Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 23:5 - ಕನ್ನಡ ಸಮಕಾಲಿಕ ಅನುವಾದ

5 “ನನ್ನ ಮನೆ ದೇವರೊಂದಿಗೆ ಸರಿಯಾಗಿರದಿದ್ದರೆ, ನಿಶ್ಚಯವಾಗಿಯೂ ಅವರು ನನ್ನೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತಿರಲಿಲ್ಲ, ಪ್ರತಿಯೊಂದು ವಿಭಾಗದಲ್ಲಿಯೂ ವ್ಯವಸ್ಥೆಗೊಳಿಸಲಾಗಿದೆ ಮತ್ತು ಭದ್ರಪಡಿಸಲಾಗಿದೆ. ದೇವರು ನಿಶ್ಚಯವಾಗಿಯೂ ನನ್ನ ರಕ್ಷಣೆಯನ್ನು ಪೂರ್ತಿಗೊಳಿಸುವುದಿಲ್ಲ. ದೇವರು ನನ್ನ ಎಲ್ಲಾ ಅಪೇಕ್ಷೆಗಳನ್ನು ಪೂರೈಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಹೀಗೆಯೇ ಸ್ಥಿರವಾಗಿರುತ್ತದಲ್ಲವೇ? ಆತನು ನನ್ನೊಡನೆ ಒಡಂಬಡಿಕೆ ಮಾಡಿಕೊಂಡಿದ್ದಾನಲ್ಲವೋ? ಅದು ಎಂದಿಗೂ ಬಿದ್ದುಹೋಗದೆ ಎಲ್ಲಾ ವಿಷಯಗಳಲ್ಲಿಯೂ ಖಚಿತವಾಗಿರುತ್ತದೆ. ನನ್ನ ರಕ್ಷಣೆಯ ಮೂಲವೂ, ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಹೌದು, ಸರ್ವೇಶ್ವರನ ಸನ್ನಿಧಿಯಲಿ ನನ್ನ ಮನೆತನ ಸುಸ್ಥಿರ ಆತನೊಂದಿಗೆ ನಾ ಮಾಡಿಲ್ಲವೆ ಚಿರವಾದ ಒಪ್ಪಂದ? ಅದೆಲ್ಲದರಲು ಸುವ್ಯವಸ್ಥಿತ, ಅದೆಂದಿಗೂ ನಿರ್ಭೀತ. ಆತನೇ ನನ್ನುದ್ಧಾರಕ್ಕೆ ಮೂಲಾಧಾರ ನನ್ನ ಆಶೆ ಆಕಾಂಕ್ಷೆಗಳ ಪೂರೈಸುವಾತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನನ್ನ ಮನೆಯು ಯೆಹೋವನ ಸನ್ನಿಧಿಯಲ್ಲಿ ಸ್ಥಿರವಾಗಿರುತ್ತದಲ್ಲವೋ? ಆತನು ನನ್ನೊಡನೆ ಒಡಂಬಡಿಕೆಮಾಡಿಕೊಂಡಿದ್ದಾನೆ; ಅದು ಎಂದಿಗೂ ಬಿದ್ದು ಹೋಗುವದಿಲ್ಲ, ಎಲ್ಲಾ ವಿಷಯಗಳಲ್ಲಿ ಖಂಡಿತವಾಗಿದೆ. ನನ್ನ ರಕ್ಷಣೆಯ ಮೂಲವೂ ನನ್ನ ಅಭಿಲಾಷೆಯನ್ನು ಪೂರ್ತಿಗೊಳಿಸುವವನೂ ಆತನೇ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯೆಹೋವನು ನನ್ನ ಕುಟುಂಬವನ್ನು ಸ್ಥಿರಗೊಳಿಸಿದನು. ಆತನು ನನ್ನೊಡನೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಂಡನು. ಆತನು ಈ ಒಡಂಬಡಿಕೆಯನ್ನು ಸಂಪೂರ್ಣವಾಗಿ ಸುಭದ್ರಗೊಳಿಸಿದನು. ಆತನು ನನಗೆ ಎಲ್ಲೆಲ್ಲಿಯೂ ಜಯ ಕೊಡುವನು. ಆತನು ನನಗೆ ಬೇಕಾದದ್ದನ್ನೆಲ್ಲಾ ಕೊಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 23:5
41 ತಿಳಿವುಗಳ ಹೋಲಿಕೆ  

ಕಿವಿಯನ್ನು ಇತ್ತ ತಿರುಗಿಸಿರಿ, ನನ್ನ ಬಳಿಗೆ ಬನ್ನಿರಿ, ಆಲಿಸಿದರೆ ಬದುಕಿ ಬಾಳುವಿರಿ. ದಾವೀದನಿಗೆ ಖಂಡಿತವಾಗಿ ವಾಗ್ದಾನ ಮಾಡಿದ ಕೃಪಾವರಗಳನ್ನು ನಿಮಗೆ ಕೊಡುತ್ತೇನೆಂಬ ಶಾಶ್ವತವಾದ ಒಡಂಬಡಿಕೆಯನ್ನು ನಿಮ್ಮೊಂದಿಗೆ ಮಾಡಿಕೊಳ್ಳುವೆನು.


ಅವರಿಗೆ ಒಳ್ಳೆಯದನ್ನು ಮಾಡುವ ಹಾಗೆ ನಾನು ತಿರುಗಿಸಿಬಿಡೆನೆಂದು ನಿತ್ಯವಾದ ಒಡಂಬಡಿಕೆಯನ್ನು ಅವರ ಸಂಗಡ ಮಾಡುತ್ತೇನೆ. ಅವರು ನನ್ನನ್ನು ಬಿಡದ ಹಾಗೆ ಭಯವನ್ನು ಅವರ ಹೃದಯದಲ್ಲಿ ಇಡುತ್ತೇನೆ.


ಕುರಿ ಹಿಂಡಿಗೆ ಮಹಾಕುರುಬ ಆಗಿರುವ ನಮ್ಮ ಕರ್ತ ಯೇಸುವನ್ನು ನಿತ್ಯಒಡಂಬಡಿಕೆಯ ರಕ್ತದ ಮೂಲಕ ಸಮಾಧಾನದ ದೇವರು ಸತ್ತವರೊಳಗಿಂದ ಜೀವಂತವಾಗಿ ಬರಮಾಡಿದರು.


ಈ ನಿರೀಕ್ಷೆಯು ನಮ್ಮ ಆತ್ಮಕ್ಕೆ ನಿಶ್ಚಯವಾದದ್ದೂ ಸ್ಥಿರವಾದದ್ದೂ ಆಗಿರುವ ಲಂಗರದ ಹಾಗಿದೆ. ಅದು ಅತಿ ಪರಿಶುದ್ಧಸ್ಥಳದ ತೆರೆಯ ಒಳಗಡೆ ಪ್ರವೇಶಿಸುವಂಥದ್ದೂ ಆಗಿದೆ.


ಹೀಗೆ ಯೇಸುವನ್ನು ಸಮಾಧಿಯಲ್ಲಿ ಕೊಳೆಯಲು ಬಿಡದೇ ದೇವರು ಅವರನ್ನು ಜೀವಂತವಾಗಿ ಎಬ್ಬಿಸಿದ ಸತ್ಯವು ಈ ಮಾತುಗಳಲ್ಲಿ ಬಂದಿದೆ: “ ‘ನಾನು ದಾವೀದನಿಗೆ ವಾಗ್ದಾನ ಮಾಡಿದ ಪವಿತ್ರ ಹಾಗೂ ನಿಶ್ಚಯವಾದ ಆಶೀರ್ವಾದಗಳನ್ನು ನಿಮಗೆ ಕೊಡುವೆನು’


ಆ ದಿನದಲ್ಲಿ, ಬಿದ್ದುಹೋದ ದಾವೀದನ ಗುಡಾರವನ್ನು ನಾನು ನಿಲ್ಲಿಸಿ ಅದರ ಮುರಿದ ಗೋಡೆಗಳನ್ನು ಸರಿಪಡಿಸುತ್ತೇನೆ. ಮತ್ತು ಅದರ ಅವಶೇಷಗಳನ್ನು ಪುನಃಸ್ಥಾಪಿಸಿ ಮತ್ತು ಅದನ್ನು ಮೊದಲಿನಂತೆ ಪುನಃ ನಿರ್ಮಿಸುವೆನು.


ಇದಾದ ಮೇಲೆ ನಾನು ಅವರೊಂದಿಗೆ ಸಮಾಧಾನದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. ಇದು ಅವರೊಂದಿಗೆ ನಿತ್ಯವಾದ ಒಡಂಬಡಿಕೆಯಾಗಿರುವುದು. ನಾನು ಅವರನ್ನು ನೆಲೆಗೊಳಿಸಿ ವೃದ್ಧಿಗೊಳಿಸುವೆನು. ನನ್ನ ಪರಿಶುದ್ಧ ಸ್ಥಳವನ್ನು ಎಂದೆಂದಿಗೂ ಅವರ ಮಧ್ಯದಲ್ಲಿಡುವೆನು.


ಏಕೆಂದರೆ ಯೆಹೋವನಾದ ನಾನು ನ್ಯಾಯವನ್ನು ಪ್ರೀತಿಮಾಡುತ್ತೇನೆ. ಸುಲಿಗೆಯನ್ನೂ ಅನ್ಯಾಯವನ್ನೂ ಹಗೆಮಾಡುತ್ತೇನೆ. ನನ್ನ ನಿಷ್ಠೆಯಲ್ಲಿ ನಾನು ನನ್ನ ಜನರಿಗೆ ಪ್ರತಿಫಲ ನೀಡುತ್ತೇನೆ ಮತ್ತು ಅವರೊಂದಿಗೆ ಶಾಶ್ವತವಾದ ಒಡಂಬಡಿಕೆಯನ್ನು ಮಾಡಿಕೊಳ್ಳುತ್ತೇನೆ.


ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು. ಇಸ್ರಾಯೇಲು ಹೂ ಅರಳಿ ಚಿಗುರುವುದು. ಭೂಲೋಕವನ್ನೆಲ್ಲಾ ಫಲದಿಂದ ತುಂಬಿಸುವನು.


ಇಷಯನ ಬುಡದಿಂದ ಒಂದು ಚಿಗುರು ಒಡೆಯುವುದು ಮತ್ತು ಅದರ ಬೇರಿನಿಂದ ಕೊಂಬೆಯು ಫಲಕೊಡುವುದು.


ಆದಕಾರಣ ಯೆಹೋವ ದೇವರು ತಾವೇ ಒಂದು ಗುರುತನ್ನು ನಿನಗೆ ಕೊಡುವರು. ಇಗೋ, ಒಬ್ಬ ಕನ್ನಿಕೆಯು ಗರ್ಭಿಣಿಯಾಗಿ ಮಗನನ್ನು ಹೆರುವಳು. ಆ ಮಗುವಿಗೆ, ‘ಇಮ್ಮಾನುಯೇಲ್’ ಎಂದು ಹೆಸರಿಡುವರು.


ಆ ದಿನದಲ್ಲಿ ಯೆಹೋವ ದೇವರ ಕೊಂಬೆಯು ಸುಂದರವಾಗಿಯೂ, ಮಹಿಮೆಯುಳ್ಳದ್ದಾಗಿಯೂ ಇರುವುದು. ಭೂಮಿಯ ಫಲವು ಇಸ್ರಾಯೇಲರಲ್ಲಿ ಉಳಿದವರಿಗೆ ಅಭಿಮಾನವೂ, ರಮ್ಯವಾಗಿಯೂ ಇರುವುದು.


ನನ್ನ ಪ್ರಾಣವು ನಿಮ್ಮ ರಕ್ಷಣೆಯ ಬಯಕೆಯಿಂದಲೇ ಕುಗ್ಗಿ ಹೋಗುತ್ತಿದೆ, ಆದರೂ ನಾನು ನಿಮ್ಮ ವಾಕ್ಯದಲ್ಲಿ ನಿರೀಕ್ಷೆ ಇಟ್ಟಿದ್ದೇನೆ.


ನೀವು ಹೇಳಿದ್ದೇನಂದರೆ, “ನಾನು ಆಯ್ದುಕೊಂಡವನ ಸಂಗಡ ನಾನು ಒಡಂಬಡಿಕೆ ಮಾಡಿಕೊಂಡಿದ್ದೇನೆ. ನಾನು ನನ್ನ ಸೇವಕನಾದ ದಾವೀದನಿಗೆ ಪ್ರಮಾಣ ಮಾಡಿದ್ದೇನೆ.


ದೇವರು ಮಾತ್ರವೇ ನನ್ನ ಬಂಡೆಯೂ ನನ್ನ ರಕ್ಷಣೆಯೂ, ನನ್ನ ಕೋಟೆಯೂ ಆಗಿದ್ದಾರೆ. ನಾನೆಂದಿಗೂ ಕದಲೆನು.


ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.


ಯುವಕರ ಆಲೋಚನೆಯ ಪ್ರಕಾರ ಅವರ ಸಂಗಡ ಮಾತನಾಡಿ ಅವರಿಗೆ, “ನನ್ನ ತಂದೆಯು ನಿಮ್ಮ ನೊಗವನ್ನು ಭಾರವಾಗಿ ಮಾಡಿದನು. ನಾನು ಅದನ್ನು ಇನ್ನೂ ಹೆಚ್ಚು ಭಾರ ಮಾಡುತ್ತೇನೆ. ನನ್ನ ತಂದೆಯು ನಿಮ್ಮನ್ನು ಬಾರುಕೋಲುಗಳಿಂದ ಶಿಕ್ಷಿಸಿದನು. ಆದರೆ ನಾನು ಮುಳ್ಳು ಕೊರಡೆಗಳಿಂದ ಶಿಕ್ಷಿಸುವೆನು,” ಎಂದನು.


ನಾನು ನಿನಗೆ ಆಜ್ಞಾಪಿಸಿದ್ದೆಲ್ಲಾ ನೀನು ಕೇಳಿ, ನನ್ನ ಮಾರ್ಗಗಳಲ್ಲಿ ನಡೆದು, ನನ್ನ ಸೇವಕನಾದ ದಾವೀದನು ಮಾಡಿದ ಹಾಗೆ, ನನ್ನ ತೀರ್ಪುಗಳನ್ನೂ, ನನ್ನ ಆಜ್ಞೆಗಳನ್ನೂ ಕೈಗೊಂಡು, ನನ್ನ ದೃಷ್ಟಿಗೆ ಯಥಾರ್ಥವಾದದ್ದನ್ನು ಮಾಡಿದರೆ, ನಾನು ನಿನ್ನ ಸಂಗಡ ಇದ್ದು ದಾವೀದನ ಸಂತಾನದಂತೆ ನಿನ್ನ ಸಂತಾನವನ್ನೂ ಸ್ಥಿರಪಡಿಸಿ, ಇಸ್ರಾಯೇಲನ್ನು ನಿನಗೆ ಕೊಡುವೆನು.


ಆಗ ಹಗ್ಗೀತಳ ಮಗನಾದ ಅದೋನೀಯನು ತನ್ನನ್ನು ಹೆಚ್ಚಿಸಿಕೊಂಡು, “ನಾನು ಅರಸನಾಗಿರಬೇಕು,” ಎಂದುಕೊಂಡು, ತನಗೋಸ್ಕರ ರಥಗಳನ್ನೂ, ಸಾರಥಿಯರನ್ನೂ, ತನ್ನ ಮುಂದೆ ಓಡುವುದಕ್ಕೆ ಐವತ್ತು ಮಂದಿ ಪುರುಷರನ್ನೂ ಸಿದ್ಧಮಾಡಿದನು.


ಆಗ ಯೋವಾಬನು, “ನಾನು ಹೀಗೆ ನಿನ್ನ ಮುಂದೆ ಆಲಸ್ಯ ಮಾಡೆನು,” ಎಂದು ಹೇಳಿ, ಮೂರು ಈಟಿಗಳನ್ನು ತನ್ನ ಕೈಯಲ್ಲಿ ತೆಗೆದುಕೊಂಡು, ಅಬ್ಷಾಲೋಮನು ಇನ್ನೂ ಏಲಾ ಮರದ ಮಧ್ಯದಲ್ಲಿ ಜೀವದಿಂದಿರುವಾಗ, ಅವುಗಳನ್ನು ಅವನ ಹೃದಯದಲ್ಲಿ ತಿವಿದನು.


ಅಬ್ಷಾಲೋಮನು ತನ್ನ ಸೇವಕರಿಗೆ, “ನೀವು ನೋಡಿಕೊಳ್ಳಿರಿ. ಅಮ್ನೋನನ ಮನಸ್ಸು ದ್ರಾಕ್ಷಾರಸದಿಂದ ಅಮಲೇರಿದಾಗ ನಾನು ನಿಮಗೆ ಅವನನ್ನು ಹೊಡೆಯಿರಿ ಎಂದು ಹೇಳಿದಕೂಡಲೆ, ಅವನನ್ನು ಕೊಂದುಹಾಕಿರಿ, ಭಯಪಡಬೇಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೇನಲ್ಲಾ, ಧೈರ್ಯವಾಗಿರಿ, ಶೂರರಾಗಿರಿ,” ಎಂದು ಹೇಳಿದನು.


ಆದರೆ ಅವನು ಅವಳ ಮಾತನ್ನು ಕೇಳಲಿಲ್ಲ. ಅಮ್ನೋನನು ಆಕೆಗಿಂತಲೂ ಬಲಶಾಲಿಯಾಗಿದ್ದರಿಂದ ಅವನು ಬಲಾತ್ಕಾರದಿಂದ ಅವಳ ಮೇಲೆ ಅತ್ಯಾಚಾರಮಾಡಿದನು.


ಈಗ ನೀನು ನನ್ನನ್ನು ತಿರಸ್ಕರಿಸಿ, ಹಿತ್ತಿಯನಾದ ಊರೀಯನ ಹೆಂಡತಿಯನ್ನು ನಿನಗೆ ಹೆಂಡತಿಯಾಗಿ ತೆಗೆದುಕೊಂಡದ್ದರಿಂದ, ಖಡ್ಗವು ಎಂದಿಗೂ ನಿನ್ನ ಮನೆಯನ್ನು ಬಿಟ್ಟು ತೊಲಗದು.


ಅನಂತರ ಅರಸನಾದ ದಾವೀದನು ಒಳಗೆ ಪ್ರವೇಶಿಸಿ, ಯೆಹೋವ ದೇವರ ಸನ್ನಿಧಿಯಲ್ಲಿ ಕುಳಿತುಕೊಂಡು, “ಸಾರ್ವಭೌಮ ಯೆಹೋವ ದೇವರೇ, ನನ್ನಂಥವನಿಗೆ ನೀವು ಈ ಪದವಿಯನ್ನು ಅನುಗ್ರಹಿಸಿ, ಇಷ್ಟು ಮುಂದಕ್ಕೆ ತರಲು ನಾನೆಷ್ಟರವನು? ನನ್ನ ಕುಟುಂಬ ಎಷ್ಟರದು?


“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.


ಆದರೆ ನನ್ನ ಹೃದಯಕ್ಕೂ, ನನ್ನ ಮನಸ್ಸಿಗೂ ಸಮರ್ಪಕವಾದದ್ದನ್ನೇ ಮಾಡುವ ನಂಬಿಗಸ್ತನಾದ ಒಬ್ಬ ಯಾಜಕನನ್ನು ನನಗೋಸ್ಕರ ಎಬ್ಬಿಸಿ, ಅವನಿಗೆ ಸ್ಥಿರವಾದ ಮನೆಯನ್ನು ಕಟ್ಟುವೆನು. ಅವನು ನನ್ನ ಅಭಿಷಿಕ್ತನ ಮುಂದೆ ನಿರಂತರವಾಗಿ ಸೇವೆಮಾಡುವನು.


ಆ ಮಳೆಬಿಲ್ಲು ಮೇಘಗಳಲ್ಲಿರುವಾಗ, ದೇವರಾದ ನನಗೂ ಭೂಮಿಯ ಮೇಲಿರುವ ಎಲ್ಲಾ ಜೀವಜಂತುಗಳಿಗೂ ಮಧ್ಯದಲ್ಲಿ ಇರುವ ನಿತ್ಯವಾದ ಒಡಂಬಡಿಕೆಯನ್ನು ಜ್ಞಾಪಕ ಮಾಡಿಕೊಳ್ಳುವ ಹಾಗೆ, ನಾನು ಅದನ್ನು ನೋಡುವೆನು.”


ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ಪರ್ವತಗಳು ಸ್ಥಳವನ್ನು ಬಿಟ್ಟು ಹೋದರೂ, ಬೆಟ್ಟಗಳು ಕದಲಿ ಹೋದರೂ, ನನ್ನ ಕುಂದದ ಪ್ರೀತಿಯು ನಿನ್ನನ್ನು ಬಿಟ್ಟು ಹೋಗದು, ನನ್ನ ಸಮಾಧಾನದ ಒಡಂಬಡಿಕೆಯು ನಿನ್ನನ್ನು ಬಿಟ್ಟು ಕದಲದು,” ಎಂದು ನಿನ್ನನ್ನು ಕರುಣಿಸುವ ಯೆಹೋವ ದೇವರು ಹೇಳುತ್ತಾರೆ.


ಆಗುವುದಾದರೆ ಮಾತ್ರ ನನ್ನ ದಾಸ ದಾವೀದನೊಂದಿಗೆ ನನ್ನ ಪರಿಚಾರಕರಾದ ಲೇವಿ ಕುಲದ ಯಾಜಕರೊಂದಿಗೆ ನಾನು ಮಾಡಿದ ಒಡಂಬಡಿಕೆ ನಿಂತುಹೋಗುವುದು ಮತ್ತು ದಾವೀದನ ಸಿಂಹಾಸನವನ್ನು ಏರಿ ಆಳತಕ್ಕ ಅವನ ಸಂತಾನದವನು ಒಬ್ಬನೂ ಇಲ್ಲವಾಗುವನು.


ದೇವರು ತಮ್ಮ ಜನರಿಗೆ ವಿಮೋಚನೆಯನ್ನು ಕಳುಹಿಸಿದರು; ಯುಗಯುಗಕ್ಕೂ ತಮ್ಮ ಒಡಂಬಡಿಕೆಯನ್ನು ಸ್ಥಾಪಿಸಿದ್ದಾರೆ; ದೇವರ ಹೆಸರು ಪರಿಶುದ್ಧರು, ಅತಿಶಯರು ಎಂಬುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು