Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:1 - ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರ ಕೋಪವು ತಿರುಗಿ ಇಸ್ರಾಯೇಲಿಗೆ ವಿರೋಧವಾಗಿ ಉರಿಯಿತು. ಆಗ ದೇವರು, “ಯೆಹೂದ ಮತ್ತು ಇಸ್ರಾಯೇಲರ ಜನಗಣತಿ ಮಾಡು,” ಎಂದು ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಪುನಃ ಇಸ್ರಾಯೇಲರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಮತ್ತು ಯೆಹೂದ ಕುಲಗಳವರ ಜನಗಣತಿ ಮಾಡುವುದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರಸ್ವಾಮಿ ಮತ್ತೆ ಇಸ್ರಯೇಲರ ಮೇಲೆ ಕೋಪಗೊಂಡರು. ಇಸ್ರಯೇಲ್ ಹಾಗು ಯೆಹೂದ್ಯಕುಲಗಳವರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಯೆಹೋವನು ತಿರಿಗಿ ಇಸ್ರಾಯೇಲ್ಯರ ಮೇಲೆ ಕೋಪಗೊಂಡು ದಾವೀದನನ್ನು ಇಸ್ರಾಯೇಲ್ ಯೆಹೂದ್ಯ ಕುಲಗಳವರ ಖಾನೇಷುಮಾರಿಮಾಡುವದಕ್ಕೆ ಪ್ರೇರೇಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಇಸ್ರೇಲರ ಮೇಲೆ ಮತ್ತೆ ಕೋಪಗೊಂಡು ಇಸ್ರೇಲರ ವಿರುದ್ಧನಾಗುವಂತೆ ದಾವೀದನನ್ನು ಪ್ರೇರೇಪಿಸಿದನು. ದಾವೀದನು, “ಇಸ್ರೇಲಿನ ಮತ್ತು ಯೆಹೂದದ ಜನಗಣತಿ ಮಾಡಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:1
23 ತಿಳಿವುಗಳ ಹೋಲಿಕೆ  

ಸೈತಾನನು ಇಸ್ರಾಯೇಲಿಗೆ ವಿರೋಧವಾಗಿ ಎದ್ದು, ಇಸ್ರಾಯೇಲರ ಜನಗಣತಿ ಮಾಡುವುದಕ್ಕೆ ದಾವೀದನನ್ನು ಪ್ರೇರೇಪಿಸಿದನು.


ನಿಮ್ಮ ಶಕ್ತಿಯೂ ಚಿತ್ತವೂ ಮುಂಚಿತವಾಗಿಯೇ ಏನಾಗಬೇಕೆಂದು ನಿರ್ಣಯಿಸಿದ್ದನ್ನೇ ಅವರು ಮಾಡಿದರು.


ನಾನೇ ಯೆಹೋವ ದೇವರು ಎಂದು ಅವರು ತಿಳಿದುಕೊಳ್ಳುವಂತೆ ನಾನು ಅವರಿಗೆ ಅಹಿತವಾದ ನಿಯಮಗಳನ್ನೂ, ಅವರು ಬದುಕಬಾರದ ನ್ಯಾಯಗಳನ್ನೂ ಕೊಟ್ಟೆನು.


“ ‘ಪ್ರವಾದಿಯು ಮೋಸಹೋಗಿ ವಾಕ್ಯವನ್ನು ಹೇಳಿದರೆ, ಯೆಹೋವ ದೇವರಾದ ನಾನೇ ಆ ಪ್ರವಾದಿಯನ್ನು ಮೋಸಗೊಳಿಸಿರುತ್ತೇನೆ. ನಾನು ನನ್ನ ಕೈಯನ್ನು ಅವನ ವಿರುದ್ಧವಾಗಿ ಚಾಚಿ, ನನ್ನ ಜನರಾದ ಇಸ್ರಾಯೇಲರ ಮಧ್ಯದೊಳಗಿಂದ ಅವನನ್ನು ನಾಶಪಡಿಸುವೆನು.


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


“ಯೆಹೋವ ದೇವರು ಹೇಳುವುದೇನೆಂದರೆ: ‘ಇಗೋ, ನಾನು ನಿನ್ನ ಮನೆಯಲ್ಲಿ ಕೆಟ್ಟದ್ದನ್ನು ನಿನಗೆ ವಿರೋಧವಾಗಿ ಏಳುವಂತೆ ಮಾಡಿ, ನಿನ್ನ ಕಣ್ಣುಗಳ ಮುಂದೆ ನಿನ್ನ ಹೆಂಡತಿಯರನ್ನು ತೆಗೆದು, ನಿನ್ನ ನೆರೆಯವನಿಗೆ ಕೊಡುವೆನು. ಅವನು ಹಗಲು ಹೊತ್ತಿನಲ್ಲಿಯೇ ಅವರ ಸಂಗಡ ಮಲಗುವನು.


ನನ್ನ ಕೈಯಲ್ಲಿ ಏನು ಕೆಟ್ಟತನವಿದೆ? ಈಗ ಅರಸನಾದ ನನ್ನ ಒಡೆಯನು ದಯಮಾಡಿ ತನ್ನ ಸೇವಕನ ಮಾತುಗಳನ್ನು ಕೇಳಲಿ. ಯೆಹೋವ ದೇವರು ನಿನ್ನನ್ನು ನನಗೆ ವಿರೋಧವಾಗಿ ಪ್ರೇರೇಪಿಸಿದರೆ, ಕಾಣಿಕೆಯನ್ನು ಅಂಗೀಕರಿಸಲಿ. ಆದರೆ ಮಾನವರು ಇದನ್ನು ಮಾಡಿದರೆ, ಅವರು ಯೆಹೋವ ದೇವರ ಮುಂದೆ ಶಾಪಗ್ರಸ್ತರಾಗಿರಲಿ. ಏಕೆಂದರೆ, ‘ನೀನು ಹೋಗಿ? ಅನ್ಯದೇವರುಗಳನ್ನು ಸೇವಿಸು,’ ಎಂದು ಹೇಳಿ ಅವರು ಈ ಹೊತ್ತು ನನ್ನನ್ನು ಯೆಹೋವ ದೇವರ ಬಾಧ್ಯತೆಯಲ್ಲಿ ಇರದ ಹಾಗೆ ಓಡಿಸಿಬಿಟ್ಟರು.


ಆದರೆ ನಾನು ಫರೋಹನ ಹೃದಯವನ್ನು ಕಠಿಣಪಡಿಸಿ, ನನ್ನ ಸೂಚಕಕಾರ್ಯಗಳನ್ನೂ, ನನ್ನ ಅದ್ಭುತಕಾರ್ಯಗಳನ್ನೂ ಈಜಿಪ್ಟ್ ದೇಶದಲ್ಲಿ ಹೆಚ್ಚಿಸುವೆನು.


ನೀವು ನನಗೆ ವಿರೋಧವಾಗಿ ಕೇಡನ್ನು ಕಲ್ಪಿಸಿದ್ದೀರಿ, ಆದರೆ ದೇವರು ಒಳ್ಳೆಯದಕ್ಕಾಗಿಯೇ ಸಂಕಲ್ಪಿಸಿದರು. ಈಗ ಬಹುಜನರ ಪ್ರಾಣ ಉಳಿಯುವಂತೆ ನಡೆಯುತ್ತಿದೆ.


ಆದರೆ ನೀವು ನನ್ನನ್ನು ಇಲ್ಲಿಗೆ ಮಾರಿದ್ದಕ್ಕಾಗಿ ಈಗ ವ್ಯಸನಪಟ್ಟು ನಿಮ್ಮ ಮೇಲೆ ನೀವೇ ಸಿಟ್ಟುಮಾಡಿಕೊಳ್ಳಬೇಡಿರಿ. ಪ್ರಾಣ ಸಂರಕ್ಷಣೆಗಾಗಿ ದೇವರು ನನ್ನನ್ನು ನಿಮ್ಮ ಮುಂದೆ ಕಳುಹಿಸಿದ್ದಾರೆ.


ಇದೇ ಕಾರಣದಿಂದ ದೇವರು ಅವರ ಮೇಲೆ ವಂಚಿಸಲು ಶಕ್ತಿಯುಳ್ಳ ಭ್ರಮೆಯನ್ನು ಕಳುಹಿಸಿ ಅವರು ಆ ಸುಳ್ಳನ್ನು ನಂಬುವಂತೆ ಮಾಡುವರು.


ಆಗ ಮೋಶೆಯು ಆರೋನನಿಗೂ ಅವನ ಪುತ್ರರಾದ ಎಲಿಯಾಜರನಿಗೂ ಈತಾಮಾರನಿಗೂ, “ನೀವು ಮರಣ ಹೊಂದದಂತೆಯೂ ಕೋಪವು ಜನರೆಲ್ಲರ ಮೇಲೆ ಬಾರದಂತೆಯೂ ನೀವು ನಿಮ್ಮ ಮುಚ್ಚಿದ ತಲೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ತೆಗೆಯಬೇಡಿರಿ. ಇಲ್ಲವೆ ನಿಮ್ಮ ಬಟ್ಟೆಗಳನ್ನು ಹರಿದುಕೊಳ್ಳಬೇಡಿರಿ. ಆದರೆ ನಿಮ್ಮ ಸಹೋದರರಾಗಿರುವ ಇಸ್ರಾಯೇಲಿನ ಮನೆತನದವರೆಲ್ಲರು ಯೆಹೋವ ದೇವರು ಉರಿಸಿದ ಬೆಂಕಿಯ ನಾಶದ ನಿಮಿತ್ತ ಗೋಳಾಡಲಿ.


ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಹಾಗೆಯೇ, ಮೋಶೆ ಸೀನಾಯಿ ಮರುಭೂಮಿಯಲ್ಲಿ ಜನಗಣತಿ ಮಾಡಿದನು.


ತೋಲನ ಪುತ್ರರು: ಉಜ್ಜೀ, ರೆಫಾಯ, ಯೆರೀಯೇಲ್, ಯಹ್ಮೈ, ಇಬ್ಸಾಮ್ ಮತ್ತು ಸಮುಯೇಲ್. ಇವರು ತಮ್ಮ ಕುಟುಂಬಗಳಿಗೆ ಯಜಮಾನರಾಗಿದ್ದರು. ಇವರು ತಮ್ಮ ವಂಶಗಳಲ್ಲಿ ಯುದ್ಧದಲ್ಲಿ ಪರಾಕ್ರಮಶಾಲಿಗಳಾಗಿದ್ದರು. ದಾವೀದನ ದಿವಸಗಳಲ್ಲಿ ಅವರ ಲೆಕ್ಕ 22,600 ಮಂದಿ ಆಗಿತ್ತು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲಿಗೆ ವಿರೋಧವಾಗಿ ಉರಿಗೊಂಡು, ಅವರನ್ನು ಕೊಳ್ಳೆಗಾರರ ಕೈಯಲ್ಲಿ ಒಪ್ಪಿಸಿಕೊಟ್ಟರು. ಅವರು ಇನ್ನು ಮೇಲೆ ತಮ್ಮ ಶತ್ರುಗಳಿಗೆ ಎದುರಾಗಿ ನಿಲ್ಲದ ಹಾಗೆ, ಅವರ ಸುತ್ತಲಿರುವ ಅವರ ಶತ್ರುಗಳ ಕೈಗೆ ಅವರನ್ನು ಮಾರಿಬಿಟ್ಟರು.


ಆದ್ದರಿಂದ ಯೆಹೋವ ದೇವರು ಇಸ್ರಾಯೇಲರ ಮೇಲೆ ಕೋಪದಿಂದ ಉರಿಗೊಂಡು, “ಈ ಜನಾಂಗವು ನಾನು ಅವರ ಪಿತೃಗಳಿಗೆ ಆಜ್ಞಾಪಿಸಿದ ನನ್ನ ಒಡಂಬಡಿಕೆಯನ್ನು ಮೀರಿ, ನನ್ನ ಮಾತನ್ನು ಕೇಳದೆ ಹೋದದ್ದರಿಂದ,


ಆ ದಿವಸದಲ್ಲಿ ಅರಸನಾದ ಯೋರಾಮನು ಸಮಾರ್ಯದಿಂದ ಹೊರಟುಹೋಗಿ ಇಸ್ರಾಯೇಲರನ್ನು ಕೂಡಿಸಿದನು.


ಇವರೆಲ್ಲರು ಆಶೇರನ ಮಕ್ಕಳಾಗಿದ್ದು, ತಮ್ಮ ತಂದೆಯ ಕುಟುಂಬದಲ್ಲಿ ಯಜಮಾನರಾಗಿಯೂ, ಯುದ್ಧ ಪರಾಕ್ರಮಶಾಲಿಗಳಲ್ಲಿ ಮುಖ್ಯಸ್ಥರಾಗಿಯೂ, ಪ್ರಭುಗಳಲ್ಲಿ ಶ್ರೇಷ್ಠರಾಗಿಯೂ ಇದ್ದರು. ಅವರ ವಂಶಾವಳಿಯಲ್ಲಿ ದಾಖಲಿಸಿದ ಲೆಕ್ಕದ ಪ್ರಕಾರ ಯುದ್ಧಕ್ಕೆ ಸಿದ್ಧವಿರುವ 26,000 ಮಂದಿ ಇದ್ದರು.


ಆದರೆ ಹಿಜ್ಕೀಯನು ತನಗೆ ಆದ ಉಪಕಾರಕ್ಕೆ ತಕ್ಕಂತೆ ನಡೆಯದೆ ಹೋದನು. ಏಕೆಂದರೆ ಅವನ ಹೃದಯವು ಅಹಂಕಾರದಿಂದ ತುಂಬಿತ್ತು. ಆದ್ದರಿಂದ ಅವನ ಮೇಲೆಯೂ, ಯೆಹೂದ ಮತ್ತು ಯೆರೂಸಲೇಮಿನ ಮೇಲೆಯೂ ಯೆಹೋವ ದೇವರ ರೌದ್ರ ಉಂಟಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು