2 ಸಮುಯೇಲ 3:25 - ಕನ್ನಡ ಸಮಕಾಲಿಕ ಅನುವಾದ25 ನೇರನ ಮಗ ಅಬ್ನೇರನನ್ನು ನೀನು ಅರಿತಿದ್ದಿಯಲ್ಲಾ. ನಿಶ್ಚಯವಾಗಿ ಅವನು ನಿನ್ನನ್ನು ಮೋಸಗೊಳಿಸಲು ನಿನ್ನ ಆಗಮನ, ನಿರ್ಗಮನಗಳನ್ನು ತಿಳಿದುಕೊಳ್ಳುವುದಕ್ಕೂ, ನೀನು ಮಾಡುವುದನ್ನೆಲ್ಲಾ ಕಂಡುಹಿಡಿಯುವುದಕ್ಕೂ ಬಂದಿದ್ದನು,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೇರನ ಮಗನಾದ ಅಬ್ನೇರನ ಸಂಗತಿ ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವುದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೇ” ಎಂದು ಹೇಳಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ನೇರನ ಮಗನಾದ ಅಬ್ನೇರನ ಸಂಗತಿ ನಿಮಗೆ ಗೊತ್ತಿಲ್ಲವೇ? ಅವನು ನಿಮ್ಮನ್ನು ವಂಚಿಸುವುದಕ್ಕೂ ನಿಮ್ಮ ಸ್ಥಿತಿಗತಿಗಳನ್ನು ತಿಳಿದುಕೊಳ್ಳುವುದಕ್ಕೂ ನೀವು ಏನು ಮಾಡುತ್ತೀರೆಂಬುದನ್ನು ಕಂಡುಹಿಡಿಯುವುದಕ್ಕೂ ಬಂದಿದ್ದನಷ್ಟೆ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೇರನ ಮಗನಾದ ಅಬ್ನೇರನ ಸಂಗತಿಯು ನಿನಗೆ ಗೊತ್ತಿಲ್ಲವೋ? ಅವನು ನಿನ್ನನ್ನು ವಂಚಿಸುವದಕ್ಕೂ ನಿನ್ನ ಸ್ಥಿತಿಗತಿಗಳನ್ನು ತಿಳುಕೊಳ್ಳುವದಕ್ಕೂ ನೀನು ಏನೇನು ಮಾಡುತ್ತಿರುತ್ತೀ ಎಂಬದನ್ನು ಕಂಡು ಹಿಡಿಯುವದಕ್ಕೂ ಬಂದಿದ್ದನಷ್ಟೆ ಎಂದು ಹೇಳಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಅಬ್ನೇರನು ನೇರನ ಮಗನೆಂಬುದು ನಿನಗೆ ತಿಳಿದಿದೆ. ಅವನು ನಿನ್ನನ್ನು ವಂಚಿಸಲು ಬಂದಿದ್ದನು. ನೀನು ಮಾಡುತ್ತಿರುವುದನ್ನೆಲ್ಲಾ ತಿಳಿದುಕೊಳ್ಳಲು ಅವನು ಬಂದಿದ್ದನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |
ಸ್ವಲ್ಪ ಕಾಲವಾದ ನಂತರ ನಾನು ಬಂದು, ನಿಮ್ಮನ್ನು ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷಿತೋಟ, ಎಣ್ಣೆಮರಗಳು, ಜೇನು ಇವು ಸಮೃದ್ಧಿಯಾಗಿರುವ ನಿಮ್ಮ ದೇಶಕ್ಕೆ ಸಮಾನವಾಗಿರುವ ಇನ್ನೊಂದು ದೇಶಕ್ಕೆ ಕರೆದುಕೊಂಡು ಹೋಗುವೆನು. ಜೀವವನ್ನು ಆಯ್ದುಕೊಳ್ಳಿರಿ, ಮರಣವನ್ನಲ್ಲ. “ ‘ಯೆಹೋವ ದೇವರು ನಮ್ಮನ್ನು ರಕ್ಷಿಸುವರು,’ ಎಂದು ಹಿಜ್ಕೀಯನು ನಿಮ್ಮನ್ನು ಪ್ರೇರೇಪಿಸಿ ತಪ್ಪು ಮಾರ್ಗದಲ್ಲಿ ನಡೆಸುವಾಗ, ಅವನ ಮಾತನ್ನು ಕೇಳಬೇಡಿರಿ.