸುವುದಕ್ಕಾಗಿ ಅದನ್ನು ಹೊಡೆಯಲಾಂಭಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:15
11 ತಿಳಿವುಗಳ ಹೋಲಿಕೆ  

“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ ‘ಅವನು ಈ ಪಟ್ಟಣದೊಳಗೆ ಬರುವುದಿಲ್ಲ; ಅಲ್ಲಿ ಬಾಣವನ್ನು ಎಸೆಯುವುದಿಲ್ಲ; ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು; ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.


“ಇಗೋ, ಪರ್ವತಗಳು ಪಟ್ಟಣದ ಬಳಿಗೆ ಅದನ್ನು ಹಿಡಿಯುವ ಹಾಗೆ ಬಂದಿವೆ. ಪಟ್ಟಣವು ಅದಕ್ಕೆ ವಿರೋಧವಾಗಿ ಯುದ್ಧಮಾಡುವ ಬಾಬಿಲೋನಿಯರ ಕೈಯಲ್ಲಿ ಖಡ್ಗ, ಕ್ಷಾಮ, ವ್ಯಾಧಿಗಳ ಮೂಲಕವಾಗಿ ಒಪ್ಪಿಸಲಾಗಿದೆ. ನೀನು ಹೇಳಿದ್ದು ಉಂಟಾಯಿತು. ಇಗೋ, ನೀನು ಅದನ್ನು ನೋಡುತ್ತೀ.


ನಿನ್ನ ಶತ್ರುಗಳು ನಿನ್ನ ಸುತ್ತಲೂ ಅಡ್ಡಗೋಡೆಯನ್ನು ಕಟ್ಟಿ, ಎಲ್ಲಾ ಕಡೆಯಲ್ಲಿಯೂ ನಿನ್ನನ್ನು ಮುತ್ತಿಗೆ ಹಾಕಿ ಪ್ರತಿಯೊಂದು ಕಡೆಯಿಂದಲೂ ನಿನ್ನನ್ನು ಬಂಧಿಸುವ ದಿನಗಳು ಬರುವವು.


ಆ ನಕ್ಷೆಯ ಸುತ್ತಲು ದಿಬ್ಬ ಹಾಕಿ, ಒಡ್ಡು ಕಟ್ಟಿ, ಪಾಳೆಯಗಳನ್ನು ಮಾಡಿ, ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ, ಅದನ್ನು ಮುತ್ತಿಗೆ ಹಾಕು.


ದಿಬ್ಬಗಳಿಂದಲೂ ಖಡ್ಗದಿಂದಲೂ ಕೆಡವಿರುವ ಈ ಪಟ್ಟಣದ ಮನೆಗಳ ವಿಷಯವಾಗಿವೂ ಯೆಹೂದದ ಅರಸರ ಅರಮನೆಗಳ ವಿಷಯವಾಗಿಯೂ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೀಗೆ ಹೇಳುತ್ತಾರೆ.


ಏಕೆಂದರೆ, ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ, “ಚೀಯೋನ್ ಸುತ್ತಲಿರುವ ಮರಗಳನ್ನು ಕಡಿಯಿರಿ. ಯೆರೂಸಲೇಮಿಗೆ ವಿರೋಧವಾಗಿ ದಿಬ್ಬ ಹಾಕಿರಿ. ಇದೇ ನೀವು ದಂಡಿಸತಕ್ಕ ಪಟ್ಟಣವು. ಅವಳಲ್ಲಿ ಬರೀ ದಬ್ಬಾಳಿಕೆಯೇ ತುಂಬಿದೆ.


“ಆದ್ದರಿಂದ ಯೆಹೋವ ದೇವರು ಅಸ್ಸೀರಿಯದ ಅರಸನನ್ನು ಕುರಿತು ಹೀಗೆ ಹೇಳುತ್ತಾರೆ: “ಅವನು ಈ ಪಟ್ಟಣದೊಳಗೆ ಬರುವುದಿಲ್ಲ. ಅಲ್ಲಿ ಬಾಣವನ್ನು ಎಸೆಯುವುದಿಲ್ಲ. ಗುರಾಣಿಯೊಂದಿಗೆ ಅದರ ಮುಂದೆ ಬರಲಾರನು. ಅದಕ್ಕೆ ವಿರೋಧವಾಗಿ ಮುತ್ತಿಗೆ ಹಾಕಲು ದಿಬ್ಬವನ್ನು ನಿರ್ಮಿಸುವುದಿಲ್ಲ.


ಇಸ್ರಾಯೇಲಿನ ಅರಸನಾದ ಪೆಕಹನ ಕಾಲದಲ್ಲಿ ಅಸ್ಸೀರಿಯದ ಅರಸನಾದ ತಿಗ್ಲತ್ಪಿಲೆಸೆರನು ಬಂದು, ಇಯ್ಯೋನ್, ಆಬೇಲ್ ಬೇತ್ ಮಾಕಾ, ಯಾನೋಹ, ಕೆದೆಷ್, ಹಾಚೋರ್, ಗಿಲ್ಯಾದ್, ಗಲಿಲಾಯ ಮತ್ತು ನಫ್ತಾಲಿಯ ಎಲ್ಲಾ ಭೂಮಿಯನ್ನು ವಶಮಾಡಿಕೊಂಡು, ಜನರನ್ನು ಸೆರೆಯಾಗಿ ಅಸ್ಸೀರಿಯಾ ದೇಶಕ್ಕೆ ಒಯ್ದನು.


ಹಾಗೆಯೇ ಬೆನ್ಹದದನು ಅರಸನಾದ ಆಸನ ಮಾತನ್ನು ಕೇಳಿ, ಇಸ್ರಾಯೇಲಿನ ಪಟ್ಟಣಗಳಿಗೆ ವಿರೋಧವಾಗಿ ತನ್ನ ಸೈನ್ಯಾಧಿಪತಿಗಳನ್ನು ಕಳುಹಿಸಿದನು. ಇಯ್ಯೋನ್, ದಾನ್, ಆಬೇಲ್ ಬೇತ್ ಮಾಕಾ ಹಾಗೂ ಸಮಸ್ತ ಕಿನ್ನೆರೆತ್, ಸಮಸ್ತ ನಫ್ತಾಲಿ ಪ್ರಾಂತ ಇವುಗಳನ್ನು ಹಾಳುಮಾಡಿದರು.


ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.


ಒಂದು ಕಾಲದಲ್ಲಿ ಒಂದು ಸಣ್ಣ ನಗರವಿತ್ತು, ಅದರಲ್ಲಿ ಕೆಲವೇ ಜನರಿದ್ದರು. ಆಗ ಅಲ್ಲಿ ಒಬ್ಬ ಮಹಾ ಅರಸನು ಬಂದು ಅದನ್ನು ಮುತ್ತಿಗೆ ಹಾಕಿ, ಅದಕ್ಕೆ ಎದುರಾಗಿ ದೊಡ್ಡ ಕೊತ್ತಲುಗಳನ್ನು ಕಟ್ಟಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು