Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 24:21 - ಕನ್ನಡ ಸಮಕಾಲಿಕ ಅನುವಾದ

21 ಅರೌನನು, “ಅರಸನಾದ ನನ್ನ ಒಡೆಯನು ತನ್ನ ಸೇವಕನ ಬಳಿಗೆ ಬಂದದ್ದೇನು?” ಎಂದನು. ಅದಕ್ಕೆ ದಾವೀದನು, “ಈ ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ ಈ ಕಣವನ್ನು ನಿನ್ನಿಂದ ಕೊಂಡುಕೊಳ್ಳಲು ಬಂದಿದ್ದೇನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಅವನು, “ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವುದಕ್ಕೆ ಕಾರಣವೇನು?” ಎಂದು ಕೇಳಿದನು. ದಾವೀದನು ಅವನಿಗೆ, “ವ್ಯಾಧಿಯು ಜನರನ್ನು ಬಿಟ್ಟು ಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ಯಜ್ಞವೇದಿಯನ್ನು ಕಟ್ಟುವುದಕ್ಕೆ ಬಂದಿದ್ದೇನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 “ನನ್ನ ಒಡೆಯರಾದ ಅರಸರು ತಮ್ಮ ಸೇವಕನ ಬಳಿಗೆ ಬರುವುದಕ್ಕೇನು ಕಾರಣ?” ಎಂದು ಕೇಳಿದನು. ದಾವೀದನು, “ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಸರ್ವೇಶ್ವರನಿಗಾಗಿ ಒಂದು ಪೀಠವನ್ನು ಕಟ್ಟುವುದಕ್ಕೆ ಬಂದಿದ್ದೇನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನನ್ನ ಒಡೆಯನಾದ ಅರಸನು ತನ್ನ ಸೇವಕನ ಬಳಿಗೆ ಬರುವದಕ್ಕೇನು ಕಾರಣ ಎಂದು ಕೇಳಿದನು. ದಾವೀದನು ಅವನಿಗೆ - ವ್ಯಾಧಿಯು ಜನರನ್ನು ಬಿಟ್ಟುಹೋಗುವಂತೆ ನಾನು ನಿನ್ನ ಕಣವನ್ನು ಕೊಂಡುಕೊಂಡು ಅದರಲ್ಲಿ ಯೆಹೋವನಿಗೋಸ್ಕರ ಒಂದು ವೇದಿಯನ್ನು ಕಟ್ಟುವದಕ್ಕೆ ಬಂದಿದ್ದೇನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ಅರೌನನು, “ರಾಜನಾದ ನನ್ನ ಒಡೆಯನೇ, ನನ್ನ ಬಳಿ ಬಂದದ್ದೇಕೆ?” ಎಂದು ಕೇಳಿದನು. ದಾವೀದನು, “ನಿನ್ನಿಂದ ಕಣವನ್ನು ಕೊಂಡುಕೊಳ್ಳುವುದಕ್ಕಾಗಿ ಬಂದೆನು. ನಾನು ಯೆಹೋವನಿಗೆ ಒಂದು ಯಜ್ಞವೇದಿಕೆಯನ್ನು ನಿರ್ಮಿಸುತ್ತೇನೆ. ಆಗ ರೋಗರುಜಿನಗಳು ನಿಲ್ಲುತ್ತವೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 24:21
11 ತಿಳಿವುಗಳ ಹೋಲಿಕೆ  

ಆಗ ಫೀನೆಹಾಸನು ಎದ್ದು ಬಂದು ದಂಡಿಸಿದ್ದರಿಂದ ವ್ಯಾಧಿ ನಿಂತುಹೋಯಿತು.


ಆಗ ದಾವೀದನು ಒರ್ನಾನನಿಗೆ, “ಈ ವ್ಯಾಧಿಯು, ಜನರನ್ನು ಬಿಟ್ಟುಹೋಗುವಂತೆ ನಾನು ಯೆಹೋವ ದೇವರಿಗೆ ಒಂದು ಬಲಿಪೀಠವನ್ನು ಕಟ್ಟಿಸುವುದಕ್ಕೆ, ಈ ಕಣದ ಸ್ಥಳವನ್ನು ನನಗೆ ಕೊಡು. ಅದನ್ನು ಪೂರ್ಣ ಕ್ರಯಕ್ಕೆ ನನಗೆ ಕೊಡು,” ಎಂದನು.


ಆ ದಿವಸವೇ ಪ್ರವಾದಿಯಾದ ಗಾದನು ದಾವೀದನ ಬಳಿಗೆ ಬಂದು ಅವನಿಗೆ, “ನೀನು ಹೋಗಿ ಯೆಬೂಸಿಯನಾದ ಅರೌನನ ಕಣದಲ್ಲಿ ಯೆಹೋವ ದೇವರಿಗೆ ಬಲಿಪೀಠವನ್ನು ಕಟ್ಟಿಸು,” ಎಂದನು.


ಆಗ ಯೋವಾಬನು ಅರಸನಿಗೆ, “ಅರಸನಾದ ನನ್ನ ಒಡೆಯನ ಕಣ್ಣುಗಳು ಅದನ್ನು ಕಾಣುವ ಹಾಗೆ ನಿನ್ನ ದೇವರಾದ ಯೆಹೋವ ದೇವರು ತಮ್ಮ ಜನರನ್ನು ಈಗ ಇರುವುದಕ್ಕಿಂತ ನೂರರಷ್ಟಾಗಿ ಹೆಚ್ಚಿಸಲಿ; ಆದರೆ ನನ್ನ ಒಡೆಯನಾದ ಅರಸನು ಈ ಕಾರ್ಯವನ್ನು ಮಾಡಲು ಅಪೇಕ್ಷಿಸುವುದು ಏಕೆ?” ಎಂದನು.


ಇಸ್ರಾಯೇಲಿನವನಾದ ಆ ಮನುಷ್ಯನ ಹಿಂದೆ ಡೇರೆಯೊಳಗೆ ಪ್ರವೇಶಿಸಿ, ಇಸ್ರಾಯೇಲಿನವನನ್ನೂ ಆ ಮಹಿಳೆಯನ್ನೂ ಒಂದೇ ಬಾರಿಗೆ ಇಬ್ಬರ ಹೊಟ್ಟೆಯನ್ನು ತಿವಿದನು. ಹೀಗೆ ಇಸ್ರಾಯೇಲರಿಗೆ ಉಂಟಾಗಿದ್ದ ವ್ಯಾಧಿಯು ನಿಂತುಹೋಯಿತು.


ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದಾಗ, ಅಲ್ಲಿ ಅಧಿಕವಾದ ಮತ್ತು ಮಹಾ ಘೋರವಾದ ಗೋಳಾಟದಿಂದ ದುಃಖಪಟ್ಟರು.


ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು