Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:10 - ಕನ್ನಡ ಸಮಕಾಲಿಕ ಅನುವಾದ

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಗೋಣಿತಟ್ಟನ್ನು ತೆಗೆದುಕೊಂಡುಹೋಗಿ, ಗುಡ್ಡದ ಮೇಲೆ ಅದನ್ನು ತನಗೋಸ್ಕರ ಹಾಸಿ ಅದರ ಮೇಲೆ ಕುಳಿತುಕೊಂಡಳು. ಸುಗ್ಗಿಯ ದಿವಸ ಮೊದಲ್ಗೊಂಡು ಆಕಾಶದಿಂದ ಶವಗಳ ಮೇಲೆ ಮಳೆ ಬೀಳುವ ತನಕ, ಹಗಲಲ್ಲಿ ಆಕಾಶದ ಪಕ್ಷಿಗಳಾದರೂ, ರಾತ್ರಿಯಲ್ಲಿ ಕಾಡುಮೃಗಗಳಾದರೂ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು, ಅದನ್ನು ಬಂಡೆಯ ಮೇಲೆ ಹಾಸಿ, ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕುಳಿತುಕೊಂಡು, ಹಗಲಿನಲ್ಲಿ ಆಕಾಶದ ಪಕ್ಷಿಗಳೂ, ರಾತ್ರಿಯಲ್ಲಿ ಕಾಡು ಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯು ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಅದರ ಮೇಲೆ ಕೂತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳೂ ಇರುಳಿನಲ್ಲಿ ಕಾಡುಮೃಗಗಳೂ ಅವುಗಳನ್ನು ತಿನ್ನದಂತೆ ಕಾಯುತ್ತಿದ್ದಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅಯ್ಯಾಹನ ಮಗಳಾದ ರಿಚ್ಪಳು ಶೋಕವಸ್ತ್ರವನ್ನು ಕಲ್ಲಿನ ಮೇಲೆ ಹಾಸಿದಳು. ಸುಗ್ಗಿಯ ಆರಂಭದಿಂದ, ಆ ದೇಹಗಳ ಮೇಲೆ ಮಳೆಯು ಬೀಳುವ ತನಕ, ಆಕೆ ಆ ವಸ್ತ್ರದ ಮೇಲೆ ಕುಳಿತುಕೊಂಡಳು. ಆಕಾಶದಲ್ಲಿ ಹಾರಾಡುವ ಹಕ್ಕಿಗಳು ಹಗಲು ಹೊತ್ತಿನಲ್ಲಿಯೂ, ಕಾಡಿನ ಪ್ರಾಣಿಗಳು ರಾತ್ರಿಯ ಹೊತ್ತಿನಲ್ಲಿಯೂ ತನ್ನ ಮಕ್ಕಳ ದೇಹಗಳನ್ನು ಮುಟ್ಟಲು ರಿಚ್ಪಳು ಅವಕಾಶಕೊಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:10
19 ತಿಳಿವುಗಳ ಹೋಲಿಕೆ  

ಅವನ ಶವ ರಾತ್ರಿಯಲ್ಲಿ ಮರದ ಮೇಲಿರಬಾರದು. ಅವನನ್ನು ಅದೇ ದಿವಸದಲ್ಲಿ ಹೂಣಬೇಕು. ಏಕೆಂದರೆ ಮರಕ್ಕೆ ತೂಗಹಾಕಲಾದವನು ದೇವರ ಶಾಪವನ್ನು ಹೊಂದಿದವನು. ನಿಮ್ಮ ದೇವರಾದ ಯೆಹೋವ ದೇವರು ನಿಮಗೆ ಸೊತ್ತಾಗಿ ಕೊಡುವ ಭೂಮಿಯು ಅಶುದ್ಧವಾಗಬಾರದು.


ಯೆಹೋವ ದೇವರಿಂದ ಹಿಂಗಾರು ಮಳೆಯ ಕಾಲದಲ್ಲಿ, ಮಳೆಯನ್ನು ಬೇಡಿಕೊಳ್ಳಿರಿ. ಹೀಗೆ ಯೆಹೋವ ದೇವರು ಮಿಂಚುವ ಮೋಡಗಳನ್ನು ಮಾಡಿ, ಅವರಿಗೆ ಸಮೃದ್ಧಿಯಾದ ಮಳೆಯನ್ನೂ, ಒಬ್ಬೊಬ್ಬನಿಗೆ ಹೊಲದಲ್ಲಿ ಹುಲ್ಲನ್ನೂ ಕೊಡುವರು.


ಚೀಯೋನಿನ ಜನರೇ, ನಿಮ್ಮ ದೇವರಾದ ಯೆಹೋವ ದೇವರಲ್ಲಿ ಉಲ್ಲಾಸಿಸಿರಿ, ಸಂತೋಷವಾಗಿರಿ. ಏಕೆಂದರೆ ನಿಮಗೆ ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು. ಮುಂಗಾರು, ಹಿಂಗಾರು ಮಳೆಗಳನ್ನು ಮೊದಲಿನ ಹಾಗೆ ನಿಮಗೆ ಸುರಿಸುವರು.


ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.


ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು.


ಪಶುಗಳು ನರಳುತ್ತವೆ. ದನದ ಹಿಂಡುಗಳು ಕಳವಳಗೊಂಡಿವೆ. ಏಕೆಂದರೆ ಅವುಗಳಿಗೆ ಮೇವು ಇಲ್ಲ; ಕುರಿಮಂದೆಗಳು ಸಹ ಕಷ್ಟಪಡುತ್ತಲಿವೆ.


ನಾವು ಯೆಹೋವ ದೇವರನ್ನು ತಿಳಿದುಕೊಳ್ಳಲು, ಅವರನ್ನು ಹಿಂಬಾಲಿಸಿದರೆ ತಿಳಿದುಕೊಳ್ಳುವೆವು. ಅವರ ಆಗಮನವು ಅರುಣೋದಯದಂತೆ ನಿಶ್ಚಯ. ಅವರು ಮಳೆಯಂತೆಯೂ ಮುಂಗಾರಿನಂತೆಯೂ, ಭೂಮಿಯನ್ನು ತಂಪು ಮಾಡುವ ಹಿಂಗಾರಿನಂತೆಯೂ ಬಳಿಗೆ ಬರುವರು.


ನೀನೂ ನಿನ್ನ ಎಲ್ಲಾ ದಳಗಳೂ ಮತ್ತು ನಿನ್ನೊಂದಿಗಿರುವ ನಿನ್ನ ಜನರೂ ಇಸ್ರಾಯೇಲಿನ ಪರ್ವತಗಳ ಮೇಲೆ ಬೀಳುವಿರಿ. ಮಾಂಸತಿನ್ನುವ ಎಲ್ಲ ತರಹದ ಪಕ್ಷಿಗಳಿಗೂ ಮತ್ತು ಕಾಡುಮೃಗಗಳಿಗೂ ಆಹಾರವಾಗುವಂತೆ ನಾನು ನಿನ್ನನ್ನು ಕೊಡುವೆನು.


ಜನಾಂಗಗಳ ವ್ಯರ್ಥ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ? ಆಕಾಶವು ತಾನಾಗಿ ಹದ ಮಳೆಗಳನ್ನು ಕೊಟ್ಟೀತೇ? ಅಲ್ಲ, ನೀವೇ, ನಮ್ಮ ದೇವರಾದ ಯೆಹೋವ ದೇವರು, ನೀವೇ ವೃಷ್ಟಿದಾತರು, ನಾವು ನಿಮ್ಮನ್ನೇ ನಿರೀಕ್ಷಿಸುವೆವು, ನೀವು ಇವುಗಳನ್ನೆಲ್ಲಾ ನಡಿಸುವವರಾಗಿದ್ದೀರಷ್ಟೆ.


ಸೆರೆಯ ಬಟ್ಟೆಗಳನ್ನು ತೆಗೆದಿಟ್ಟು, ಅವನ ಮನೆಯಲ್ಲಿ ಒಂದು ತಿಂಗಳವರೆಗೆ ತನ್ನ ತಾಯಿ ತಂದೆಯರನ್ನು ಸ್ಮರಿಸಿ ಹಂಬಲಿಸಲಿ. ಆಮೇಲೆ ಅವನು ಅವಳನ್ನು ಹೆಂಡತಿಯನ್ನಾಗಿ ಮಾಡಿಕೊಳ್ಳಬಹುದು.


ನೀವು ನಿಮ್ಮ ಧಾನ್ಯವನ್ನೂ, ಹೊಸ ದ್ರಾಕ್ಷಾರಸವನ್ನೂ, ಎಣ್ಣೆಯನ್ನೂ ಕೂಡಿಸುವಂತೆ ದೇವರು ನಿಮ್ಮ ಭೂಮಿಗೆ ಅದರ ತಕ್ಕ ಕಾಲದಲ್ಲಿ ಮಳೆಯನ್ನೂ, ಮುಂಗಾರು ಹಿಂಗಾರುಗಳನ್ನೂ ಕೊಡುವರು.


ದಾವೀದನಿಗೆ, “ನೀನು ನನ್ನ ಬಳಿಗೆ ಬಾ; ನಿನ್ನ ಮಾಂಸವನ್ನು ಆಕಾಶದ ಪಕ್ಷಿಗಳಿಗೂ, ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು,” ಎಂದನು.


ಇನ್ನು ಮೂರು ದಿನಗಳಾದ ಮೇಲೆ ಫರೋಹನು ನಿನ್ನ ತಲೆಯನ್ನು ತೆಗೆಸಿ, ನಿನ್ನನ್ನು ಮರದ ಮೇಲೆ ತೂಗು ಹಾಕಿಸುವನು. ಪಕ್ಷಿಗಳು ನಿನ್ನ ಮಾಂಸವನ್ನು ತಿಂದುಬಿಡುವುವು,” ಎಂದನು.


ಯೆಹೋವ ದೇವರು ನಿನ್ನನ್ನು ನನ್ನ ಕೈಯಲ್ಲಿ ಒಪ್ಪಿಸಿಕೊಡುವರು; ನಾನು ನಿನ್ನನ್ನು ಹೊಡೆದುಬಿಟ್ಟು, ನಿನ್ನ ತಲೆಯನ್ನು ನಿನ್ನಿಂದ ತೆಗೆದುಹಾಕಿ, ಫಿಲಿಷ್ಟಿಯರ ದಂಡಿನ ಹೆಣಗಳನ್ನು ಈ ದಿನ ಆಕಾಶದ ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗಿ ಕೊಡುವೆನು. ಈ ದಿನ ಇಸ್ರಾಯೇಲರಲ್ಲಿ ದೇವರು ಇದ್ದಾರೆಂದು ಭೂಲೋಕದವರೆಲ್ಲರೂ ತಿಳಿಯುವರು.


ಅಯ್ಯಾಹನ ಮಗಳಾದ ರಿಚ್ಪಳೆಂಬ ಸೌಲನ ಉಪಪತ್ನಿ ಮಾಡಿದ್ದು ದಾವೀದನಿಗೆ ತಿಳಿಸಲಾಯಿತು.


ಒಬ್ಬನು ಮರಣದಂಡನೆಗೆ ಯೋಗ್ಯವಾದ ಅಪರಾಧ ಮಾಡಿದ್ದರಿಂದ, ನೀವು ಅವನಿಗೆ ಮರಣದಂಡನೆಯನ್ನು ವಿಧಿಸಿ, ಅವನ ಶವವನ್ನು ಮರಕ್ಕೆ ತೂಗುಹಾಕಿದ್ದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು