Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:20 - ಕನ್ನಡ ಸಮಕಾಲಿಕ ಅನುವಾದ

20 ಹೀಗೆಯೇ ಅಬ್ನೇರನು ತನ್ನ ಸಂಗಡ ಇಪ್ಪತ್ತು ಜನರನ್ನು ಕರೆದುಕೊಂಡು, ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದನು. ದಾವೀದನು ಅಬ್ನೇರನಿಗೂ, ಅವನ ಸಂಗಡ ಬಂದ ಜನರಿಗೂ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣ ಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ನಂತರ ಅಬ್ನೇರನು ಹೆಬ್ರೋನಿನಲ್ಲಿದ್ದ ದಾವೀದನ ಬಳಿಗೆ ಬಂದನು. ಅಬ್ನೇರನು ಇಪ್ಪತ್ತು ಜನರನ್ನು ತನ್ನ ಸಂಗಡ ಕರೆದು ತಂದನು. ಅಬ್ನೇರನಿಗೂ ಅವನ ಸಂಗಡಿಗರಿಗೂ ದಾವೀದನು ಔತಣಕೂಟವನ್ನು ಏರ್ಪಡಿಸಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:20
6 ತಿಳಿವುಗಳ ಹೋಲಿಕೆ  

ತನ್ನ ಆಳಿಕೆಯ ಮೂರನೆಯ ವರ್ಷದಲ್ಲಿ ಅವನು ತನ್ನ ಸಮಸ್ತ ಶ್ರೇಷ್ಠರಿಗೂ ಅಧಿಕಾರಿಗಳಿಗೂ ಔತಣವನ್ನು ಮಾಡಿಸಿದನು. ಪಾರಸಿಯ ಮತ್ತು ಮೇದ್ಯ ದೇಶಗಳ ಸೇನಾಧಿಪತಿಗಳೂ ಪ್ರಾಂತಗಳ ಶ್ರೇಷ್ಠರೂ ಪ್ರಧಾನರೂ ಉಪಸ್ಥಿತರಿದ್ದರು.


ಯಾಕೋಬನು ಆ ಬೆಟ್ಟದಲ್ಲಿ ಬಲಿಯನ್ನು ಅರ್ಪಿಸಿ, ಭೋಜನ ಮಾಡುವುದಕ್ಕೆ ತನ್ನ ಬಂಧುಗಳನ್ನು ಕರೆಕಳುಹಿಸಿದನು. ಅವರು ಭೋಜನ ಮಾಡಿ ಬೆಟ್ಟದಲ್ಲಿಯೇ ರಾತ್ರಿ ಇಳಿದುಕೊಂಡರು.


ಆಗ ಇಸಾಕನು ಅವರಿಗೆ ಔತಣವನ್ನು ಮಾಡಿಸಿದನು. ಅವರೆಲ್ಲರೂ ತಿಂದು ಕುಡಿದರು.


ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.


ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.


ಅಬೀಗೈಲಳು ನಾಬಾಲನ ಬಳಿಗೆ ಬಂದಾಗ, ಅರಸನ ಔತಣಕ್ಕೆ ಸಮಾನವಾದ ಔತಣ ಅವನ ಮನೆಯಲ್ಲಿತ್ತು. ಅವನು ಬಹಳವಾಗಿ ಕುಡಿದದ್ದರಿಂದ ಅವನ ಹೃದಯವು ಅವನಲ್ಲಿ ಉಲ್ಲಾಸಗೊಂಡಿತ್ತು. ಆದಕಾರಣ ಅವಳು ಉದಯವಾಗುವವರೆಗೆ ಅವನಿಗೆ ಕಡಿಮೆಯಾದದ್ದನ್ನಾಗಲಿ, ಹೆಚ್ಚಾದದ್ದನ್ನಾಗಲಿ ತಿಳಿಸಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು