2 ಸಮುಯೇಲ 3:22 - ಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಯೋಧರು ಮತ್ತು ಯೋವಾಬನು ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಸುಲಿಗೆಮಾಡುವದಕ್ಕಾಗಿ ಹೋಗಿದ್ದ ದಾವೀದನ ಭಟರೂ ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಯೋವಾಬನೂ ದಾವೀದನ ಅಧಿಕಾರಿಗಳೂ ಯುದ್ಧರಂಗದಿಂದ ಹಿಂದಿರುಗಿದರು. ಶತ್ರುಗಳಿಂದ ವಶಪಡಿಸಿಕೊಂಡ ಅನೇಕ ಬೆಲೆಬಾಳುವ ವಸ್ತುಗಳು ಅವರ ಹತ್ತಿರವಿದ್ದವು. ದಾವೀದನು ಅಬ್ನೇರನನ್ನು ಆಗಲೇ ಸಮಾಧಾನದಿಂದ ಕಳುಹಿಸಿಕೊಟ್ಟಿದ್ದರಿಂದ ಯೋವಾಬನು ಬಂದಾಗ ಅವನು ಹೆಬ್ರೋನಿನಲ್ಲಿರಲಿಲ್ಲ. ಅಧ್ಯಾಯವನ್ನು ನೋಡಿ |