Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಜಯ ಗೀತೆಯನ್ನು ರಚಿಸಿ ಹೀಗೆ ಹಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ದಾವೀದನನ್ನು ಸೌಲನ ಕೈಗೂ ಇತರ ಶತ್ರುಗಳ ಕೈಗೂ ಸಿಕ್ಕದಂತೆ ತಪ್ಪಿಸಿದರು. ಈ ಕಾರಣ ಅವನು ಸರ್ವೇಶ್ವರಸ್ವಾಮಿಯನ್ನು ಕೀರ್ತಿಸುತ್ತಾ ಈ ಜಯಗೀತೆಯನ್ನು ಹಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ದಾವೀದನನ್ನು ಎಲ್ಲಾ ಶತ್ರುಗಳ ಕೈಗೂ ಸೌಲನ ಕೈಗೂ ಸಿಕ್ಕದಂತೆ ತಪ್ಪಿಸಿದಾಗ ಅವನು ಯೆಹೋವನ ಘನಕ್ಕಾಗಿ ಈ ಪದ್ಯವನ್ನು ರಚಿಸಿ ಹೇಳಿದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ದಾವೀದನನ್ನು ಸೌಲನಿಂದ ಮತ್ತು ಅವನ ಇತರ ಎಲ್ಲಾ ಶತ್ರುಗಳಿಂದ ರಕ್ಷಿಸಿದನು. ಆ ಸಮಯದಲ್ಲಿ ದಾವೀದನು ಈ ಹಾಡನ್ನು ರಚಿಸಿ ಹಾಡಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:1
20 ತಿಳಿವುಗಳ ಹೋಲಿಕೆ  

ಆ ದಿವಸದಲ್ಲಿ ದೆಬೋರಳೂ, ಅಬೀನೋವಮನ ಮಗ ಬಾರಾಕನೂ ಹಾಡಿದ್ದೇನೆಂದರೆ:


ಆಗ ಮೋಶೆ ಮತ್ತು ಇಸ್ರಾಯೇಲರು ಯೆಹೋವ ದೇವರಿಗೆ ಈ ಹಾಡನ್ನು ಹಾಡಿದರು: “ನಾನು ಯೆಹೋವ ದೇವರಿಗೆ ಹಾಡುತ್ತೇನೆ. ಏಕೆಂದರೆ ಅವರು ಪ್ರಭಾವದಿಂದ ಜಯಶಾಲಿಯಾದರು. ಕುದುರೆಗಳನ್ನೂ ರಾಹುತರನ್ನೂ ಸಮುದ್ರದಲ್ಲಿ ದಬ್ಬಿದ್ದಾರೆ.


ನನ್ನನ್ನು ಪ್ರತಿಯೊಂದು ದುಷ್ಟದಾಳಿಯಿಂದ ಕರ್ತ ಯೇಸು ತಪ್ಪಿಸಿ, ತಮ್ಮ ಪರಲೋಕ ರಾಜ್ಯಕ್ಕೆ ನನ್ನನ್ನು ಸುರಕ್ಷಿತವಾಗಿ ತರುವರು. ಯುಗಯುಗಾಂತರಗಳಲ್ಲಿಯೂ ಅವರಿಗೆ ಮಹಿಮೆ. ಆಮೆನ್.


ನೀತಿವಂತನಿಗೆ ತೊಂದರೆಗಳು ಬಹಳವಾಗಿವೆ; ಆದರೆ ಅವೆಲ್ಲವುಗಳಿಂದ ಯೆಹೋವ ದೇವರು ಅವನನ್ನು ಬಿಡಿಸುತ್ತಾರೆ.


“ದೇವರಾಗಿರುವ ನನಗೆ ಸ್ತೋತ್ರವನ್ನು ಬಲಿಯಾಗಿ ಅರ್ಪಿಸಿರಿ. ಮಹೋನ್ನತನಾಗಿರುವ ನನಗೆ ಹರಕೆಗಳನ್ನು ಸಲ್ಲಿಸಿರಿ.


ಅವರು ನನ್ನ ಶತ್ರುಗಳಿಂದ ನನ್ನನ್ನು ಬಿಡಿಸುತ್ತಾರೆ. ನೀವು ನನ್ನ ಎದುರಾಳಿಗಳಿಂದ ನನ್ನನ್ನು ತಪ್ಪಿಸಿ ಗೌರವಿಸುತ್ತೀರಿ. ಬಲಾತ್ಕಾರ ಮಾಡುವವನಿಂದ ನನ್ನನ್ನು ರಕ್ಷಿಸುತ್ತೀರಿ.


ಆದರೆ ದಾವೀದನು ತನ್ನ ಹೃದಯದಲ್ಲಿ, “ನಾನು ಎಂದಿಗಾದರೂ ಒಂದು ದಿನ ಸೌಲನ ಕೈಯಿಂದ ಸಾಯುತ್ತೇನೆ. ನಾನು ತ್ವರೆಯಾಗಿ ಫಿಲಿಷ್ಟಿಯರ ದೇಶಕ್ಕೆ ತಪ್ಪಿಸಿಕೊಂಡು ಓಡಿ ಹೋಗುವುದಕ್ಕಿಂತ ನನಗೆ ಉತ್ತಮವಾದ ಕಾರ್ಯವಿಲ್ಲ. ಸೌಲನು ನನ್ನನ್ನು ಇಸ್ರಾಯೇಲಿನಲ್ಲಿ ಇನ್ನು ಹುಡುಕಲು ದಿಕ್ಕು ಕಾಣದೆ ಹೋಗುವನು. ಈ ಪ್ರಕಾರ ನಾನು ಅವನ ಕೈಯಿಂದ ತಪ್ಪಿಸಿಕೊಂಡು ಹೋಗುವೆನು,” ಎಂದುಕೊಂಡನು.


ಈ ದಿನ ನಿನ್ನ ಪ್ರಾಣವು ನನ್ನ ದೃಷ್ಟಿಗೆ ಹೇಗೆ ದೊಡ್ಡದಾಗಿತ್ತೋ, ಹಾಗೆಯೇ ನನ್ನ ಪ್ರಾಣವು ಯೆಹೋವ ದೇವರ ದೃಷ್ಟಿಗೆ ದೊಡ್ಡದಾಗಿರಲಿ. ಅವರು ನನ್ನನ್ನು ಎಲ್ಲಾ ಸಂಕಟದಿಂದ ತಪ್ಪಿಸಿಬಿಡಲಿ,” ಎಂದನು.


ಈಗ ನಿನ್ನನ್ನು ಹಿಂದಟ್ಟಿ ನಿನ್ನ ಪ್ರಾಣವನ್ನು ಹುಡುಕುವುದಕ್ಕೆ ಒಬ್ಬನು ಎದ್ದಿದ್ದಾನೆ. ಆದರೂ ನನ್ನ ಒಡೆಯನ ಪ್ರಾಣವು ದೇವರಾದ ಯೆಹೋವ ದೇವರ ಬಳಿಯ ಜೀವದ ಕಟ್ಟಿನಲ್ಲಿ ಕಟ್ಟಿರುವುದು. ನಿನ್ನ ಶತ್ರುಗಳ ಪ್ರಾಣವನ್ನು ಕವಣೆಯ ಮಧ್ಯದಲ್ಲಿಟ್ಟು ಎಸೆದ ಹಾಗೆಯೇ ದೇವರು ಎಸೆದುಬಿಡುವರು.


ಯೆಹೋವ ದೇವರು ನ್ಯಾಯಾಧಿಪತಿಯಾಗಿದ್ದು ನನಗೂ ನಿನಗೂ ನ್ಯಾಯತೀರಿಸಿ, ನನ್ನ ಪರವಾಗಿ ವಾದಿಸಿ, ನನ್ನನ್ನು ನಿನ್ನ ಕೈಯಿಂದ ತಪ್ಪಿಸಿಬಿಡಲಿ,” ಎಂದನು.


ದಾವೀದನು ಅರಣ್ಯದಲ್ಲಿರುವ ಬಲವಾದ ಕೋಟೆಗಳಲ್ಲಿಯೂ, ಜೀಫ್ ಎಂಬ ಮರುಭೂಮಿಯ ಬೆಟ್ಟದಲ್ಲಿಯೂ ವಾಸವಾಗಿದ್ದನು. ಸೌಲನು ದಿನವೂ ಅವನನ್ನು ಹುಡುಕುತ್ತಿದ್ದನು. ಆದರೆ ದೇವರು ದಾವೀದನನ್ನು ಸೌಲನ ಕೈಯಲ್ಲಿ ಒಪ್ಪಿಸಿಕೊಡಲಿಲ್ಲ.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ಆಗ ಮೋಶೆ ಇಸ್ರಾಯೇಲ್ ಸಮೂಹಕ್ಕೆ ಕೇಳುವ ಹಾಗೆ ಈ ಹಾಡಿನ ಮಾತುಗಳನ್ನು ಪ್ರಾರಂಭದಿಂದ ಕೊನೆಯವರೆಗೆ ಹೇಳಿದನು.


ಆಸಾಫನಿಗೂ, ಅವನ ಜೊತೆ ಲೇವಿಯರಿಗೂ ಯೆಹೋವ ದೇವರ ಸ್ತೋತ್ರಗೀತೆ ಹಾಡಲು ದಾವೀದನು ಪ್ರಥಮವಾಗಿ ಆ ದಿನದಲ್ಲೇ ನೇಮಿಸಿದನು. ಅವರು ಹೀಗೆಂದು ಹಾಡಿದರು:


ಆಗ ನಾತಾನನು ದಾವೀದನಿಗೆ, “ನೀನೇ ಆ ಮನುಷ್ಯನು! ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ: ನಿನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಅಭಿಷೇಕ ಮಾಡಿ, ನಿನ್ನನ್ನು ಸೌಲನ ಕೈಗೆ ತಪ್ಪಿಸಿಬಿಟ್ಟು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು