2 ಸಮುಯೇಲ 21:6 - ಕನ್ನಡ ಸಮಕಾಲಿಕ ಅನುವಾದ6 ಅವನ ಪುತ್ರರಲ್ಲಿ ಏಳುಮಂದಿಯನ್ನು ನಮಗೆ ಒಪ್ಪಿಸು. ಆಗ ನಾವು ಯೆಹೋವ ದೇವರು ಆಯ್ದುಕೊಂಡ ಸೌಲನ ಊರಾದ ಗಿಬೆಯದಲ್ಲಿ ಅವರನ್ನು ಯೆಹೋವ ದೇವರಿಗೋಸ್ಕರ ಗಲ್ಲಿಗೆ ಹಾಕುವೆವು,” ಎಂದರು. ಅದಕ್ಕೆ ಅರಸನು, “ನಾನು ಒಪ್ಪಿಸಿಕೊಡುವೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು, ಯೆಹೋವನ ಸನ್ನಿಧಿಯಲ್ಲಿ ಅವರನ್ನು ನೇತು ಹಾಕುವೆವು” ಎಂದರು. ಅದಕ್ಕೆ ಅರಸನು, “ಆಗಲಿ ಅವರನ್ನು ನಿಮಗೆ ಒಪ್ಪಿಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸರ್ವೇಶ್ವರನಿಂದ ಆಯ್ಕೆಯಾದ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಸರ್ವೇಶ್ವರನ ಸನ್ನಿಧಿಯಲ್ಲೆ ನೇತುಹಾಕುತ್ತೇವೆ,” ಎಂದರು. ಅರಸನು, “ಆಗಲಿ, ಒಪ್ಪಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)6 ಆ ಮನುಷ್ಯನ ಮಕ್ಕಳಲ್ಲಿ ಏಳು ಮಂದಿಯನ್ನು ನಮಗೆ ಒಪ್ಪಿಸು. ಯೆಹೋವನಿಂದ ಆರಿಸಲ್ಪಟ್ಟ ಸೌಲನು ವಾಸವಾಗಿದ್ದ ಗಿಬೆಯದಲ್ಲಿ ನಾವು ಅವರನ್ನು ಕೊಂದು ಯೆಹೋವನ ಸನ್ನಿಧಿಯಲ್ಲಿ ನೇತುಹಾಕುವೆವು ಎಂದರು. ಅರಸನು - ಆಗಲಿ, ಒಪ್ಪಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಅವನ ಏಳು ಮಂದಿ ಗಂಡುಮಕ್ಕಳನ್ನು ನಮ್ಮ ಬಳಿಗೆ ಕಳುಹಿಸು. ಸೌಲನು ವಾಸವಾಗಿದ್ದ ಗಿಬೆಯ ಬೆಟ್ಟದ ಮೇಲೆ ಯೆಹೋವನ ಸನ್ನಿಧಿಯಲ್ಲಿ ನೇತುಹಾಕುತ್ತೇವೆ” ಎಂದು ಹೇಳಿದರು. ರಾಜನಾದ ದಾವೀದನು, “ಆ ಗಂಡುಮಕ್ಕಳನ್ನು ನಾನು ನಿಮಗೆ ಒಪ್ಪಿಸುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |