2 ಸಮುಯೇಲ 21:3 - ಕನ್ನಡ ಸಮಕಾಲಿಕ ಅನುವಾದ3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಮಾಡಬೇಕಾದದ್ದೇನು? ನೀವು ಯೆಹೋವ ದೇವರ ಬಾಧ್ಯತೆಯನ್ನು ಆಶೀರ್ವದಿಸುವ ಹಾಗೆ, ನಾನು ಯಾವುದರಿಂದ ಪ್ರಾಯಶ್ಚಿತ್ತ ಮಾಡಲಿ,” ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಮಾಡಿದರೆ ನೀವು ಯೆಹೋವನ ಸ್ವತ್ತನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಆಗ ಅರಸ ದಾವೀದನು ಗಿಬ್ಯೋನ್ಯರನ್ನು ಕರೆದು, “ನಾನು ನಿಮ್ಮ ಪರವಾಗಿ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವುದನ್ನು ಕೊಟ್ಟರೆ ನೀವು ಸರ್ವೇಶ್ವರನ ಪ್ರಜೆಯನ್ನು ಆಶೀರ್ವದಿಸುವಿರಿ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)3 ಆಗ ಅರಸನಾದ ದಾವೀದನು ಗಿಬ್ಯೋನ್ಯರನ್ನು ಕರೆದು - ನಾನು ನಿಮಗೋಸ್ಕರ ಏನು ಮಾಡಬೇಕೆನ್ನುತ್ತೀರಿ? ನಿಮಗೆ ಪ್ರಾಯಶ್ಚಿತ್ತವಾಗಿ ಯಾವದನ್ನು ಕೊಟ್ಟರೆ ನೀವು ಯೆಹೋವನ ಸ್ವಾಸ್ತ್ಯವನ್ನು ಆಶೀರ್ವದಿಸುವಿರಿ ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ದಾವೀದನು ಗಿಬ್ಯೋನ್ಯರಿಗೆ, “ನಾನು ನಿಮಗೆ ಏನು ಮಾಡಲಿ? ಇಸ್ರೇಲಿನ ಪಾಪವನ್ನು ತೆಗೆದುಹಾಕಲು, ಯೆಹೋವನ ಜನರನ್ನು ನೀವು ಹರಸಲು, ನಾನು ನಿಮಗೆ ಏನು ಮಾಡಬೇಕು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿ |
ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.