Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:34 - ಕನ್ನಡ ಸಮಕಾಲಿಕ ಅನುವಾದ

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟನು; ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ ಎಂಬುವನ ಮಗನಾದ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

34 ಮಾಕಾ ಊರಿನ ಅಹಸ್ಬೈ ಎಂಬುವನ ಮಗ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಮಾಕಾ ಊರಿನ ಅಹಸ್ಬೈ ಎಂಬವನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲ್ ಎಂಬವನ ಮಗನಾದ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಮಾಕಾದ ಅಹಸ್ಬೈನ ಮಗನಾದ ಎಲೀಫೆಲೆಟ್, ಗಿಲೋವಿನ ಅಹೀತೋಫೆಲನ ಮಗ ಎಲೀಯಾಮ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:34
10 ತಿಳಿವುಗಳ ಹೋಲಿಕೆ  

ಆ ಸ್ತ್ರೀಯು ಬಹು ಸೌಂದರ್ಯವುಳ್ಳ ರೂಪವತಿಯಾಗಿದ್ದಳು. ಆಗ ದಾವೀದನು ಆ ಸ್ತ್ರೀ ಯಾರೆಂದು ಕೇಳುವುದಕ್ಕೆ ಕಳುಹಿಸಿದಾಗ ಒಬ್ಬನು, “ಅವಳು ಎಲೀಯಾಮನ ಮಗಳೂ, ಹಿತ್ತಿಯನಾದ ಊರೀಯನ ಹೆಂಡತಿಯೂ ಬತ್ಷೆಬೆಳು,” ಎಂದನು.


ಅಬ್ಷಾಲೋಮನು ಬಲಿಗಳನ್ನು ಅರ್ಪಿಸುತ್ತಿರುವಾಗ, ದಾವೀದನ ಆಲೋಚನಾಗಾರನಾಗಿರುವ ಗಿಲೋವಿನ ಅಹೀತೋಫೆಲನನ್ನು ಗಿಲೋವೆಂಬ ಅವನ ಪಟ್ಟಣದಿಂದ ಕರೆಕಳುಹಿಸಿದನು. ಅಬ್ಷಾಲೋಮನ ಸಂಗಡ ಕೂಡುವ ಜನರು ಆಗಾಗ್ಗೆ ಹೆಚ್ಚಿದ್ದರಿಂದ, ಒಳಸಂಚಿನ ಗುಂಪು ಬಲವಾಯಿತು.


ಆದರೆ ಅಹೀತೋಫೆಲನು ತನ್ನ ಯೋಚನೆಯ ಪ್ರಕಾರ ನಡೆಯಲಿಲ್ಲವೆಂದು ನೋಡಿದಾಗ, ತನ್ನ ಕತ್ತೆಯ ಮೇಲೆ ತಡಿಯನ್ನು ಹಾಕಿ ಏರಿ, ತನ್ನ ಪಟ್ಟಣದಲ್ಲಿರುವ ತನ್ನ ಮನೆಗೆ ಹೋದನು. ಅವನು ಮನೆಯನ್ನು ಕ್ರಮಪಡಿಸಿ, ಉರುಲು ಹಾಕಿಕೊಂಡು ಸತ್ತನು. ಅವನ ಶವವನ್ನು ಅವನ ತಂದೆಯ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು.


ಅಹೀತೋಫೆಲನು ಅಬ್ಷಾಲೋಮನ ಬಳಿಯಲ್ಲಿ ಒಳಸಂಚಿನವರ ಸಂಗಡ ಇದ್ದಾನೆಂದು ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು, “ಯೆಹೋವ ದೇವರೇ, ಅಹೀತೋಫೆಲನ ಆಲೋಚನೆಯನ್ನು ಹುಚ್ಚುತನವನ್ನಾಗಿ ಮಾಡಿಬಿಡು,” ಎಂದನು.


ಆಗ ಅಮ್ಮೋನಿಯರು ಹೊರಟು ಪಟ್ಟಣದ ದ್ವಾರದ ಹತ್ತಿರ ವ್ಯೂಹ ಕಟ್ಟಿದರು. ಆದರೆ ಚೋಬಾದಿಂದಲೂ ರೆಹೋಬಿನಿಂದಲೂ ಟೋಬಿನಿಂದಲೂ ಮಾಕಾನಿಂದಲೂ ಬಂದ ಅರಾಮ್ಯರು ಪ್ರತ್ಯೇಕವಾಗಿ ಬೈಲಿನಲ್ಲಿ ಇಳಿದುಕೊಂಡಿದ್ದರು.


ತಾವು ದಾವೀದನಿಗೆ ಅಸಹ್ಯರಾದೆವೆಂದು ಅಮ್ಮೋನಿಯರಿಗೆ ತಿಳಿಯಿತು. ಆದ್ದರಿಂದ ಅವರು ದೂತರನ್ನು ಕಳುಹಿಸಿ ಬೇತ್‌ರೆಹೋಬ್, ಚೋಬಾ ಎಂಬ ಪಟ್ಟಣಗಳಿಂದ ಇರುವ ಇಪ್ಪತ್ತು ಸಾವಿರ ಕಾಲಾಳುಗಳಾದ ಅರಾಮ್ಯರನ್ನೂ, ಟೋಬ್ ದೇಶದಿಂದ ಹನ್ನೆರಡು ಸಾವಿರ ಜನರನ್ನೂ, ಮಾಕದ ಅರಸನನ್ನೂ ಅವನ ಸಾವಿರ ಜನರನ್ನೂ ಕೂಲಿಗೆ ತೆಗೆದುಕೊಂಡರು.


ಶೆಬನು ಇಸ್ರಾಯೇಲಿನ ಎಲ್ಲಾ ಗೋತ್ರಗಳಲ್ಲಿ ಹಾದು ಬೇತ್ ಮಾಕದ ಆಬೇಲಿಗೆ ಬಂದು, ಬೇರ‍್ಯರ ಪ್ರದೇಶದ ಮಾರ್ಗವಾಗಿ ಹೋದನು. ಆಗ ಬೇರ‍್ಯರು ಕೂಡಿಕೊಂಡು ಅವನ ಸಂಗಡ ಹೋದರು.


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ಆಗ ದಾವೀದನು ಹಿತ್ತಿಯನಾದ ಅಹೀಮೆಲೆಕನನ್ನು ಮತ್ತು ಚೆರೂಯಳ ಮಗನಾಗಿರುವ ಯೋವಾಬನ ಸಹೋದರ ಅಬೀಷೈಯನ್ನು ನೋಡಿ, “ನನ್ನ ಸಂಗಡ ಸೌಲನ ದಂಡಿನಲ್ಲಿ ಪ್ರವೇಶಿಸಲು ಬರುವವರು ಯಾರು?” ಎಂದು ಕೇಳಿದನು. ಅದಕ್ಕೆ ಅಬೀಷೈಯನು, “ನಾನು ನಿನ್ನ ಸಂಗಡ ಬರುವೆನು,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು