2 ಸಮುಯೇಲ 23:10 - ಕನ್ನಡ ಸಮಕಾಲಿಕ ಅನುವಾದ10 ಎಲಿಯಾಜರನು ಎದ್ದು ಖಡ್ಗ ಹಿಡಿದ ತನ್ನ ಕೈ ದಣಿದು ಮರಗಟ್ಟಿ ಹೋಗುವವರೆಗೂ ಫಿಲಿಷ್ಟಿಯರನ್ನು ಸಂಹರಿಸುತ್ತಿದ್ದನು. ಆ ದಿನ ಯೆಹೋವ ದೇವರು ದೊಡ್ಡ ರಕ್ಷಣೆಯನ್ನು ಉಂಟುಮಾಡಿದರು. ಸೈನಿಕರು ಸುಲಿದುಕೊಳ್ಳುವುದಕ್ಕೆ ಮಾತ್ರ ಅವನ ಹಿಂದೆ ಹಿಂದಿರುಗಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಇಸ್ರಯೇಲರು ಹೋದನಂತರ ಇವನು ಅಲ್ಲೇ ನಿಂತು, ಕತ್ತಿ ಹಿಡಿದು ಕೈಸೋತು ಮರಗಟ್ಟಿಹೋಗುವ ತನಕ, ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನ ಸರ್ವೇಶ್ವರ ಮಹಾಜಯವನ್ನುಂಟುಮಾಡಲು ಇಸ್ರಯೇಲರು ಸುಲಿದುಕೊಳ್ಳುವುದಕ್ಕಾಗಿಯೇ, ಹಿಂದಿರುಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ಇಸ್ರಾಯೇಲ್ಯರು ಹೋದನಂತರ ಇವನು ನಿಂತು ಕತ್ತಿ ಹಿಡಿದ ಕೈ ಸೋತು ಮರಗಟ್ಟಿ ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲ್ಯರು ಸುಲುಕೊಳ್ಳುವದಕ್ಕೋಸ್ಕರವೇ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಎಲ್ಲಾಜಾರನು ಆಯಾಸಗೊಳ್ಳುವ ತನಕ ಫಿಲಿಷ್ಟಿಯರೊಡನೆ ಹೋರಾಡಿದನು. ಆದರೆ ಅವನು ತನ್ನ ಕೈ ಸೋತು ಹೋಗುವವರೆಗೂ ಫಿಲಿಷ್ಟಿಯರನ್ನು ಕೊಂದನು. ಯೆಹೋವನು ಇಸ್ರೇಲರಿಗೆ ಅಂದು ಮಹಾವಿಜಯವನ್ನು ಉಂಟುಮಾಡಿದನು. ಎಲ್ಲಾಜಾರನು ಯುದ್ಧದಲ್ಲಿ ವಿಜಯಿಯಾದ ಮೇಲೆ ಜನರು ಹಿಂದಿರುಗಿದರು. ಆದರೆ ಅವರು ಶತ್ರುಗಳಿಂದ ಬೆಲೆಬಾಳುವ ವಸ್ತುಗಳನ್ನು ಅಪಹರಿಸಲು ಮಾತ್ರವೇ ಬಂದಿದ್ದರು. ಅಧ್ಯಾಯವನ್ನು ನೋಡಿ |