2 ಸಮುಯೇಲ 24:14 - ಕನ್ನಡ ಸಮಕಾಲಿಕ ಅನುವಾದ14 ಆಗ ದಾವೀದನು ಗಾದನಿಗೆ, “ನಾನು ಬಹು ಇಕ್ಕಟ್ಟಿನಲ್ಲಿ ಇದ್ದೇನೆ. ಈಗ ಯೆಹೋವ ದೇವರ ಕೈಯಲ್ಲಿಯೇ ಬೀಳೋಣ, ಏಕೆಂದರೆ ಅವರ ಕರುಣೆಯು ದೊಡ್ಡದು, ಆದರೆ ಮನುಷ್ಯರ ಕೈಯಲ್ಲಿ ಬೀಳಲಾರೆನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಅದಕ್ಕೆ ದಾವೀದನು ಗಾದನಿಗೆ, “ನಾನು ಬಲು ಇಕ್ಕಟ್ಟಿನಲ್ಲಿದ್ದೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ, ಆತನು ಕೃಪಾಪೂರ್ಣನು ನಾನು ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಅದಕ್ಕೆ ದಾವೀದನು, “ನಾನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದೇನೆ. ಸರ್ವೇಶ್ವರನ ಕೈಯಲ್ಲೆ ಬೀಳುತ್ತೇನೆ; ಅವರು ಕೃಪಾಪೂರ್ಣರು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆ,” ಎಂದು ಹೇಳಿ ವ್ಯಾಧಿಯನ್ನು ಆಯ್ದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ಅದಕ್ಕೆ ದಾವೀದನು - ನಾನು ಬಲು ಇಕ್ಕಟ್ಟಿನಲ್ಲಿರುತ್ತೇನೆ. ಯೆಹೋವನ ಕೈಯಲ್ಲಿ ಬೀಳುತ್ತೇನೆ; ಆತನು ಕೃಪಾಪೂರ್ಣನು. ಮನುಷ್ಯರ ಕೈಯಲ್ಲಿ ಬೀಳಲೊಲ್ಲೆನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ದಾವೀದನು ಗಾದನಿಗೆ, “ನಾನು ನಿಜವಾಗಿಯೂ ತೊಂದರೆಗೆ ಒಳಗಾದೆ! ಆದರೆ ಯೆಹೋವನು ಕೃಪಾಪೂರ್ಣನಾಗಿದ್ದಾನೆ. ಆದ್ದರಿಂದ ಆತನು ನನ್ನನ್ನು ದಂಡಿಸಲಿ; ಆದರೆ ಅದು ಜನರಿಂದ ಬಾರದಿರಲಿ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |