Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:22 - ಕನ್ನಡ ಸಮಕಾಲಿಕ ಅನುವಾದ

22 ಆ ಸ್ತ್ರೀಯು ತನ್ನ ಜ್ಞಾನದಿಂದ ಸಮಸ್ತ ಜನರ ಬಳಿಗೆ ಹೋದಳು. ಆಗ ಅವರು ಬಿಕ್ರಿಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನ ಬಳಿ ಹಾಕಿದರು. ಅವನು ತುತೂರಿಯನ್ನು ಊದಿದ್ದರಿಂದ, ಅವರು ಪಟ್ಟಣದಿಂದ ಚದರಿ ಪ್ರತಿ ಮನುಷ್ಯನೂ ತಮ್ಮ ತಮ್ಮ ಮನೆಗಳಿಗೆ ಹೋದರು. ಯೋವಾಬನು ಯೆರೂಸಲೇಮಿನಲ್ಲಿರುವ ಅರಸನ ಬಳಿಗೆ ಹಿಂದಿರುಗಿ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿ ಯೋವಾಬನಿದ್ದಲ್ಲಿಗೆ ಎಸೆದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇಮಿನಲ್ಲಿದ್ದ ಅರಸನ ಬಳಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅವರು ಬಿಕ್ರೀಯ ಮಗ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ಕಹಳೆಯನ್ನು ಊದಿಸಿದನು. ಅವನ ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಜೆರುಸಲೇಮಿನಲ್ಲಿದ್ದ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ತನ್ನ ಜನರ ಬಳಿಗೆ ಹೋಗಿ ಅವರಿಗೆ ವಿವೇಕದೊಡನೆ ಈ ಸಂಗತಿಯನ್ನು ತಿಳಿಸಿದಳು. ಅವರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕಡಿದು ಯೋವಾಬನಿದ್ದಲ್ಲಿಗೆ ಬಿಸಾಡಿದರು. ಕೂಡಲೆ ಅವನು ತುತೂರಿಯನ್ನು ಊದಿಸಿದನು; ಜನರು ಆ ಪಟ್ಟಣವನ್ನು ಬಿಟ್ಟು ತಮ್ಮ ತಮ್ಮ ನಿವಾಸಗಳಿಗೆ ಹೋದರು. ಯೋವಾಬನು ಹಿಂದಿರುಗಿ ಯೆರೂಸಲೇವಿುನಲ್ಲಿದ್ದ ಅರಸನ ಬಳಿಗೆ ಬಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ನಂತರ ಅವಳು ನಗರದ ಎಲ್ಲ ಜನರೊಂದಿಗೆ ಬಹಳ ಜಾಣತನದಿಂದ ಮಾತನಾಡಿದಳು. ಆಗ ಜನರು ಬಿಕ್ರೀಯ ಮಗನಾದ ಶೆಬನ ತಲೆಯನ್ನು ಕತ್ತರಿಸಿಹಾಕಿ ಅದನ್ನು ನಗರದ ಗೋಡೆಯಿಂದಾಚೆಗೆ ಯೋವಾಬನ ಕಡೆಗೆ ಎಸೆದರು. ಆ ಕೂಡಲೇ ಯೋವಾಬನು ತುತ್ತೂರಿಯನ್ನು ಊದಿಸಿದನು. ಸೈನ್ಯವು ನಗರವನ್ನು ಬಿಟ್ಟುಹೋಯಿತು. ಪ್ರತಿಯೊಬ್ಬರೂ ತಮ್ಮತಮ್ಮ ಮನೆಗಳಿಗೆ ಹಿಂತಿರುಗಿದರು. ಯೋವಾಬನು ಜೆರುಸಲೇಮಿನಲ್ಲಿದ್ದ ರಾಜನ ಬಳಿಗೆ ಹಿಂದಿರುಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:22
10 ತಿಳಿವುಗಳ ಹೋಲಿಕೆ  

ಪಟ್ಟಣದ ಹತ್ತು ಮಂದಿ ಅಧಿಕಾರಿಗಳ ಸ್ಥಿರತೆಗಿಂತ, ಜ್ಞಾನವು ಜ್ಞಾನಿಯನ್ನು ಹೆಚ್ಚಾಗಿ ಸ್ಥಿರಪಡಿಸುತ್ತದೆ.


ಬೆನ್ಯಾಮೀನ್ಯನಾದ ಬಿಕ್ರಿಯ ಮಗ ಶೆಬನೆಂಬ ಹೆಸರುಳ್ಳ ಒಬ್ಬ ನೀಚ ವ್ಯಕ್ತಿ ಅಲ್ಲಿದ್ದನು. ಅವನು ತುತೂರಿಯನ್ನು ಊದಿ ಹೀಗಂದನು, “ನಮಗೆ ದಾವೀದನಲ್ಲಿ ಪಾಲಿಲ್ಲ, ಇಷಯನ ಮಗನ ಬಳಿಯಲ್ಲಿ ನಮಗೆ ಬಾಧ್ಯತೆಯೂ ಇಲ್ಲ. ಇಸ್ರಾಯೇಲರೇ, ನಿಮ್ಮ ನಿಮ್ಮ ಗುಡಾರಗಳಿಗೆ ಹೋಗಿರಿ.”


ಏಕೆಂದರೆ ದುಷ್ಟ ಕೆಲಸಕ್ಕೆ ದಂಡನೆಯು ಕೂಡಲೇ ಆಗದಿರುವುದರಿಂದ ಮನುಷ್ಯರ ಹೃದಯವು ಅವರನ್ನು ಕೆಟ್ಟದ್ದು ಮಾಡುವ ಯುಕ್ತಿಯಲ್ಲಿಯೇ ತುಂಬಿರುವುದು.


ಆಗ ಜ್ಞಾನವುಳ್ಳ ಒಬ್ಬ ಸ್ತ್ರೀಯು ಪಟ್ಟಣದಲ್ಲಿಂದ, “ಕೇಳಿರಿ, ಕೇಳಿರಿ. ನಾನು ಯೋವಾಬನ ಸಂಗಡ ಮಾತನಾಡುವ ಹಾಗೆ ಅವನು ಇಲ್ಲಿಗೆ ಸಮೀಪಿಸಲು ಬರಹೇಳಿರಿ,” ಎಂದು ಕೂಗಿ ಬೇಡಿಕೊಂಡಳು.


ಆಗ ಯೋವಾಬನು ತುತೂರಿಯನ್ನು ಊದಿದ್ದರಿಂದ, ಸೈನಿಕರು ಇಸ್ರಾಯೇಲರನ್ನು ಹಿಂದಟ್ಟುವುದನ್ನು ಬಿಟ್ಟು ಹಿಂದಿರುಗಿದರು. ಏಕೆಂದರೆ ಯೋವಾಬನು ಜನರನ್ನು ತಡೆದನು.


ಹೀಗೆ ಯೋವಾಬನು ತುತೂರಿಯನ್ನು ಊದಿದನು. ಆಗ ಸೈನಿಕರೆಲ್ಲರೂ ನಿಂತರು. ಇಸ್ರಾಯೇಲರನ್ನು ಪುನಃ ಹಿಂದಟ್ಟಲಿಲ್ಲ, ಯುದ್ಧವು ನಿಂತಿತು.


ಅವರು ಅಬ್ಷಾಲೋಮನನ್ನು ತೆಗೆದುಕೊಂಡು, ಅಡವಿಯಲ್ಲಿರುವ ಒಂದು ದೊಡ್ಡ ಗುಂಡಿಯಲ್ಲಿ ಹಾಕಿ, ಅವನ ಮೇಲೆ ದೊಡ್ಡ ಕಲ್ಲಿನ ಕುಪ್ಪೆಯನ್ನು ಹಾಕಿದರು. ಆದರೆ ಇಸ್ರಾಯೇಲರೆಲ್ಲರೂ ತಮ್ಮ ಗುಡಾರಗಳಿಗೆ ಓಡಿಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು