2 ಸಮುಯೇಲ 23:8 - ಕನ್ನಡ ಸಮಕಾಲಿಕ ಅನುವಾದ8 ದಾವೀದನ ಪರಾಕ್ರಮಶಾಲಿಗಳ ಹೆಸರುಗಳು ಇವೇ: ಮೂರು ಜನ ಮುಖ್ಯಸ್ಥರಲ್ಲಿ ಒಬ್ಬನು ತಹ್ಕೆಮೋನ್ಯನಾದ ಯೋಷೆಬ್ ಬಷ್ಷೆಬೆತ ಎಂಬವನು; ಇವನು ತನ್ನ ಈಟಿಯಿಂದ ಎಂಟುನೂರು ಮಂದಿಗೆ ವಿರೋಧವಾಗಿ ಹೋರಾಡಿ ಅವರನ್ನು ಒಂದೇ ಕಾಳಗದಲ್ಲಿ ಕೊಂದುಹಾಕಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ದಾವೀದನೊಂದಿಗಿದ್ದ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷಬ್ ಬಷ್ಬೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ದಾವೀದನ ರಣವೀರರ ಪಟ್ಟಿ: ತಹ್ಕೆಮೋನ್ಯನಾದ ಯೋಷೆಬಷ್ಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಎನ್ನಿಸಿಕೊಳ್ಳುವ ಇವನು ಒಮ್ಮೆಗೆ ಎಂಟುನೂರು ಮಂದಿಯನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ದಾವೀದನ ರಣವೀರರ ಪಟ್ಟಿ - ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು ಸರದಾರರಲ್ಲಿ ಮುಖ್ಯಸ್ಥನು. ಎಚ್ನೀಯನಾದ ಅದೀನೋ ಅನ್ನಿಸಿಕೊಳ್ಳುವ ಇವನು ಒಂದೇ ಸಾರಿ ಎಂಟುನೂರು ಮಂದಿಯನ್ನು ಕೊಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ದಾವೀದನ ಶೂರಸೈನಿಕರ ಹೆಸರುಗಳು ಹೀಗಿವೆ: ತಹ್ಕೆಮೋನ್ಯನಾದ ಯೋಷೆಬಷ್ಷೆಬೆತನು. ಮೂವರು ವೀರರಿಗೆ ಯೋಷೆಬಷ್ಷೆಬೆತನು ಮುಖ್ಯಸ್ಥನಾಗಿದ್ದನು. ಅವನನ್ನು ಎಚ್ನೀಯನಾದ ಅದೀನೋ ಎಂದೂ ಕರೆಯುತ್ತಿದ್ದರು. ಯೋಷೆಬಷ್ಷೆಬೆತನು ಏಕಕಾಲದಲ್ಲಿ ಎಂಟುನೂರು ಜನರನ್ನು ಕೊಂದನು. ಅಧ್ಯಾಯವನ್ನು ನೋಡಿ |