2 ಸಮುಯೇಲ 23:17 - ಕನ್ನಡ ಸಮಕಾಲಿಕ ಅನುವಾದ17 ಅವನು, “ಯೆಹೋವ ದೇವರೇ, ನಾನು ಇಂಥಾ ಕಾರ್ಯವನ್ನು ಎಂದಿಗೂ ಮಾಡಲು ಸಾಧ್ಯವಿಲ್ಲ. ಇದು ತಮ್ಮ ಪ್ರಾಣದಾಶೆ ತೊರೆದ ಮನುಷ್ಯರ ರಕ್ತವಲ್ಲವೇ?” ಎಂದು ಹೇಳಿ ಕುಡಿಯಲೊಲ್ಲದೆ ಇದ್ದನು. ಇಂಥಾ ಮಹಾಕಾರ್ಯಗಳನ್ನು ಈ ಮೂರು ಮಂದಿ ಪರಾಕ್ರಮಶಾಲಿಗಳು ಮಾಡಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಆದರೆ ಅವನು ಅದನ್ನು ಕುಡಿಯಲೊಲ್ಲದೆ, “ಯೆಹೋವನೇ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ. ಜೀವದಾಶೆ ತೊರೆದವರ ರಕ್ತವನ್ನು ನಾನು ಕುಡಿಯಬೇಕೆ? ಇದನ್ನು ಕುಡಿಯುವುದೇ ಇಲ್ಲ” ಎಂದು ಹೇಳಿ, ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಜನರು ಪರಾಕ್ರಮಶಾಲಿಗಳಾಗಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಸರ್ವೇಶ್ವರಾ, ಈ ನೀರನ್ನು ಕುಡಿಯುವುದು ನನಗೆ ದೂರವಾಗಿರಲಿ.ಇದು ಜೀವದಾಶೆ ತೊರೆದವರ ರಕ್ತ; ಇದನ್ನು ಕುಡಿಯುವುದೇ ಇಲ್ಲ,” ಎಂದು ಹೇಳಿ ಅದನ್ನು ಸರ್ವೇಶ್ವರನಿಗೆ ಸಮರ್ಪಣೆಯಾಗಿ ಹೊರಗೆ ಹೊಯ್ದುಬಿಟ್ಟನು. ಆ ಮೂರುಮಂದಿ ಪರಾಕ್ರಮಿಗಳ ಕೃತ್ಯಗಳಿವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)17 ಯೆಹೋವನೇ, ಈ ನೀರನ್ನು ಕುಡಿಯುವದು ನನಗೆ ದೂರವಾಗಿರಲಿ. ಇದು ಜೀವದಾಶೆ ತೊರೆದವರ ರಕ್ತ! ಇದನ್ನು ಕುಡಿಯುವದೇ ಇಲ್ಲ ಎಂದು ಹೇಳಿ ಅದನ್ನು ಯೆಹೋವನ ಮುಂದೆ ಹೊಯ್ದನು. ಆ ಮೂರು ಮಂದಿಯ ಪರಾಕ್ರಮವು ಇದೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಯೆಹೋವನೇ, ನಾನು ಈ ನೀರನ್ನು ಕುಡಿಯುವುದಿಲ್ಲ. ನಾನು ಈ ನೀರನ್ನು ಕುಡಿದರೆ, ನನಗಾಗಿ ತಮ್ಮ ಪ್ರಾಣಗಳನ್ನೇ ಆಪತ್ತಿಗೀಡುಮಾಡಿಕೊಂಡಿದ್ದ ಜನರ ರಕ್ತವನ್ನು ಕುಡಿದಂತಾಗುತ್ತದೆ” ಎಂದು ಹೇಳಿದನು. ಈ ಕಾರಣದಿಂದಲೇ ದಾವೀದನು ಆ ನೀರನ್ನು ಕುಡಿಯಲು ನಿರಾಕರಿಸಿದನು. ಈ ಮೂವರು ಪರಾಕ್ರಮಿಗಳು ಈ ರೀತಿಯ ಅನೇಕ ಕಾರ್ಯಗಳನ್ನು ಮಾಡಿದರು. ಅಧ್ಯಾಯವನ್ನು ನೋಡಿ |
“ಆದ್ದರಿಂದ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಹೇಳುವುದೇನೆಂದರೆ, ‘ನಿನ್ನ ಮನೆಯವರೂ ನಿನ್ನ ತಂದೆಯ ಮನೆಯವರೂ ಎಂದೆಂದಿಗೂ ನನ್ನ ಸನ್ನಿಧಿಯಲ್ಲಿ ನಡೆದುಕೊಳ್ಳುವರೆಂದು ನಾನು ನಿಜವಾಗಿ ಹೇಳಿದ್ದೆನು. ಆದರೆ ಈಗ ಯೆಹೋವ ದೇವರು ಹೇಳುವುದೇನೆಂದರೆ: ನನಗೆ ಅದು ದೂರವಾಗಿರಲಿ. ಏಕೆಂದರೆ ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು. ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.