2 ಸಮುಯೇಲ 24:12 - ಕನ್ನಡ ಸಮಕಾಲಿಕ ಅನುವಾದ12 “ನೀನು ದಾವೀದನ ಬಳಿಗೆ ಹೋಗಿ, ಅವನ ಸಂಗಡ ಮಾತಾಡಿ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಯಾವುದನ್ನು ನಿನಗೆ ವಿರೋಧವಾಗಿ ಬರಮಾಡಬೇಕೋ ಅದನ್ನು ಆಯ್ದುಕೋ, ಎಂದು ಯೆಹೋವ ದೇವರು ಹೇಳುತ್ತಾರೆ,’ ಎಂದು ಹೇಳು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 “ನೀನು ದಾವೀದನ ಬಳಿ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಟ್ಟಿದ್ದೇನೆ. ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ’ ಎಂಬುದಾಗಿ ಹೇಳು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 “ನೀನು ದಾವೀದನ ಹತ್ತಿರ ಹೋಗಿ ಅವನಿಗೆ, ‘ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವುದನ್ನು ನಿನ್ನ ಮೇಲೆ ಬರಮಾಡಬೇಕೋ ಅದನ್ನು ಆರಿಸಿಕೋ,’ ಎಂದು ಸರ್ವೇಶ್ವರ ನುಡಿಯುತ್ತಾರೆ ಎಂದು ಹೇಳು,” ಎಂದು ಆಜ್ಞಾಪಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ನೀನು ದಾವೀದನ ಹತ್ತಿರ ಹೋಗಿ ಅವನಿಗೆ - ನಾನು ಮೂರು ವಿಧವಾದ ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ; ಅವುಗಳಲ್ಲಿ ಯಾವದನ್ನು ನಿನ್ನ ಮೇಲೆ ಬರಮಾಡಬೇಕೋ ಆರಿಸಿಕೋ ಎಂದು ಯೆಹೋವನು ಅನ್ನುತ್ತಾನೆ ಎಂಬದಾಗಿ ಹೇಳು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಯೆಹೋವನು ಅವನಿಗೆ, “ನೀನು ಹೋಗಿ, ದಾವೀದನಿಗೆ ಹೋಗಿ ಹೇಳು, ‘ಯೆಹೋವನು ಹೀಗೆ ಹೇಳುತ್ತಾನೆ, ನಾನು ಮೂರು ಶಿಕ್ಷೆಗಳನ್ನು ನಿನ್ನ ಮುಂದೆ ಇಡುತ್ತೇನೆ. ಅವುಗಳಲ್ಲಿ ಒಂದನ್ನು ಆರಿಸಿಕೋ’” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |