Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:21 - ಕನ್ನಡ ಸಮಕಾಲಿಕ ಅನುವಾದ

21 ಕಾರ್ಯವು ಹಾಗಲ್ಲ. ಏಕೆಂದರೆ ಬಿಕ್ರಿಯ ಮಗನಾದ ಶೆಬನೆಂಬ ಹೆಸರುಳ್ಳ ಎಫ್ರಾಯೀಮ್ ಬೆಟ್ಟದವನಾದ ಒಬ್ಬ ಮನುಷ್ಯನು, ಅರಸನಾದ ದಾವೀದನಿಗೆ ವಿರೋಧವಾಗಿ ತನ್ನ ಕೈಯನ್ನು ಎತ್ತಿದ್ದಾನೆ. ನೀವು ಅವನೊಬ್ಬನನ್ನೇ ಒಪ್ಪಿಸಿಕೊಡಿರಿ. ಆಗ ನಾನು ಪಟ್ಟಣವನ್ನು ಬಿಟ್ಟು ಹೋಗುವೆನು,” ಎಂದನು. ಆ ಸ್ತ್ರೀಯು ಯೋವಾಬನಿಗೆ, “ಅವನ ತಲೆಯು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು,” ಎಂದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಎಫ್ರಾಯೀಮಿನ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬುವವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನ್ನನ್ನೇ ಒಪ್ಪಿಸಿರಿ, ನಾನು ಊರನ್ನು ಬಿಟ್ಟು ಹೋಗುತ್ತೇನೆ” ಎಂದು ಹೇಳಿದನು. ಆ ಸ್ತ್ರೀಯು ಯೋವಾಬನಿಗೆ, “ನೋಡು ಈಗಲೇ ಅವನ ತಲೆಯು ಗೋಡೆಯ ಕಿಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವುದು” ಎಂದು ಉತ್ತರ ಕೊಟ್ಟು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾವು ಬಂದಿರುವ ಸಂಗತಿಯೇ ಬೇರೆ; ಎಫ್ರಯಿಮ್ ಪರ್ವತ ಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನು ಒಪ್ಪಿಸಿಬಿಡಿ; ನಾನು ಊರನ್ನು ಬಿಟ್ಟು ಹೋಗುತ್ತೇನೆ,” ಎಂದು ಹೇಳಿದನು. ಅದಕ್ಕೆ ಆ ಸ್ತ್ರೀ, “ನೋಡಿ, ಈಗಲೇ ಅವನ ತಲೆಯನ್ನು ಗೋಡೆಯ ಕಿಂಡಿಯಿಂದ ನಿಮ್ಮ ಕಡೆಗೆ ಎಸೆಯಲಾಗುವುದು,” ಎಂದು ಉತ್ತರಕೊಟ್ಟು ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದಿಂದ ಈ ಸಂಗತಿಯನ್ನು ತಿಳಿಸಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಸಂಗತಿಯು ಹೀಗಿರುವದಿಲ್ಲ; ಎಫ್ರಾಯೀಮ್ ಪರ್ವತಪ್ರದೇಶದ ಬಿಕ್ರೀಯ ಮಗನಾದ ಶೆಬನೆಂಬವನು ಅರಸನಾದ ದಾವೀದನಿಗೆ ವಿರೋಧವಾಗಿ ಕೈಯೆತ್ತಿದ್ದಾನೆ. ಅವನನ್ನೇ ಒಪ್ಪಿಸಿರಿ; ನಾನು ಊರನ್ನು ಬಿಟ್ಟುಹೋಗುತ್ತೇನೆ ಎಂದು ಹೇಳಿದನು. ಅದಕ್ಕೆ ಸ್ತ್ರೀಯು - ನೋಡು, ಈಗಲೇ ಅವನ ತಲೆಯು ಗೋಡೆಯಕಂಡಿಯಿಂದ ನಿನ್ನ ಕಡೆಗೆ ಒಗೆಯಲ್ಪಡುವದು ಎಂದು ಉತ್ತರಕೊಟ್ಟು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಆದರೆ ಎಫ್ರಾಯೀಮ್ ಬೆಟ್ಟಪ್ರದೇಶದ ಒಬ್ಬ ಮನುಷ್ಯನಿದ್ದಾನೆ ಅವನನ್ನು ಶೆಬ ಎನ್ನುತ್ತಾರೆ. ಅವನು ಬಿಕ್ರೀಯನ ಮಗನು. ಅವನು ರಾಜನಾದ ದಾವೀದನ ವಿರುದ್ಧ ದಂಗೆ ಎದ್ದಿದ್ದಾನೆ. ನೀನು ಅವನನ್ನು ನನ್ನ ಬಳಿಗೆ ತಂದು ಒಪ್ಪಿಸಿದರೆ, ನಾನು ಈ ನಗರವನ್ನು ಬಿಟ್ಟುಹೋಗುತ್ತೇನೆ” ಎಂದು ಉತ್ತರಿಸಿದನು. ಅವಳು ಯೋವಾಬನಿಗೆ, “ಸರಿ, ಅವನ ತಲೆಯನ್ನು ಗೋಡೆಯ ಮೇಲಿನಿಂದ ನಿನ್ನ ಕಡೆಗೆ ಎಸೆಯಲಾಗುವುದು” ಎಂದು ಹೇಳಿದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:21
17 ತಿಳಿವುಗಳ ಹೋಲಿಕೆ  

ಇಸ್ರಾಯೇಲನನ್ನು ಅವನ ನಿವಾಸಕ್ಕೆ ತಿರುಗಿ ಬರಮಾಡುತ್ತೇನೆ; ಅವನು ಕರ್ಮೆಲಿನಲ್ಲಿಯೂ, ಬಾಷಾನಿನಲ್ಲಿಯೂ ಮೇಯುವನು; ಅವನ ಪ್ರಾಣವು ಎಫ್ರಾಯೀಮ್ ಬೆಟ್ಟದಲ್ಲಿಯೂ, ಗಿಲ್ಯಾದಿನಲ್ಲಿಯೂ ತೃಪ್ತಿ ಹೊಂದುವುದು.”


ಏಕೆಂದರೆ ಒಂದು ಶಬ್ದವು ದಾನಿನಿಂದ ಪ್ರಕಟಮಾಡುತ್ತದೆ; ಎಫ್ರಾಯೀಮಿನ ಬೆಟ್ಟದಿಂದ ಆಪತ್ತನ್ನು ತಿಳಿಯಪಡಿಸುತ್ತದೆ.


ಈ ಪತ್ರವು ಅವರ ಬಳಿಗೆ ಬಂದಾಗ, ಅವರು ರಾಜಪುತ್ರರನ್ನು ಹಿಡಿದು, ಎಪ್ಪತ್ತು ಮಂದಿಯನ್ನು ಕೊಂದು, ಅವರ ತಲೆಗಳನ್ನು ಪುಟ್ಟಿಗಳಲ್ಲಿ ಹಾಕಿ ಇಜ್ರೆಯೇಲ್ ಪಟ್ಟಣದಲ್ಲಿದ್ದ ಯೇಹುವಿನ ಬಳಿಗೆ ಕಳುಹಿಸಿದರು.


ಅದಕ್ಕೆ ಗೇಹಜಿಯು, “ಎಲ್ಲಾ ಕ್ಷೇಮ. ಪ್ರವಾದಿಗಳ ಮಂಡಳಿಯಲ್ಲಿಯ ಇಬ್ಬರು ಯುವಕರು ಎಫ್ರಾಯೀಮ್ ಬೆಟ್ಟದಿಂದ ಈಗಲೇ ನನ್ನ ಬಳಿಗೆ ಬಂದಿದ್ದಾರೆ. ನೀನು ದಯಮಾಡಿ ಅವರಿಗೆ ಮೂರು ಸಾವಿರ ಬೆಳ್ಳಿ ನಾಣ್ಯಗಳನ್ನೂ, ಎರಡು ಜೊತೆ ಬಟ್ಟೆಗಳನ್ನೂ ಕೊಡಬೇಕೆಂದು ನಿನಗೆ ಹೇಳು ಎಂದು ನನ್ನ ಯಜಮಾನನು ಕಳುಹಿಸಿದ್ದಾನೆ,” ಎಂದನು.


ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಆದರೆ ದಾವೀದನು ಅಬೀಷೈಯನಿಗೆ, “ಅವನನ್ನು ಸಂಹರಿಸಬೇಡ. ಏಕೆಂದರೆ ಅಪರಾಧವಿಲ್ಲದೆ ಯೆಹೋವ ದೇವರ ಅಭಿಷಿಕ್ತನ ವಿರೋಧವಾಗಿ ಕೈ ಹಾಕುವವನು ಯಾರು?” ಎಂದನು.


ದಾವೀದನು ತನ್ನ ಜನರಿಗೆ, “ಅವನು ಯೆಹೋವ ದೇವರ ಅಭಿಷಿಕ್ತನಾದದರಿಂದ ನನ್ನ ಕೈ ಅವನಿಗೆ ವಿರೋಧವಾಗಿ ಚಾಚಿ, ನನ್ನ ಒಡೆಯನಿಗೆ ಈ ಕಾರ್ಯ ಮಾಡುವುದನ್ನು ಯೆಹೋವ ದೇವರು ತಡೆಯಲಿ,” ಎಂದನು.


ಇದಲ್ಲದೆ ಗಿದ್ಯೋನನು ಎಫ್ರಾಯೀಮ್ ಬೆಟ್ಟದಲ್ಲೆಲ್ಲಾ ದೂತರನ್ನು ಕಳುಹಿಸಿ, “ನೀವು ಮಿದ್ಯಾನ್ಯರಿಗೆ ಎದುರಾಗಿ ಇಳಿದು ಹೋಗಿ, ಬೇತ್‌ಬಾರದವರೆಗಿರುವ ನೀರನ್ನೂ, ಯೊರ್ದನನ್ನೂ ಅವರಿಗೆ ಮುಂದಾಗಿ ಹಿಡಿಯಿರಿ,” ಎಂದು ಹೇಳಿದನು. ಹಾಗೆಯೇ ಎಫ್ರಾಯೀಮನ ಜನರೆಲ್ಲರೂ ಕೂಡಿಕೊಂಡು, ಬೇತ್‌ಬಾರದವರೆಗೆ ನೀರನ್ನೂ, ಯೊರ್ದನನ್ನೂ ಹಿಡಿದರು.


ಅವನನ್ನು ಎಫ್ರಾಯೀಮನ ಬೆಟ್ಟದಲ್ಲಿ ಗಾಷ್ ಪರ್ವತದ ಉತ್ತರ ದಿಕ್ಕಿನಲ್ಲಿರುವ ಅವನ ಬಾಧ್ಯತೆಯ ಮೇರೆಯಾದ ತಿಮ್ನತ್ ಹೆರೆಸ್‌ನಲ್ಲಿ ಹೂಳಿಟ್ಟರು.


ಆರೋನನ ಮಗ ಎಲಿಯಾಜರನೂ ಮರಣಹೊಂದಿದನು. ಅವನನ್ನು ಅವನ ಮಗ ಫೀನೆಹಾಸನಿಗೆ ಎಫ್ರಾಯೀಮ್ ಬೆಟ್ಟದ ದೇಶದಲ್ಲಿ ಕೊಡಲಾದ ಗಿಬೆಯದಲ್ಲಿ ಸಮಾಧಿಮಾಡಿದರು.


ಆಗ ಇಸ್ರಾಯೇಲರೆಲ್ಲರೂ ದಾವೀದನನ್ನು ಬಿಟ್ಟು ಸರಿದು, ಬಿಕ್ರಿಯ ಮಗ ಶೆಬನ ಹಿಂದೆ ಹೋದರು. ಆದರೆ ಯೊರ್ದನಿನಿಂದ ಯೆರೂಸಲೇಮಿನವರೆಗೂ ಇರುವ ಯೆಹೂದ ಜನರು ತಮ್ಮ ಅರಸನನ್ನು ಅಂಟಿಕೊಂಡಿದ್ದರು.


ಅದಕ್ಕೆ ಯೋವಾಬನು ಉತ್ತರವಾಗಿ, “ನಾನು ಅದನ್ನು ಎಂದಿಗೂ ಮಾಡುವುದಿಲ್ಲ. ನುಂಗುವುದನ್ನೂ ಹಾಳುಮಾಡುವುದನ್ನೂ ನಾನು ಎಂದಿಗೂ ಮಾಡುವುದಿಲ್ಲ.


ಇದಲ್ಲದೆ, ಅರಸನಾದ ಸೊಲೊಮೋನನಿಗೆ ವಿರೋಧವಾಗಿ ದಂಗೆ ಎದ್ದವರಲ್ಲಿ ಅವನ ಸೇವಕನೂ ಚರೇದ ಪಟ್ಟಣದ ಎಫ್ರಾಯೀಮ್ಯನಾದ ನೆಬಾಟನ ಮಗ ಯಾರೊಬ್ಬಾಮನು ಇದ್ದನು, ಚೆರೂಯಳೆಂಬ ವಿಧವೆಯು ಅವನ ತಾಯಿಯು.


ಅಬೀಮೆಲೆಕನು ಮರಣಹೊಂದಿದ್ದನ್ನು ಇಸ್ರಾಯೇಲರು ಕಂಡಾಗ, ಅವರು ತಮ್ಮ ತಮ್ಮ ಮನೆಗಳಿಗೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು