Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:13 - ಕನ್ನಡ ಸಮಕಾಲಿಕ ಅನುವಾದ

13 ಮೂವತ್ತು ಮಂದಿ ಪರಾಕ್ರಮಶಾಲಿಗಳ ಮುಖ್ಯಸ್ಥರಲ್ಲಿ ಮೂರು ಮಂದಿ ಹೊರಟು ಸುಗ್ಗಿಯ ಕಾಲದಲ್ಲಿ ಅದುಲ್ಲಾಮ್ ಗವಿಯಲ್ಲಿರುವ ದಾವೀದನ ಬಳಿಗೆ ಬಂದರು. ಅದೇ ವೇಳೆಯಲ್ಲಿ ಫಿಲಿಷ್ಟಿಯರ ಸೈನ್ಯವು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗಿಕಾಲದಲ್ಲಿ ಅವನ ಬಳಿಗೆ ಮೂವರು ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ಮೂರು ಮಂದಿ, ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ, ಸುಗ್ಗೀಕಾಲದಲ್ಲಿ ಅವನ ಬಳಿಗೆ ಬಂದರು. ಫಿಲಿಷ್ಟಿಯರು ದಂಡೆತ್ತಿಬಂದು ರೆಫಾಯಿಮ್ ತಗ್ಗಿನಲ್ಲಿ ಪಾಳೆಯ ಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಮೂವತ್ತು ಮಂದಿ ಪ್ರಸಿದ್ಧ ಶೂರರಲ್ಲಿ ದಾವೀದನು ಅದುಲ್ಲಾಮ್ ಗವಿಯಲ್ಲಿದ್ದಾಗ ಸುಗ್ಗೀಕಾಲದಲ್ಲಿ ಅವನ ಬಳಿಗೆ ಮೂರು ಮಂದಿ ಬಂದರು. ಫಿಲಿಷ್ಟಿಯರು ದಂಡೆತ್ತಿ ಬಂದು ರೆಫಾಯೀಮ್ ತಗ್ಗಿನಲ್ಲಿ ಪಾಳೆಯಮಾಡಿಕೊಂಡಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸುಗ್ಗಿಯ ಕಾಲದ ಒಂದು ಸಮಯದಲ್ಲಿ ಮೂವತ್ತು ಮಂದಿ ಶೂರರಲ್ಲಿ ಮೂವರು ದಾವೀದನ ಬಳಿಗೆ ಬಂದರು. ಈ ಮೂವರು ಅದುಲ್ಲಾಮ್ ಗವಿಗೆ ಬಂದರು. ಫಿಲಿಷ್ಟಿಯರ ಸೈನ್ಯವು ರೆಫಾಯೀಮ್ ಕಣಿವೆಯಲ್ಲಿ ತನ್ನ ಪಾಳೆಯವನ್ನು ಮಾಡಿಕೊಂಡಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:13
9 ತಿಳಿವುಗಳ ಹೋಲಿಕೆ  

ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ದಾವೀದನು ಆ ಸ್ಥಳದಿಂದ ತಪ್ಪಿಸಿಕೊಂಡು ಅದುಲ್ಲಾಮ್ ಎಂಬ ಗವಿಗೆ ಬಂದನು. ಆ ವರ್ತಮಾನವನ್ನು ಅವನ ಸಹೋದರರೂ, ಅವನ ತಂದೆಯ ಮನೆಯವರೆಲ್ಲರೂ ಕೇಳಿ, ಅವನ ಬಳಿಗೆ ಅಲ್ಲಿಗೆ ಬಂದರು.


ಮಾರೇಷದ ನಿವಾಸಿಯೇ, ನಿನಗೆ ವಿರೋಧವಾಗಿ ಜಯಶಾಲಿಗಳನ್ನು ನಾನು ತರುವೆನು. ಇಸ್ರಾಯೇಲಿನ ಮಹಿಮೆಯಾದಾತನು ಅದುಲ್ಲಾಮಿನ ಮಟ್ಟಿಗೂ ಬರುವನು.


ಕೊಯ್ಯುವವನು ಪೈರನ್ನು ಕೂಡಿಸಿ ತೆನೆಗಳನ್ನು ತನ್ನ ಕೈಯಿಂದ ಕೊಯ್ಯುವಂತೆಯೂ, ರೆಫಾಯಿಮಿನ ತಗ್ಗಿನಲ್ಲಿ ತೆನೆಗಳನ್ನು ಕೂಡಿಸುವ ಹಾಗೆಯೂ ಇರುವುದು.


ಆಗ ಫಿಲಿಷ್ಟಿಯರು ಬಂದು ರೆಫಾಯಿಮ್ ತಗ್ಗಿನಲ್ಲಿ ಇಳಿದುಕೊಂಡರು.


ಫಿಲಿಷ್ಟಿಯರು ಮತ್ತೆ ತಿರುಗಿಬಂದು, ರೆಫಾಯಿಮಿನ ತಗ್ಗಿನಲ್ಲಿ ವಿಸ್ತಾರವಾಗಿ ಹರಡಿಕೊಂಡರು.


ಯರ್ಮೂತ್, ಅದುಲ್ಲಾಮ್, ಸೋಕೋ, ಅಜೇಕಾ,


ಲಿಬ್ನದ ಅರಸನು. ಅದುಲ್ಲಾಮಿನ ಅರಸನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು