2 ಸಮುಯೇಲ 20:16 - ಕನ್ನಡ ಸಮಕಾಲಿಕ ಅನುವಾದ16 ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬಳು ಹೆಂಗಸು ಅವರಿಗೆ, “ಕೇಳಿರಿ, ದಯವಿಟ್ಟು ಕೇಳಿರಿ. ಯೋವಾಬನೊಂದಿಗೆ ನಾನು ಮಾತನಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ” ಎಂದು ಕೂಗಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಮಹಿಳೆ ಅವರಿಗೆ, “ಕೇಳಿ, ದಯವಿಟ್ಟು ಕೇಳಿ; ಯೋವಾಬನು ಮಾತಾಡುವುದಕ್ಕಾಗಿ ನನ್ನ ಬಳಿಗೆ ಬರಬೇಕೆಂದು ಹೇಳಿ,” ಎಂದು ಕೂಗಿದಳು. ಯೋವಾಬನು ಬಂದನು. ಆ ಸ್ತ್ರೀ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ಆಗ ಆ ಊರಿನ ಬುದ್ಧಿವಂತೆಯಾದ ಒಬ್ಬ ಹೆಂಗಸು ಅವರಿಗೆ - ಕೇಳಿರಿ, ದಯವಿಟ್ಟು ಕೇಳಿರಿ; ಯೋವಾಬನು ಮಾತಾಡುವದಕ್ಕೋಸ್ಕರ ನನ್ನ ಬಳಿಗೆ ಬರಬೇಕೆಂದು ಹೇಳಿರಿ ಎಂದು ಕೂಗಿದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ಆ ನಗರದ ಬುದ್ಧಿವಂತೆ ಸ್ತ್ರೀಯೊಬ್ಬಳು ಪಟ್ಟಣದೊಳಗಿಂದ ಜೋರಾಗಿ ಕೂಗುತ್ತಾ, “ನನ್ನ ಮಾತನ್ನು ಕೇಳಿ. ಯೋವಾಬನನ್ನು ಇಲ್ಲಿಗೆ ಬರಲು ಹೇಳಿ. ನಾನು ಅವನ ಜೊತೆಯಲ್ಲಿ ಮಾತಾಡಬೇಕಾಗಿದೆ” ಎಂದು ಹೇಳಿದಳು. ಅಧ್ಯಾಯವನ್ನು ನೋಡಿ |