2 ಸಮುಯೇಲ 3:13 - ಕನ್ನಡ ಸಮಕಾಲಿಕ ಅನುವಾದ13 ಅದಕ್ಕೆ ದಾವೀದನು, “ಒಳ್ಳೆಯದು, ನಾನು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವೆನು. ಆದರೆ ನಾನು ನಿನ್ನಲ್ಲಿ ಒಂದನ್ನು ಕೇಳುತ್ತೇನೆ.” ಏನೆಂದರೆ, “ನೀನು ನನ್ನನ್ನು ನೋಡುವುದಕ್ಕೆ ಬರುವಾಗ, ಸೌಲನ ಮಗಳಾದ ಮೀಕಲಳನ್ನು ನೀನು ಕರೆದುಕೊಂಡು ಬಾರದೆ ಹೋದರೆ, ನೀನು ನನ್ನ ಮುಖವನ್ನು ಕಾಣಬಾರದು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ. ಆದರೆ ನಿನ್ನಿಂದ ನನಗೆ ಒಂದು ಸಹಾಯ ಬೇಕು. ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ, ನೀನು ನನ್ನ ಮುಖವನ್ನು ನೋಡಕೂಡದು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಅದಕ್ಕೆ ದಾವೀದನು, “ಒಳ್ಳೆಯದು, ನಿನ್ನ ಸಂಗಡ ಒಪ್ಪಂದಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಕಾರ್ಯವನ್ನು ಮಾಡಬೇಕು; ನನ್ನನ್ನು ನೋಡುವುದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರೆದುಕೊಂಡು ಬರಬೇಕು. ಹಾಗೆ ಕರೆದುಕೊಂಡು ಬಾರದಿದ್ದರೆ ನೀನು ನನ್ನ ಮುಖವನ್ನು ನೋಡಕೂಡದು,” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಅದಕ್ಕೆ ದಾವೀದನು - ಒಳ್ಳೇದು, ನಿನ್ನ ಸಂಗಡ ಒಡಂಬಡಿಕೆ ಮಾಡಿಕೊಳ್ಳುತ್ತೇನೆ; ಆದರೆ ನೀನು ಒಂದು ಮಾಡಬೇಕು. ನನ್ನನ್ನು ನೋಡುವದಕ್ಕೆ ಬರುವಾಗ ಸೌಲನ ಮಗಳಾದ ಮೀಕಲಳನ್ನು ಕರಕೊಂಡು ಬರಬೇಕು; ಹಾಗೆ ಕರಕೊಂಡು ಬಾರದಿದ್ದರೆ ನೀನು ನನ್ನ ಮೋರೆಯನ್ನು ನೋಡಕೂಡದು ಎಂದು ಉತ್ತರ ಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಅದಕ್ಕೆ ದಾವೀದನು, “ಒಳ್ಳೆಯದು! ನಾನು ನಿನ್ನೊಡನೆ ಒಪ್ಪಂದ ಮಾಡಿಕೊಳ್ಳುತ್ತೇನೆ. ಆದರೆ ನೀನು ನನಗಾಗಿ ಒಂದು ಕೆಲಸ ಮಾಡಬೇಕು. ಸೌಲನ ಮಗಳಾದ ಮೀಕಲಳನ್ನು ನನ್ನ ಬಳಿಗೆ ಕರೆತರುವ ತನಕ ನಾನು ನಿನ್ನನ್ನು ಸಂಧಿಸುವುದಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |