Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 20:23 - ಕನ್ನಡ ಸಮಕಾಲಿಕ ಅನುವಾದ

23 ಯೋವಾಬನು ಇಸ್ರಾಯೇಲಿನ ಸಮಸ್ತ ಸೈನ್ಯದ ಅಧಿಪತಿಯಾಗಿದ್ದನು. ಯೆಹೋಯಾದಾವನ ಮಗ ಬೆನಾಯನು ಕೆರೇತ್ಯರ ಮೇಲೆಯೂ ಪೆಲೇತ್ಯರ ಮೇಲೆಯೂ ಮುಖ್ಯಸ್ಥನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೋವಾಬನು ಇಸ್ರಾಯೇಲರ ಮುಖ್ಯ ಸೇನಾಧಿಪತಿ. ಯೆಹೋಯಾದಾವನ ಮಗನಾದ ಬೆನಾಯನು ಕೆರೇತ್ಯ ಮತ್ತು ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಯೋವಾಬನು ಇಸ್ರಯೇಲರ ಮುಖ್ಯಸೇನಾಪತಿ. ಯೆಹೋಯಾದಾವನ ಮಗ ಬೆನಾಯಾಯನು ‘ಕೆರೇತ್ಯ’ ಹಾಗು ‘ಪೆಲೇತ್ಯ’ ಎಂಬ ಕಾವಲುದಂಡುಗಳ ಅಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೋವಾಬನು ಇಸ್ರಾಯೇಲ್ಯರ ಮುಖ್ಯ ಸೇನಾಪತಿ; ಯೆಹೋಯಾದಾವನ ಮಗನಾದ ಬೆನಾಯಾಯನು ಕೆರೇತ್ಯ, ಪೆಲೇತ್ಯ ಎಂಬ ಕಾವಲುದಂಡುಗಳ ಅಧಿಪತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೋವಾಬನು ಇಸ್ರೇಲಿನ ಸೈನ್ಯಕ್ಕೆಲ್ಲ ಮುಖ್ಯ ಸೇನಾಪತಿಯಾಗಿದ್ದನು. ಕೆರೇತ್ಯರಿಗೆ ಮತ್ತು ಪೆಲೇತ್ಯರಿಗೆ ಯೆಹೋಯಾದಾವನ ಮಗನಾದ ಬೆನಾಯನು ಅಧಿಪತಿಯಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 20:23
10 ತಿಳಿವುಗಳ ಹೋಲಿಕೆ  

ಕಬ್ಜಯೇಲನ ಪರಾಕ್ರಮಶಾಲಿಯ ಮೊಮ್ಮಗನೂ ಯೆಹೋಯಾದಾವನ ಮಗನೂ ಆದ ಬೆನಾಯನು ಅನೇಕ ಶೂರ ಕೃತ್ಯಗಳನ್ನು ಮಾಡಿದನು. ಅವನು ಬಲಶಾಲಿಯಾದ ಮೋವಾಬಿನ ಇಬ್ಬರು ಮನುಷ್ಯರನ್ನು ಕೊಂದನು. ಇದಲ್ಲದೆ ಹಿಮಕಾಲದಲ್ಲಿ ಕುಣಿಯೊಳಗೆ ಇಳಿದು ಒಂದು ಸಿಂಹವನ್ನು ಕೊಂದುಬಿಟ್ಟನು.


ಏಳನೆಯ ವರ್ಷದಲ್ಲಿ ಯೆಹೋಯಾದಾವನು ಶತಾಧಿಪತಿಯಾದವರನ್ನೂ, ಕಾರಿ ಎಂಬ ಸಿಪಾಯಿಗಳ ಅಧಿಪತಿಗಳನ್ನೂ ಕಾವಲುಗಾರರ ಸಹಿತವಾಗಿ ಕರೆಯಿಸಿ, ತನ್ನ ಬಳಿಗೆ ಯೆಹೋವ ದೇವರ ಆಲಯಕ್ಕೆ ಕರೆದುಕೊಂಡು ಬಂದನು. ಅವರ ಸಂಗಡ ಒಡಂಬಡಿಕೆಯನ್ನು ಮಾಡಿ, ಯೆಹೋವ ದೇವರ ಆಲಯದಲ್ಲಿ ಅವರಿಂದ ಪ್ರಮಾಣ ತೆಗೆದುಕೊಂಡು, ಅನಂತರ ಅವನಿಗೆ ಅರಸನ ಮಗನನ್ನು ತೋರಿಸಿದನು.


ದಾವೀದನು ಸಮಸ್ತ ಇಸ್ರಾಯೇಲಿನ ಮೇಲೆ ಆಳುತ್ತಾ ತನ್ನ ಸಮಸ್ತ ಜನರಿಗೂ ನೀತಿ ನ್ಯಾಯಗಳಿಂದ ನಡೆಸುತ್ತಿದ್ದನು.


ಹಾಗೆಯೇ ಅವನ ಹಿಂದೆ ಯೋವಾಬನ ಜನರೂ, ಕೆರೇತ್ಯರೂ, ಪೆಲೇತ್ಯರೂ, ಸಮಸ್ತ ಪರಾಕ್ರಮಶಾಲಿಗಳೂ ಅಬೀಷೈಯನ ನೇತೃತ್ವದಲ್ಲಿ ಬಿಕ್ರಿಯ ಮಗ ಶೆಬನನ್ನು ಹಿಂದಟ್ಟಲು ಯೆರೂಸಲೇಮಿನಿಂದ ಹೊರಟರು.


ಅದೋನೀಯನು ಚೆರೂಯಳ ಮಗ ಯೋವಾಬ, ಯಾಜಕ ಅಬಿಯಾತರನ ಜೊತೆ ಸೇರಿ ಮಾತುಕತೆ ಮಾಡಿದನು. ಅವರು ಅದೋನೀಯನನ್ನು ಹಿಂಬಾಲಿಸಿ, ಅವನಿಗೆ ಸಹಾಯಕರಾಗಿದ್ದರು.


ಆದರೆ ಯಾಜಕನಾದ ಚಾದೋಕನೂ, ಯೆಹೋಯಾದಾವನ ಮಗ ಬೆನಾಯನೂ, ಪ್ರವಾದಿಯಾದ ನಾತಾನನೂ, ಶಿಮ್ಮಿಯೂ, ರೇಯಿಯೂ, ದಾವೀದನ ಪರಾಕ್ರಮಶಾಲಿಗಳೂ ಅದೋನೀಯನ ಸಂಗಡ ಹೋಗಲಿಲ್ಲ.


ಹೀಗೆ ಅರಸನಾದ ಸೊಲೊಮೋನನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು