Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:16 - ಕನ್ನಡ ಸಮಕಾಲಿಕ ಅನುವಾದ

16 ದೂತನು ಯೆರೂಸಲೇಮನ್ನು ನಾಶಮಾಡಲು, ಅದರ ಮೇಲೆ ತನ್ನ ಕೈಚಾಚಿದಾಗ, ಯೆಹೋವ ದೇವರು ಆ ದಂಡನೆಗಾಗಿ ನೊಂದುಕೊಂಡು, ಜನರನ್ನು ಸಂಹರಿಸುತ್ತಿದ್ದ ದೇವದೂತನಿಗೆ, “ಸಾಕು, ನಿನ್ನ ಕೈಯನ್ನು ಹಿಂದೆಗೆ,” ಎಂದರು. ಆಗ ಯೆಹೋವ ದೇವರ ದೂತನು ಯೆಬೂಸಿಯನಾದ ಅರೌನನ ಕಣದ ಬಳಿಯಲ್ಲಿ ಇದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ದೇವದೂತನು ಯೆರೂಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕ ದೂತನಿಗೆ, “ಈಗ ಸಾಕು ನಿನ್ನ ಕೈಯನ್ನು ಹಿಂದೆಗೆ” ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ದೇವದೂತನು ಜೆರುಸಲೇಮನ್ನೂ ಸಂಹರಿಸುವುದಕ್ಕೆ ಕೈಚಾಚಿದಾಗ ಸರ್ವೇಶ್ವರ ಆ ಕೇಡಿನ ವಿಷಯದಲ್ಲಿ ನೊಂದುಕೊಂಡು, ಸಂಹಾರಕ ದೂತನಿಗೆ, “ಈಗ ಸಾಕು, ನಿನ್ನ ಕೈಯನ್ನು ಹಿಂತೆಗೆ,” ಎಂದು ಆಜ್ಞಾಪಿಸಿದರು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ದೇವದೂತನು ಯೆರೂಸಲೇಮನ್ನೂ ಸಂಹರಿಸುವದಕ್ಕೆ ಕೈಚಾಚಿದಾಗ ಯೆಹೋವನು ಆ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪಪಟ್ಟು ಸಂಹಾರಕದೂತನಿಗೆ - ಈಗ ಸಾಕು, ನಿನ್ನ ಕೈಯನ್ನು ಹಿಂದೆಗೆ ಎಂದು ಆಜ್ಞಾಪಿಸಿದನು. ಆಗ ಆ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದೇವದೂತನು ಜೆರುಸಲೇಮನ್ನು ನಾಶಗೊಳಿಸಲು ಅದರತ್ತ ತನ್ನ ಕೈಯನ್ನು ಚಾಚಿದನು. ಆದರೆ ಸಂಭವಿಸಿದ ಕೆಟ್ಟಕಾರ್ಯಗಳ ಬಗ್ಗೆ ಯೆಹೋವನು ಪಶ್ಚಾತ್ತಾಪಪಟ್ಟನು. ಯೆಹೋವನು ಜನರನ್ನು ನಾಶಗೊಳಿಸಿದ ದೇವದೂತನಿಗೆ, “ಇಲ್ಲಿಗೆ ಸಾಕು! ನಿನ್ನ ಕೈಯನ್ನು ಕೆಳಗಿಳಿಸು” ಎಂದು ಹೇಳಿದನು. ಆಗ ಆ ಯೆಹೋವನ ದೂತನು ಯೆಬೂಸಿಯನಾದ ಅರೌನನ ಕಣದಲ್ಲಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:16
37 ತಿಳಿವುಗಳ ಹೋಲಿಕೆ  

ಏಕೆಂದರೆ ಯೆಹೋವ ದೇವರು ಈಜಿಪ್ಟಿನವರನ್ನು ಸಂಹರಿಸುವುದಕ್ಕಾಗಿ ಹಾದುಹೋಗುವರು. ಅವರು ಅಡ್ಡ ಪಟ್ಟಿಯ ಮೇಲೂ, ಅದರ ಪಕ್ಕದ ಎರಡು ನಿಲುವು ಕಂಬಗಳ ಮೇಲೂ ರಕ್ತವನ್ನು ನೋಡಿದಾಗ, ಸಂಹಾರಕನು ನಿಮ್ಮ ಮನೆಗಳೊಳಗೆ ಬಂದು ನಿಮ್ಮನ್ನು ಸಂಹಾರಮಾಡದಂತೆ, ಯೆಹೋವ ದೇವರು ನಿಮ್ಮ ಬಾಗಿಲುಗಳನ್ನು ದಾಟಿಹೋಗುವರು.


ಯೆಹೋವ ದೇವರು ಭೂಮಿಯ ಮೇಲೆ ಮನುಷ್ಯರನ್ನು ಉಂಟುಮಾಡಿದ್ದಕ್ಕೆ ನಿಟ್ಟುಸಿರುಬಿಟ್ಟು, ತಮ್ಮ ಹೃದಯದಲ್ಲಿ ನೊಂದುಕೊಂಡರು.


ಹೆರೋದನು ದೇವರಿಗೆ ಸಲ್ಲಿಸಬೇಕಾದ ಮಹಿಮೆ ಸಲ್ಲಿಸದೇ ಹೋದದ್ದರಿಂದ ಕೂಡಲೇ ಒಬ್ಬ ದೇವದೂತನು ಅವನನ್ನು ಹೊಡೆಯಲು ಅವನು ಹುಳ ಬಿದ್ದು ಸತ್ತುಹೋದನು.


ಸೊಲೊಮೋನನು ಯೆರೂಸಲೇಮಿನಲ್ಲಿ ತನ್ನ ತಂದೆ ದಾವೀದನಿಗೆ ಯೆಹೋವ ದೇವರು ಕಾಣಿಸಿಕೊಂಡ ಸ್ಥಳವಾದ ಮೊರೀಯಾ ಬೆಟ್ಟದ ಮೇಲೆ, ದಾವೀದನು ಸಿದ್ಧಮಾಡಿದ ಸ್ಥಳವಾದ ಯೆಬೂಸಿಯನಾದ ಒರ್ನಾನನ ಕಣದಲ್ಲಿ ಯೆಹೋವ ದೇವರ ಆಲಯವನ್ನು ಕಟ್ಟಿಸಲು ಪ್ರಾರಂಭಿಸಿದನು.


ಅದೇ ರಾತ್ರಿಯಲ್ಲಿ ಯೆಹೋವ ದೇವರ ದೂತನು ಹೊರಟುಬಂದು ಅಸ್ಸೀರಿಯದ ದಂಡಿನಲ್ಲಿದ್ದ 1,85,000 ಜನರನ್ನು ಸಂಹರಿಸಿದನು. ಉದಯದಲ್ಲಿ ಜನರು ಎದ್ದಾಗ, ಇಗೋ, ಅವರೆಲ್ಲರು ಸತ್ತು ಹೆಣಗಳಾಗಿದ್ದರು.


“ನಾನು ಸೌಲನನ್ನು ಅರಸನಾಗಿ ಮಾಡಿದ್ದರಿಂದ ದುಃಖಪಡುತ್ತೇನೆ. ಏಕೆಂದರೆ ಅವನು ನನ್ನನ್ನು ಹಿಂಬಾಲಿಸುವುದನ್ನು ಬಿಟ್ಟು, ಹಿಂದಕ್ಕೆ ಹೋದನು; ನನ್ನ ಆಜ್ಞೆಗಳನ್ನು ಈಡೇರಿಸಲಿಲ್ಲ,” ಎಂದರು. ಅದಕ್ಕೆ ಸಮುಯೇಲನು ಕೋಪಗೊಂಡು ರಾತ್ರಿಯೆಲ್ಲಾ ಯೆಹೋವ ದೇವರಿಗೆ ಮೊರೆಯಿಟ್ಟನು.


ಆಗ ಯೆಹೋವ ದೇವರು ತಮ್ಮ ದೂತನನ್ನು ಕಳುಹಿಸಿದರು. ಅವನು ಅಸ್ಸೀರಿಯದ ಅರಸನ ದಂಡಿನಲ್ಲಿರುವ ಸಮಸ್ತ ಪರಾಕ್ರಮಶಾಲಿಗಳನ್ನೂ, ನಾಯಕರನ್ನೂ, ಅಧಿಪತಿಗಳನ್ನೂ ನಿರ್ಮೂಲ ಮಾಡಿದನು. ಹೀಗೆ ಇವನು ನಾಚಿಕೆಯಿಂದ ತನ್ನ ದೇಶಕ್ಕೆ ಹಿಂದಿರುಗಿದನು. ಅವನು ತನ್ನ ದೇವರ ಆಲಯದಲ್ಲಿ ಪ್ರವೇಶಿಸಿದಾಗ, ಅವನ ಹೊಟ್ಟೆಯಲ್ಲಿ ಹುಟ್ಟಿದವರು ಅವನನ್ನು ಖಡ್ಗದಿಂದ ಕೊಂದುಹಾಕಿದರು.


ಅವನಿಗೆ ನಿಮ್ಮಲ್ಲಿ ಅನೇಕರಿಂದ ಉಂಟಾದ ಶಿಕ್ಷೆಯೇ ಸಾಕು.


ಯೇಸು ಮೂರನೆಯ ಸಾರಿ ಬಂದು ಅವರಿಗೆ, “ಇನ್ನೂ ವಿಶ್ರಮಿಸುತ್ತಿದ್ದೀರಾ? ಸಾಕು! ಸಮಯವು ಸಮೀಪಿಸಿದೆ; ಮನುಷ್ಯಪುತ್ರನಾದ ನಾನು ಪಾಪಿಗಳ ಕೈವಶವಾಗಲಿದ್ದೇನೆ.


ಅವರ ರಕ್ತವನ್ನು ಅವರ ಬಾಯೊಳಗಿಂದಲೂ, ಅವರು ಕಚ್ಚುವ ಅಸಹ್ಯ ಪದಾರ್ಥಗಳನ್ನು ನಾನು ತೆಗೆದುಹಾಕಿಬಿಡುವೆನು. ಅವರು ಸಹ ನಮ್ಮ ದೇವರಿಗಾಗಿ ಉಳಿಯುವರು. ಯೆಹೂದದಲ್ಲಿ ಪ್ರಭುವಿನ ಹಾಗೆ ಇರುವರು. ಎಕ್ರೋನು ಯೆಬೂಸಿಯನ ಹಾಗೆ ಇರುವರು.


ಯೆಹೋವ ದೇವರೇ, ನಿಮ್ಮ ಕೀರ್ತಿಯನ್ನು ನಾನು ಕೇಳಿದ್ದೇನೆ, ಯೆಹೋವ ದೇವರೇ, ನಿಮ್ಮ ಕಾರ್ಯಗಳಿಗಾಗಿ ನಿಮ್ಮ ಮುಂದೆ ಭಯಭಕ್ತಿಯಿಂದ ನಿಲ್ಲುತ್ತೇನೆ. ನಮ್ಮ ದಿನಗಳಲ್ಲಿ ಅವುಗಳನ್ನು ಪುನಃ ಮಾಡಿರಿ. ನಮ್ಮ ವರ್ಷಗಳ ಮಧ್ಯದಲ್ಲಿ ಅವುಗಳನ್ನು ತಿಳಿಸಿರಿ, ನೀನು ರೋಷಗೊಂಡಿದ್ದರೂ ಕರುಣೆಯನ್ನು ಜ್ಞಾಪಕಮಾಡಿಕೊಳ್ಳಿರಿ.


ಆಗ ಸಾರ್ವಭೌಮ ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ಯೆಹೋವ ದೇವರು ಇದನ್ನು ಕುರಿತು ಮನಮರುಗಿ, “ಈ ದರ್ಶನ ನೆರವೇರುವುದಿಲ್ಲ,” ಎಂದರು.


ನಾನು ಎಂದೆಂದಿಗೂ ವ್ಯಾಜ್ಯವಾಡುವುದಿಲ್ಲ. ಯಾವಾಗಲೂ ಕೋಪಿಸಿಕೊಳ್ಳೆನು. ಏಕೆಂದರೆ ಆತ್ಮವೂ, ನಾನು ಉಂಟುಮಾಡಿದ ಜೀವವೂ ನನ್ನಿಂದ ಕುಂದಿ ಹೋದಾವು.


ಯುದ್ಧದಿಂದಲೂ ಸೆರೆಯಿಂದಲೂ ಆಕೆಯೊಂದಿಗೆ ತೃಪ್ತರಾಗಿರಿ. ಆತನು ತನ್ನ ಕೋಪದ ಪೆಟ್ಟಿನಿಂದ ಪೂರ್ವದ ಬಿರುಗಾಳಿ ಬೀಸುವಾಗ ಆಗುವಂತೆ, ಆಕೆಯನ್ನು ಹೊರಗೋಡಿಸುವನು.


ಯೆಹೋವ ದೇವರು ತಮ್ಮ ಜನರಿಗೆ ನ್ಯಾಯವನ್ನು ಸ್ಥಾಪಿಸುವರು, ತಮ್ಮ ಸೇವಕರ ಮೇಲೆ ಅನುಕಂಪವನ್ನೂ ತೋರಿಸುವರು.


ಯೆಹೋವ ದೇವರೇ, ಮನಸ್ಸು ಮಾರ್ಪಡಿಸಿಕೊಳ್ಳಿರಿ. ನೀವು ಎಷ್ಟರವರೆಗೆ ಬೇಸರಗೊಳ್ಳುವಿರಿ? ನಿಮ್ಮ ಸೇವಕರ ವಿಷಯದಲ್ಲಿ ಅನುಕಂಪ ತೋರಿಸಿರಿ.


ಆದಾಗ್ಯೂ ದೇವರು ಅವರನ್ನು ಕರುಣಿಸಿ, ಅವರ ಅಕ್ರಮವನ್ನು ಕ್ಷಮಿಸಿ, ನಾಶಮಾಡದೆ ಬಿಟ್ಟುಬಿಟ್ಟರು. ಹೌದು, ಅನೇಕ ಸಾರಿ ದೇವರು ಕೋಪಿಸಿಕೊಳ್ಳದಿದ್ದರು, ತಮ್ಮ ಬೇಸರವನ್ನು ದೇವರು ಪ್ರಯೋಗಿಸಲಿಲ್ಲ.


ಅಂಥವರ ಮಾರ್ಗವು ಕತ್ತಲೆಯೂ ಜಾರುವಿಕೆಯೂ ಆಗಿರಲಿ; ಯೆಹೋವ ದೇವರ ದೂತನು ಅವರನ್ನು ಹಿಂದಟ್ಟಲಿ.


ಆದರೆ ಅವನು ಮರುಭೂಮಿಯಲ್ಲಿ ಒಂದು ದಿವಸದ ಪ್ರಯಾಣದಷ್ಟು ಹೋಗಿ, ಒಂದು ಜಾಲೀಗಿಡದ ಕೆಳಗೆ ಕುಳಿತು, ತಾನು ಸಾಯಬೇಕೆಂದು ಅಪೇಕ್ಷಿಸಿ, “ಯೆಹೋವ ದೇವರೇ, ನನಗೆ ಸಾಕಾಯಿತು, ನನ್ನ ಪ್ರಾಣವನ್ನು ತೆಗೆದುಕೋ. ಏಕೆಂದರೆ ನನ್ನ ಪಿತೃಗಳಿಗಿಂತ ನಾನು ಉತ್ತಮನಲ್ಲ,” ಎಂದನು.


ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.


ಆ ದಿವಸದಲ್ಲಿ ದಾವೀದನು, “ಜಲದ್ವಾರವನ್ನು ದಾಟಿ, ಯೆಬೂಸಿಯರನ್ನು ಜಯಿಸಬೇಕೆಂದಿರುವವನು, ಜಲದ್ವಾರದ ಮೂಲಕ ಹತ್ತಿ ಹೋಗಿ, ನನ್ನನ್ನು ದ್ವೇಷಿಸುವ ಕುರುಡರನ್ನೂ ಕುಂಟರನ್ನೂ ನಾಶಮಾಡಲಿ,” ಎಂದು ಹೇಳಿದ್ದನು. ಆದುದರಿಂದಲೇ, “ಕುರುಡರೂ ಕುಂಟರೂ ಅರಮನೆಯೊಳಗೆ ಪ್ರವೇಶಿಸಲಾರರು,” ಎಂಬ ಗಾದೆಯಾಯಿತು.


ಅವರು ಯೆಬೂಸಿಗೆ ಸಮೀಪಿಸಿದಾಗ, ಹೊತ್ತು ಬಹಳ ಹೋಗಿತ್ತು. ಆಗ ಸೇವಕನು ತನ್ನ ಯಜಮಾನನಿಗೆ, “ನೀನು ದಯಮಾಡಿ ಬಾ; ಈ ಯೆಬೂಸಿಯರ ಪಟ್ಟಣಕ್ಕೆ ತಿರುಗಿಕೊಂಡು, ಅಲ್ಲಿ ರಾತ್ರಿಯಲ್ಲಿ ಇಳಿದುಕೊಳ್ಳೋಣ,” ಎಂದನು.


ಬೆನ್ಯಾಮೀನ್ಯರಿಗೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಹೊರಡಿಸಲು ಸಾಧ್ಯವಾಗಲಿಲ್ಲ. ಆದುದರಿಂದ ಯೆಬೂಸಿಯರು ಈ ದಿನದವರೆಗೂ ಬೆನ್ಯಾಮೀನರ ಸಂಗಡ ವಾಸವಾಗಿದ್ದಾರೆ.


ಆದರೆ ಯೆರೂಸಲೇಮಿನಲ್ಲಿ ವಾಸವಾಗಿದ್ದ ಯೆಬೂಸಿಯರನ್ನು ಯೆಹೂದ ಗೋತ್ರದವರಿಂದ ಹೊರಡಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಈ ದಿವಸದವರೆಗೂ ಯೆಬೂಸಿಯರು ಯೆಹೂದ ಗೋತ್ರದವರ ಸಂಗಡ ಯೆರೂಸಲೇಮಿನಲ್ಲಿ ವಾಸವಾಗಿದ್ದಾರೆ.


ಆದರೆ ನೀವು ಇರುವ ಎಲ್ಲಾ ಮನೆಗಳ ಮೇಲೆ ರಕ್ತವು ನಿಮಗೆ ಗುರುತಾಗಿರುವುದು. ಆ ರಕ್ತವನ್ನು ನಾನು ನೋಡುವಾಗ, ನಿಮ್ಮನ್ನು ದಾಟಿಹೋಗುವೆನು. ಈಜಿಪ್ಟ್ ದೇಶವನ್ನು ನಾನು ಸಂಹರಿಸುವ ಸಮಯದಲ್ಲಿ, ನಿಮ್ಮನ್ನು ನಾಶಮಾಡುವ ಯಾವ ಉಪದ್ರವವು ನಿಮ್ಮ ಮೇಲೆ ಬರುವುದಿಲ್ಲ.


ಆದ್ದರಿಂದ ಈ ಬಲವಾದ ಗುಡುಗುಗಳೂ ಆಲಿಕಲ್ಲಿನ ಮಳೆಯೂ ಇನ್ನು ಸಾಕು. ಇವುಗಳು ನಿಂತುಹೋಗುವಂತೆ ಯೆಹೋವ ದೇವರನ್ನು ಬೇಡಿಕೊಳ್ಳಿರಿ, ನೀವು ಇನ್ನು ಇಲ್ಲಿ ಇರದಂತೆ ನಾನು ನಿಮ್ಮನ್ನು ಕಳುಹಿಸಿಬಿಡುವೆನು,” ಎಂದನು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು


ಆಗ ಯೆಹೋವ ದೇವರು ತಮ್ಮ ಜನರಿಗೆ ಮಾಡುವೆನೆಂದು ಹೇಳಿದ ಕೇಡಿನ ವಿಷಯದಲ್ಲಿ ಮನಸ್ಸನ್ನು ಮಾರ್ಪಡಿಸಿಕೊಂಡರು.


ಅವರಲ್ಲಿ ಕೆಲವರು ಗೊಣಗುಟ್ಟಿ ಸಂಹಾರಕನ ಕೈಯಿಂದ ಸಂಹಾರವಾದಂತೆ ನೀವೂ ಗೊಣಗುಟ್ಟಬೇಡಿರಿ.


ಯೆಹೂದದ ಅರಸನಾದ ಹಿಜ್ಕೀಯನೂ, ಎಲ್ಲಾ ಯೆಹೂದ್ಯರೂ ಅವನನ್ನು ಕೊಂದು ಹಾಕಿದರೋ? ಇಲ್ಲವೇ ಇಲ್ಲ. ಅವನು ಯೆಹೋವ ದೇವರಿಗೆ ಭಯಪಟ್ಟು, ಯೆಹೋವ ದೇವರ ಸಮ್ಮುಖದಲ್ಲಿ ಮೊರೆಯಿಟ್ಟನಲ್ಲವೋ? ಆಮೇಲೆ ಯೆಹೋವ ದೇವರು ಅವರಿಗೆ ವಿರೋಧವಾಗಿ ಮಾತನಾಡಿದ ಕೇಡಿನ ವಿಷಯದಲ್ಲಿ ಪಶ್ಚಾತ್ತಾಪ ಪಡಲಿಲ್ಲವೋ? ಆದರೆ ನಾವು ದೊಡ್ಡ ಕೇಡನ್ನು ನಮ್ಮ ಪ್ರಾಣಗಳ ಮೇಲೆ ತಂದುಕೊಳ್ಳಬಹುದು!” ಎಂದರು.


ಯೆಬೂಸಿಯರು, ಅಮೋರಿಯರು, ಗಿರ್ಗಾಷಿಯರು,


‘ನೀವು ಇನ್ನು ಈ ದೇಶದಲ್ಲಿ ವಾಸಮಾಡಿದರೆ, ನಾನು ನಿಮ್ಮನ್ನು ಕೆಡವದೆ ಕಟ್ಟುವೆನು; ಕಿತ್ತು ಹಾಕದೆ ನೆಡುವೆನು. ಏಕೆಂದರೆ ನಾನು ನಿಮಗೆ ಮಾಡಿರುವ ಕೇಡಿನ ವಿಷಯವಾಗಿ ಪಶ್ಚಾತ್ತಾಪಪಡುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು