Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 21:21 - ಕನ್ನಡ ಸಮಕಾಲಿಕ ಅನುವಾದ

21 ಅವನು ಇಸ್ರಾಯೇಲನ್ನು ನಿಂದಿಸಿದ್ದರಿಂದ ದಾವೀದನ ಸಹೋದರನಾದ ಶಿಮೆಯನ ಮಗನಾದ ಯೋನಾತಾನನು ಅವನನ್ನು ಕೊಂದುಬಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು ಇಸ್ರಾಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮಿಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ಅವನು ಇಸ್ರಯೇಲರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದುಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಅವನು ಇಸ್ರಾಯೇಲ್ಯರನ್ನು ನಿಂದಿಸಿದಾಗ ದಾವೀದನ ಅಣ್ಣನಾದ ಶಿಮೆಯಾನನ ಮಗ ಯೋನಾತಾನನು ಅವನನ್ನು ಕೊಂದು ಹಾಕಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಈ ಮನುಷ್ಯನು ಇಸ್ರೇಲನ್ನು ಪ್ರತಿಭಟಿಸಿದನು. ಆದರೆ ಇವನನ್ನು ಯೋನಾತಾನನು ಕೊಂದನು. (ಯೋನಾತಾನನು ದಾವೀದನ ಸೋದರನಾದ ಶಿಮೆಯಾನನ ಮಗ.)

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 21:21
11 ತಿಳಿವುಗಳ ಹೋಲಿಕೆ  

ಹೀಗೆಯೇ ನಿನ್ನ ಸೇವಕನು ಆ ಸಿಂಹವನ್ನೂ, ಆ ಕರಡಿಯನ್ನೂ ಕೊಂದುಬಿಟ್ಟೆನು. ಸುನ್ನತಿ ಇಲ್ಲದ ಈ ಫಿಲಿಷ್ಟಿಯನು ಜೀವವುಳ್ಳ ದೇವರ ಸೈನ್ಯಗಳನ್ನು ದೂಷಿಸಿದ್ದರಿಂದ, ಅವುಗಳಲ್ಲಿ ಒಂದರ ಹಾಗೆ ಇರುವನು,” ಎಂದನು.


ಆ ಫಿಲಿಷ್ಟಿಯನು, “ನಾನು ಈ ದಿನ ಇಸ್ರಾಯೇಲಿನ ಸೈನ್ಯಗಳನ್ನು ನಿಂದಿಸುತ್ತೇನೆ. ನಾವು ಒಬ್ಬರಿಗೊಬ್ಬರು ಯುದ್ಧಮಾಡುವ ಹಾಗೆ ನನಗೆ ಒಬ್ಬನನ್ನು ಬಿಟ್ಟುಬಿಡಿರಿ,” ಎಂದನು.


ಇಷಯನು ಶಮ್ಮನನ್ನು ಬರಮಾಡಿದನು; ಆದರೆ ಅವನು, “ಇವನನ್ನು ಯೆಹೋವ ದೇವರು ಆಯ್ದುಕೊಳ್ಳಲಿಲ್ಲ,” ಎಂದನು.


ಇದಲ್ಲದೆ ದಾವೀದನ ಚಿಕ್ಕಪ್ಪನಾದ ಯೋನಾತಾನನು ಗ್ರಹಿಕೆಯು, ವಿವೇಕಿಯೂ ಆದ ಲೇಖಕನಾಗಿದ್ದನು. ಹಕ್ಮೋನಿಯ ಮಗನಾದ ಯೆಹೀಯೇಲ್ ಅರಸನ ಪುತ್ರರನ್ನು ನೋಡಿಕೊಳ್ಳುತ್ತಿದ್ದನು.


ಇಷಯನು ತನ್ನ ಚೊಚ್ಚಲ ಮಗ ಎಲೀಯಾಬನನ್ನೂ, ಎರಡನೆಯವನಾದ ಅಬೀನಾದಾಬನನ್ನೂ, ಮೂರನೆಯವನಾದ ಶಿಮ್ಮನನ್ನೂ,


ಹಮಾತ್, ಅರ್ಪಾದ್, ಸೆಫರ್ವಯಿಮ್, ಹೇನ, ಇವ್ವಾ, ಎಂಬ ಪಟ್ಟಣಗಳ ಅರಸರು ಏನಾದರು ಎಂಬ ನನ್ನ ಮಾತನ್ನು ಯೆಹೂದದ ಅರಸನಾದ ಹಿಜ್ಕೀಯನಿಗೆ ಹೇಳಿರಿ,” ಎಂದು ಪತ್ರ ಬರೆದು ದೂತರ ಮುಖಾಂತರ ಕಳುಹಿಸಿದನು.


ಫಿಲಿಷ್ಟಿಯರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ, ಇಸ್ರಾಯೇಲರು ಒಂದು ಕಡೆಯಾಗಿ ಪರ್ವತದ ಬಳಿಯಲ್ಲಿಯೂ ನಿಂತರು. ಅವರ ಮಧ್ಯದಲ್ಲಿ ತಗ್ಗು ಇತ್ತು.


ಇನ್ನೊಂದು ಸಾರಿ ಗತ್ ಊರಿನಲ್ಲಿ ಯುದ್ಧ ಉಂಟಾದಾಗ, ಅಲ್ಲಿ ಎತ್ತರವಾದ ಒಬ್ಬ ಮನುಷ್ಯನಿದ್ದನು. ಅವನ ಕೈಕಾಲುಗಳ ಬೆರಳುಗಳು ಆರಾರರಂತೆ, ಒಟ್ಟಿಗೆ ಇಪ್ಪತ್ತನಾಲ್ಕು ಬೆರಳುಗಳಿದ್ದವು. ಅವನು ಸಹ ರೆಫಾಯನಿಗೆ ಹುಟ್ಟಿದವನಾಗಿದ್ದನು.


ಈ ನಾಲ್ಕು ಮಂದಿಯು ಗತ್ ಊರಿನಲ್ಲಿದ್ದ ರೆಫಾಯರ ವಂಶಜರು. ಇವರು ದಾವೀದನಿಂದಲೂ ಅವನ ಜನರಿಂದಲೂ ಸಂಹಾರವಾಗಿ ಹೋದರು.


ಆದರೆ ಅಮ್ನೋನನಿಗೆ ದಾವೀದನ ಸಹೋದರನಾಗಿರುವ ಶಿಮೆಯನ ಮಗ ಯೊನಾದಾಬನೆಂಬ ಹೆಸರುಳ್ಳ ಒಬ್ಬ ಸ್ನೇಹಿತನಿದ್ದನು. ಈ ಯೋನಾದಾಬನು ಬಹು ಕುಯುಕ್ತಿಯುಳ್ಳವನಾಗಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು