2 ಸಮುಯೇಲ 23:18 - ಕನ್ನಡ ಸಮಕಾಲಿಕ ಅನುವಾದ18 ಯೋವಾಬನ ಸಹೋದರ ಚೆರೂಯಳ ಮಗ ಅಬೀಷೈಯನು ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ಮುನ್ನೂರು ಮಂದಿಗೆ ವಿರೋಧವಾಗಿ ತನ್ನ ಈಟಿಯನ್ನು ಎತ್ತಿ ಅವರನ್ನು ಕೊಂದುಹಾಕಿದ್ದರಿಂದ, ಮೂವರಂತೆ ಹೆಸರುಗೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಜನರಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ, ಮುನ್ನೂರು ಜನರನ್ನು ಕೊಂದು ಈ ಮೂವರಲ್ಲಿ ಕೀರ್ತಿಹೊಂದಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಭರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದುದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಚೆರೂಯಳ ಮಗನೂ ಯೋವಾಬನ ತಮ್ಮನೂ ಆದ ಅಬೀಷೈಯು ಈ ಮೂರು ಮಂದಿಯಲ್ಲಿ ಮುಖ್ಯಸ್ಥನು. ಅವನು ತನ್ನ ಬರ್ಜಿಯನ್ನು ಬೀಸುತ್ತಾ ಹೋಗಿ ಮುನ್ನೂರು ಮಂದಿಯನ್ನು ಕೊಂದದರಿಂದ ಈ ಮೂವರಲ್ಲಿ ಕೀರ್ತಿಗೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಚೆರೂಯಳ ಮಗನೂ ಯೋವಾಬನ ಸೋದರನೂ ಆದ ಅಬೀಷೈಯನು ಈ ಮೂವರು ಪರಾಕ್ರಮಿಗಳಿಗೆ ನಾಯಕನು. ಅಬೀಷೈಯನು ಮುನ್ನೂರು ಮಂದಿ ಶತ್ರುಗಳ ವಿರುದ್ಧ ತನ್ನ ಬರ್ಜಿಯನ್ನು ಬಳಸಿ ಅವರನ್ನು ಕೊಂದನು. ಅವನೂ ಈ ಮೂವರಂತೆಯೇ ಪ್ರಸಿದ್ಧನಾದನು. ಅಧ್ಯಾಯವನ್ನು ನೋಡಿ |