Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 22:7 - ಕನ್ನಡ ಸಮಕಾಲಿಕ ಅನುವಾದ

7 “ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಕರೆದೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಕಿವಿಗೆ ಮುಟ್ಟಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು. ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಸ್ವರವನ್ನು ಕೇಳಿದನು. ನನ್ನ ಪ್ರಾರ್ಥನೆ ಆತನ ಸನ್ನಿಧಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ದೇವನಿಗೆ ಪ್ರಾರ್ಥನೆ ಮಾಡಿದೆ ಆ ಸರ್ವೇಶ್ವರನಿಗೆ. ನನ್ನ ಕೂಗು ಕೇಳಿಸಿತು ಆತನ ಮಂದಿರದಲಿ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ಅವುಗಳಲ್ಲಿ ಸಿಲುಕಿಕೊಂಡಿದ್ದಾಗ ಯೆಹೋವನಿಗೆ ಪ್ರಾರ್ಥಿಸಿದೆನು. ಹೌದು, ನನ್ನ ದೇವರಿಗೆ ನಾನು ಮೊರೆಯಿಟ್ಟೆನು; ತನ್ನ ಆಲಯದಲ್ಲಿದ್ದ ಆತನಿಗೆ ನನ್ನ ಸ್ವರ ಕೇಳಿಸಿತು; ಸಹಾಯಕ್ಕಾಗಿ ನಾನಿಟ್ಟ ಮೊರೆಗೆ ಆತನು ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 22:7
16 ತಿಳಿವುಗಳ ಹೋಲಿಕೆ  

ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.


ಆಗ ನಾನು, “ಓ ಯೆಹೋವ ದೇವರೇ, ನನ್ನನ್ನು ರಕ್ಷಿಸಿರಿ,” ಎಂದು ಯೆಹೋವ ದೇವರ ಹೆಸರಿನಲ್ಲಿ ಬೇಡಿದೆನು.


“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.


ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು.


ಆಗ ಯೆಹೋವ ದೇವರು, “ಈಜಿಪ್ಟಿನಲ್ಲಿರುವ ನನ್ನ ಜನರ ವ್ಯಥೆಯನ್ನು ವಾಸ್ತವವಾಗಿಯೂ ಕಂಡಿದ್ದೇನೆ. ಬಿಟ್ಟೀ ಮಾಡಿಸುವವರ ವಿಷಯದಲ್ಲಿ ಅವರು ಇಟ್ಟ ಮೊರೆಯು ನನಗೆ ಕೇಳಿಸಿತು. ಅವರ ದುಃಖವನ್ನು ಬಲ್ಲೆನು.


ಆದರೆ ಯೆಹೋವ ದೇವರು ತಮ್ಮ ಪರಿಶುದ್ಧ ಮಂದಿರದಲ್ಲಿ ಇದ್ದಾರೆ. ಅವರ ಮುಂದೆ ಭೂಮಿಯೆಲ್ಲಾ ಮೌನವಾಗಿರಲಿ.


ಬಡವನಾದ ನಾನು ಕರೆಯಲು ಯೆಹೋವ ದೇವರು ಕೇಳಿ ನನ್ನ ಎಲ್ಲಾ ಇಕ್ಕಟ್ಟುಗಳೊಳಗಿಂದ ನನ್ನನ್ನು ರಕ್ಷಿಸಿದರು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಇಗೋ ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಆ ಕೂಲಿ ಕೂಗಿಕೊಳ್ಳುತ್ತದೆ. ಕೊಯಿದವರ ಕೂಗು ಸೈನ್ಯಗಳ ಅಧಿಪತಿ ಆಗಿರುವ ಕರ್ತದೇವರ ಕಿವಿಗಳಲ್ಲಿ ಬಿದ್ದಿದೆ.


ಕ್ರಿಸ್ತ ಯೇಸುವು ಭೂಲೋಕದ ದಿನಗಳಲ್ಲಿ ಮರಣದಿಂದ ತಪ್ಪಿಸಲು ಶಕ್ತರಾಗಿರುವ ದೇವರಿಗೆ ಬಲವಾಗಿ ಕೂಗುತ್ತಾ ಕಣ್ಣೀರಿಟ್ಟರು. ಯೇಸುವಿನ ಭಯಭಕ್ತಿಯ ನಿಮಿತ್ತ ಅವರ ಪ್ರಾರ್ಥನೆ, ವಿಜ್ಞಾಪನೆಗಳಿಗೆ ಉತ್ತರ ಸಿಕ್ಕಿತ್ತು.


ಆಗ ನಾನು ಹೇಳಿದ್ದು, ‘ನಿಮ್ಮ ಕಣ್ಣುಗಳ ಎದುರಿನಿಂದ ಬಹಿಷ್ಕೃತನಾಗಿದ್ದೇನೆ. ಆದರೂ ನಾನು ನಿಮ್ಮ ಪರಿಶುದ್ಧ ಮಂದಿರದ ಕಡೆಗೆ ಪುನಃ ನೋಡುವೆನು.’


ಯೇಸು ವೇದನೆಯಲ್ಲಿದ್ದು ಬಹಳ ಆಸಕ್ತಿಯಿಂದ ಪ್ರಾರ್ಥಿಸಿದರು. ಯೇಸುವಿನ ಬೆವರು ನೆಲಕ್ಕೆ ಬೀಳುತ್ತಿರುವ ರಕ್ತದ ದೊಡ್ಡ ಹನಿಗಳಂತಿದ್ದವು.


ಆಗ ಅವರು ಇಕ್ಕಟ್ಟಿನಲ್ಲಿ ಯೆಹೋವ ದೇವರಿಗೆ ಮೊರೆ ಇಟ್ಟರು; ದೇವರು ಅವರ ಸಂಕಟಗಳೊಳಗಿಂದ ಅವರನ್ನು ಬಿಡಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು