Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:29 - ಕನ್ನಡ ಸಮಕಾಲಿಕ ಅನುವಾದ

29 ಅದು ಯೋವಾಬನ ತಲೆಯ ಮೇಲೆಯೂ, ಅವನ ತಂದೆಯ ಮನೆತನದವರ ಮೇಲೆಯೂ ನಿಂತಿರಲಿ. ಯೋವಾಬನ ಮನೆಯಲ್ಲಿ ರಕ್ತಸ್ರಾವ ರೋಗದವರೂ, ಕುಷ್ಠರೋಗಿಯೂ, ಕೋಲು ಹಿಡಿದು ನಡೆಯುವವನೂ, ಖಡ್ಗದಿಂದ ಬೀಳುವವನೂ, ಆಹಾರದ ಕೊರತೆಯುಳ್ಳವನಾಗಿಯೂ ಇದ್ದೇ ಇರಲಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ (ರಕ್ತ, ಕೀವುಸ್ರವಿಸುವ ಚರ್ಮ ರೋಗ), ಕುಷ್ಠರೋಗಿಗಳೂ, ಕುಂಟರೂ, ಕತ್ತಿಯಿಂದ ಹತರಾಗುವವರೂ, ಭಿಕ್ಷೇ ಬೇಡುವವರು ಇದ್ದೇ ಇರಲಿ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಈ ಅಪರಾಧ ಯೋವಾಬನ ಮೇಲೂ ಅವನ ಸಂತಾನದವರೆಲ್ಲರ ಮೇಲೂ ಇರಲಿ ಅವನ ಮನೆಯಲ್ಲಿ ಮೇಹಸ್ರಾವವುಳ್ಳವರು, ಕುಷ್ಠರೋಗಿಗಳು, ಕುಂಟರು, ಕತ್ತಿಯಿಂದ ಹತರಾಗುವವರು ಹಾಗು ಭಿಕ್ಷೆಬೇಡುವವರು ಇದ್ದೇ ಇರಲಿ,” ಎಂದನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಈ ಅಪರಾಧವು ಯೋವಾಬನ ಮೇಲೆಯೂ ಅವನ ಸಂತಾನದವರೆಲ್ಲರ ಮೇಲೆಯೂ ಇರಲಿ. ಅವನ ಮನೆಯಲ್ಲಿ ಮೇಹಸ್ರಾವವುಳ್ಳವರೂ ಕುಷ್ಠರೋಗಿಗಳೂ ಕುಂಟರೂ ಕತ್ತಿಯಿಂದ ಹತರಾಗುವವರೂ ಭಿಕ್ಷೆ ಬೇಡುವವರೂ ಇದ್ದೇ ಇರಲಿ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯೋವಾಬನು ಮತ್ತು ಅವನ ವಂಶದವರು ಇದಕ್ಕೆ ಜವಾಬ್ದಾರರು. ಅವನ ವಂಶದವರನ್ನು ಇದಕ್ಕಾಗಿ ದೂಷಿಸಬೇಕು. ಯೋವಾಬನ ವಂಶಕ್ಕೆ ಅನೇಕ ಕಷ್ಟಗಳು ಬರಲಿ. ಅವನ ವಂಶದವರಲ್ಲಿ ಕುಷ್ಠರೋಗಿಗಳು, ಊರುಗೋಲು ಬಳಸುವವರು. ಕತ್ತಿಯಿಂದ ಸಾಯುವವರು, ಭಿಕ್ಷೆ ಬೇಡುವವರು ಇದ್ದೇ ಇರಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:29
18 ತಿಳಿವುಗಳ ಹೋಲಿಕೆ  

ದಾವೀದನು ಅವನಿಗೆ, “ಯೆಹೋವ ದೇವರ ಅಭಿಷಿಕ್ತನನ್ನು ಕೊಂದುಹಾಕಿದೆನೆಂದು ನಿನ್ನ ಬಾಯಿ ನಿನಗೆ ವಿರೋಧವಾಗಿ ಸಾಕ್ಷಿ ಹೇಳಿದ್ದರಿಂದ, ನಿನ್ನ ರಕ್ತವು ನಿನ್ನ ತಲೆಯ ಮೇಲೆ ಇರಲಿ,” ಎಂದನು.


ಅವರು ನಿಮ್ಮ ಭಕ್ತರ ಮತ್ತು ನಿಮ್ಮ ಪ್ರವಾದಿಗಳ ರಕ್ತವನ್ನು ಸುರಿಸಿದ್ದಾರೆ. ನೀವು ಅವರಿಗೆ ಕುಡಿಯುವುದಕ್ಕೆ ರಕ್ತವನ್ನೇ ಕೊಟ್ಟಿರುವಿರಿ. ಅವರು ಅದಕ್ಕೆ ಪಾತ್ರರು.” ಎಂದು ಹೇಳುವುದನ್ನು ಕೇಳಿದೆನು.


ಸರ್ಪವು ಪೌಲನ ಕೈಗೆ ಸುತ್ತಿಕೊಂಡಿರುವುದನ್ನು ದ್ವೀಪ ನಿವಾಸಿಗಳು ಕಂಡಾಗ, “ನಿಶ್ವಯವಾಗಿ ಈ ಮನುಷ್ಯನು ಕೊಲೆಗಾರನಾಗಿರಬೇಕು. ಸಮುದ್ರದಿಂದ ತಪ್ಪಿಸಿಕೊಂಡು ಬಂದರೂ ನ್ಯಾಯವು ಅವನನ್ನು ಜೀವಿಸಲಿಕ್ಕೆ ಬಿಡಲಿಲ್ಲ,” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.


ನಾಮಾನನ ಕುಷ್ಠರೋಗವು ನಿನಗೂ, ನಿನ್ನ ಸಂತಾನಕ್ಕೂ ನಿತ್ಯವಾಗಿ ಇರುವುದು,” ಎಂದನು. ಆಗ ಗೇಹಜಿಯು ಹಿಮದಂತೆ ಬಿಳುಪಾಗಿ, ಕುಷ್ಠರೋಗಿ ಆಗಿ ಎಲೀಷನಿಂದ ಹೊರಟುಹೋದನು.


ಅರಾಮಿನ ಅರಸನ ಸೈನ್ಯಾಧಿಪತಿ ನಾಮಾನನು ತನ್ನ ಯಜಮಾನನ ಮುಂದೆ ಮಹಾಪುರುಷನಾಗಿಯೂ, ಘನವುಳ್ಳವನಾಗಿಯೂ ಇದ್ದನು. ಏಕೆಂದರೆ ಅವನಿಂದ ಯೆಹೋವ ದೇವರು ಅರಾಮ್ಯರಿಗೆ ಬಿಡುಗಡೆಯನ್ನು ಉಂಟುಮಾಡಿದ್ದರು. ಇದಲ್ಲದೆ ಅವನು ಪರಾಕ್ರಮಶಾಲಿಯಾಗಿದ್ದನು. ಆದರೆ ಅವನು ಕುಷ್ಠರೋಗಿಯಾಗಿದ್ದನು.


ಇದರಿಂದ ಯೆರುಬ್ಬಾಳನ ಎಪ್ಪತ್ತು ಮಂದಿ ಮಕ್ಕಳಿಗೆ ಮಾಡಿದ್ದ ಕ್ರೂರತ್ವವು ಬಂದು ಪ್ರಾಪ್ತಿಸುವ ಹಾಗೆಯೂ, ಅವರ ರಕ್ತವು ಅವರನ್ನು ಕೊಂದ ಅವರ ಸಹೋದರನಾದ ಅಬೀಮೆಲೆಕನ ಮೇಲೆಯೂ, ಅವನ ಸಹೋದರರನ್ನು ಕೊಲ್ಲುವುದಕ್ಕೆ ಅವನ ಕೈಗಳನ್ನು ಬಲಪಡಿಸಿದ ಶೆಕೆಮಿನ ಮನುಷ್ಯರ ಮೇಲೆಯೂ ಬರುವ ಹಾಗೆ, ಶೆಕೆಮಿನ ಜನರು ಅಬೀಮೆಲೆಕನಿಗೆ ದ್ರೋಹಮಾಡಿದರು.


“ಇಸ್ರಾಯೇಲರೊಂದಿಗೆ ಮಾತನಾಡಿ ಅವರಿಗೆ ಹೀಗೆ ಹೇಳು: ‘ಒಬ್ಬ ಪುರುಷನ ಶರೀರದಿಂದ ಮೇಹಸ್ರಾವ ಹರಿಯುವುದಾಗಿದ್ದರೆ, ಆ ಸ್ರಾವದ ನಿಮಿತ್ತವಾಗಿ ಅವನು ಅಶುದ್ಧನಾಗಿರುವನು.


ಆಮೇಲೆ ಹತನಾದವನ ಶವಕ್ಕೆ ಸಮೀಪವಾಗಿರುವ ಆ ಊರಿನ ಹಿರಿಯರೆಲ್ಲರೂ ತಗ್ಗಿನಲ್ಲಿ ವಧಿಸಿದ ಕಡಸಿನ ಮೇಲೆ ಕೈಗಳನ್ನು ತೊಳೆದುಕೊಳ್ಳಬೇಕು.


ದಾವೀದನು ಅದನ್ನು ಕೇಳಿದಾಗ, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ ನನ್ನ ರಾಜ್ಯವೂ ಎಂದೆಂದಿಗೂ ಯೆಹೋವ ದೇವರ ಮುಂದೆ ನಿರಪರಾಧಿಯಾಗಿದ್ದೇವೆ.


ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು.


ಅವನು ಎದ್ದು ಕೋಲೂರಿಕೊಂಡು ತಿರುಗಾಡುವುದಾದರೆ, ಅವನನ್ನು ಹೊಡೆದವನು ಅಪರಾಧವಿಲ್ಲದೆ ಹೋಗಬೇಕು. ಪೆಟ್ಟು ತಿಂದವನು ಗುಣಹೊಂದುವವರೆಗೆ ಆಗುವ ಖರ್ಚನ್ನು ಹೊಡೆದವನು ಕೊಡಬೇಕು ಮತ್ತು ಅವನನ್ನು ಪೂರ್ಣ ಸ್ವಸ್ಥನಾಗುವಂತೆ ಮಾಡಬೇಕು.


“ ‘ಹೀಗೆ ನೀವು ವಾಸಿಸುವ ದೇಶವನ್ನು ನೀವು ಅಪವಿತ್ರ ಮಾಡಬೇಡಿರಿ. ಏಕೆಂದರೆ ದೇಶವನ್ನು ಅಪವಿತ್ರ ಮಾಡುವಂಥಾದ್ದು ರಕ್ತವೇ. ಹತರಾದವರ ರಕ್ತಕ್ಕಾಗಿ ಕೊಂದವನ ರಕ್ತದಿಂದಲೇ ಹೊರತು ಬೇರೆ ಪ್ರಾಯಶ್ಚಿತ್ತವಿಲ್ಲ.


ನಾನು ಯೆಹೋವ ದೇವರನ್ನು ಕೊಂಡಾಡುವೆನು; ಏಕೆಂದರೆ, ಅವರು ನೀತಿಯುಳ್ಳವರು. ಮಹೋನ್ನತರಾದ ಯೆಹೋವ ದೇವರ ಹೆಸರನ್ನು ಕೀರ್ತನೆ ಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು