Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:18 - ಕನ್ನಡ ಸಮಕಾಲಿಕ ಅನುವಾದ

18 ಅವರು ನನಗಿಂತ ಶಕ್ತಿಶಾಲಿಯಾದ ಶತ್ರುಗಳಿಂದ, ದ್ವೇಷಿಸುತ್ತಿದ್ದ ವೈರಿಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ನನಗಿಂತ ಬಲಿಷ್ಠರೂ, ಪುಷ್ಠರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ನನ್ನ ಬಿಡಿಸಿ ರಕ್ಷಿಸಿದನು ಶತ್ರುಗಳಿಂದ ನನಗಿಂತ ಪುಷ್ಟ, ಬಲಿಷ್ಠ ಹಗೆಗಳಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ನನಗಿಂತ ಬಲಿಷ್ಠರೂ ಪುಷ್ಟರೂ ಆಗಿ ದ್ವೇಷಿಸುತ್ತಿದ್ದ ಶತ್ರುಗಳಿಂದ ನನ್ನನ್ನು ಬಿಡಿಸಿ ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನನ್ನನ್ನು ದ್ವೇಷಿಸುತ್ತಿದ್ದ ಶತ್ರುಗಳಿಂದ ಆತನೇ ರಕ್ಷಿಸಿದನು. ನನ್ನ ಶತ್ರುಗಳು ನನಗಿಂತಲೂ ಬಹಳ ಬಲಿಷ್ಠರೂ ಸೊಕ್ಕಿದವರೂ ಆಗಿದ್ದರು. ಅವರ ಕೈಯಿಂದ ಆತನೇ ನನ್ನನ್ನು ರಕ್ಷಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:18
8 ತಿಳಿವುಗಳ ಹೋಲಿಕೆ  

ಆದರೆ ಕರ್ತ ಯೇಸು ನನ್ನ ಬಳಿಯಲ್ಲಿ ನಿಂತು ನನ್ನನ್ನು ಬಲಪಡಿಸಿ, ನನ್ನ ಮೂಲಕ ಸುವಾರ್ತೆಯು ಸಂಪೂರ್ಣವಾಗಿ ಸಾರುವಂತೆ ಮಾಡಿದರು. ಯೆಹೂದ್ಯರಲ್ಲದವರೆಲ್ಲರೂ ಸಹ ಅದನ್ನು ಕೇಳುವಂತೆಯೂ ಮಾಡಿದರು. ಇದಲ್ಲದೆ ಕರ್ತ ಯೇಸು ನನ್ನನ್ನು ಸಿಂಹದ ಬಾಯೊಳಗಿಂದ ಸಂರಕ್ಷಿಸಿದರು.


ನಾವು ಭರವಸೆಯಿಟ್ಟ ದೇವರು ಅಂಥಾ ಮರಣಕರ ಅಪಾಯದಿಂದ ನಮ್ಮನ್ನು ತಪ್ಪಿಸಿದ್ದಾರೆ ಮತ್ತು ಮುಂದೆಯೂ ಅಪಾಯಗಳಿಂದ ನಮ್ಮನ್ನು ಪಾರುಮಾಡುವರು.


ನಾನು ನಿಮಗೆ ಮೊರೆಯಿಟ್ಟಾಗ, ನನ್ನ ಶತ್ರುಗಳು ಹಿಂದಿರುಗುವರು. ಇದರಿಂದ ದೇವರು ನನಗಿದ್ದಾರೆ ಎಂಬುದನ್ನು ತಿಳಿದುಕೊಳ್ಳುವೆನು.


ಯೆಹೋವ ದೇವರೇ, ಏಳಿರಿ! ನನ್ನ ದೇವರೇ, ನನ್ನನ್ನು ರಕ್ಷಿಸಿರಿ. ನನ್ನ ಶತ್ರುಗಳೆಲ್ಲರ ದವಡೆಗೆ ಹೊಡೆಯಿರಿ; ದುಷ್ಟರ ಹಲ್ಲುಗಳನ್ನು ಮುರಿದುಬಿಡಿರಿ.


ಯೆಹೋವ ದೇವರು ದಾವೀದನನ್ನು ಅವನ ಎಲ್ಲಾ ಶತ್ರುಗಳಿಂದಲೂ, ಸೌಲನ ಕೈಯಿಂದಲೂ ತಪ್ಪಿಸಿಕೊಂಡಾಗ ಯೆಹೋವ ದೇವರಿಗೆ ಈ ಪದ್ಯವನ್ನು ಹಾಡಿದ್ದು.


“ಅವರು ಮೇಲಿನಿಂದ ಕೈಚಾಚಿ ನನ್ನನ್ನು ಹಿಡಿದು, ಅಗಾಧವಾದ ಜಲರಾಶಿಗಳಿಂದ ಹೊರಗೆಳೆದರು.


ನನ್ನ ಆಪತ್ತಿನ ದಿನದಲ್ಲಿ ನನ್ನನ್ನು ಆ ಶತ್ರುಗಳು ದಾಳಿಮಾಡಿದರು; ಆದರೆ ಯೆಹೋವ ದೇವರು ನನಗೆ ಆಧಾರವಾಗಿದ್ದರು.


ಯೆಹೋವ ದೇವರೇ, “ನಿಮ್ಮ ಹಾಗೆ ಯಾರು ಇದ್ದಾರೆ? ಬಡವನನ್ನು ಅವನಿಗಿಂತ ಬಲಿಷ್ಠನಿಂದ ಕಾಪಾಡುತ್ತೀರಿ ದರಿದ್ರನನ್ನೂ, ಕೊರತೆಯುಳ್ಳವನನ್ನೂ ಸುಲಿದುಕೊಳ್ಳುವವನಿಂದ ಬಿಡಿಸುತ್ತೀರಿ,” ಎಂದು ನನ್ನ ಪೂರ್ಣ ಪ್ರಾಣವೇ ಹೇಳುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು