Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:3 - ಕನ್ನಡ ಸಮಕಾಲಿಕ ಅನುವಾದ

3 ಕರ್ಮೇಲ್ಯನಾದ ನಾಬಾಲನ ವಿಧವೆ ಅಬೀಗೈಲಳಿಂದ ಹುಟ್ಟಿದ ಅವನ ಎರಡನೆಯ ಮಗ ಕಿಲಾಬನೂ; ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎರಡನೆಯವನು ಕಿಲಾಬನು. ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು. ಇವನು ಗೆಷೂರಿನ ಅರಸನಾದ ತಲ್ಮೈ ಎಂಬುವನ ಮಗಳಾದ ಮಾಕಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳ ಮಗ. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಎರಡನೆಯವನು ಕಿಲಾಬನು; ಇವನು ಕರ್ಮೆಲ್ಯನಾದ ನಾಬಾಲನ ಹೆಂಡತಿಯಾಗಿದ್ದ ಅಬೀಗೈಲಳಲ್ಲಿ ಹುಟ್ಟಿದವನು. ಮೂರನೆಯವನು ಅಬ್ಷಾಲೋಮನು; ಇವನು ಗೆಷೂರಿನ ಅರಸನಾದ ತಲ್ಮೈ ಎಂಬವನ ಮಗಳಾದ ಮಾಕಳ ಪುತ್ರನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಕಿಲಾಬನು ಎರಡನೆಯ ಮಗ. ಕರ್ಮೆಲ್ಯನಾದ ನಾಬಾಲನ ವಿಧವೆಯಾದ ಅಬೀಗೈಲಳು ಕಿಲಾಬನ ತಾಯಿ. ಅಬ್ಷಾಲೋಮನು ಮೂರನೆಯ ಮಗ. ಗೆಷೂರಿನ ರಾಜ ತಲ್ಮೈನ ಮಗಳಾದ ಮಾಕಳು ಅಬ್ಷಾಲೋಮನ ತಾಯಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:3
22 ತಿಳಿವುಗಳ ಹೋಲಿಕೆ  

ದಾವೀದನೂ, ಅವನ ಜನರೂ ಶೂರಿಗೆ ಹೋಗುವ ಮೇರೆಯಿಂದ ಈಜಿಪ್ಟಿನವರೆಗೂ ಇರುವ ಸೀಮೆಯಲ್ಲಿ ಪೂರ್ವದಿಂದ ವಾಸಿಸಿರುವವರಾದ ಗೆಷೂರ್ಯರ ಮೇಲೆಯೂ ಗಿಜ್ರೀಯರ ಮೇಲೆಯೂ ಅಮಾಲೇಕ್ಯರ ಮೇಲೆಯೂ ದಂಡೆತ್ತಿ ಹೋದರು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,


ಹಾಗೆಯೇ ದಾವೀದನೂ, ಹಾಗೂ ಅವನ ಇಬ್ಬರು ಹೆಂಡತಿಯರಾದ ಇಜ್ರೆಯೇಲಿನವಳಾಗಿರುವ ಅಹೀನೋವಮಳೂ, ಕರ್ಮೇಲ್ಯನಾದ ನಾಬಾಲನ ವಿಧವೆಯಾಗಿದ್ದ ಅಬೀಗೈಲಳೂ ಅಲ್ಲಿಗೆ ಹೋದರು.


ಅಬೀಗೈಲಳು ತ್ವರೆಯಾಗಿ ಎದ್ದು ಕತ್ತೆಯ ಮೇಲೆ ಹತ್ತಿಕೊಂಡು, ತನ್ನ ಸಂಗಡ ಇರುವ ಐದು ಮಂದಿ ದಾಸಿಯರನ್ನು ಕರೆದುಕೊಂಡು ದಾವೀದನ ಸೇವಕರ ಹಿಂದೆ ಹೋಗಿ, ಅವನಿಗೆ ಹೆಂಡತಿಯಾದಳು.


ಅವನು ಕರ್ಮೆಲಿನಲ್ಲಿ ತನ್ನ ಕುರಿಗಳ ಉಣ್ಣೆ ಕತ್ತರಿಸುತ್ತಿದ್ದನು. ಈ ಮನುಷ್ಯನ ಹೆಸರು ನಾಬಾಲನು. ಅವನ ಹೆಂಡತಿಯ ಹೆಸರು ಅಬೀಗೈಲಳು. ಆ ಸ್ತ್ರೀಯು ಬಹು ಬುದ್ಧಿವಂತೆ ಹಾಗು ಸುಂದರಿ. ಆದರೆ ಆ ಮನುಷ್ಯನು ಒರಟಾದವನೂ ದುಷ್ಕರ್ಮಿಯೂ ಆಗಿದ್ದನು. ಅವನು ಕಾಲೇಬನ ವಂಶಸ್ಥನು.


ಆದಾಗ್ಯೂ ಇಸ್ರಾಯೇಲರು ಗೆಷೂರ್ಯರನ್ನೂ ಮಾಕತೀಯರನ್ನೂ ಹೊರಡಿಸಿಬಿಡಲಿಲ್ಲ. ಏಕೆಂದರೆ ಗೆಷೂರ್ಯರೂ ಮಾಕಾತೀಯರೂ ಈ ದಿನದವರೆಗೆ ಇಸ್ರಾಯೇಲರ ಮಧ್ಯದಲ್ಲಿ ವಾಸವಾಗಿದ್ದಾರೆ.


ಮನಸ್ಸೆಯ ಮಗ ಯಾಯೀರನು ಅರ್ಗೋಬಿನ ದೇಶವನ್ನೆಲ್ಲಾ ಗೆಷೂರ್ಯರ, ಮಾಕಾತ್ಯರ ಮೇರೆಯವರೆಗೆ ಸ್ವಾಧೀನಮಾಡಿಕೊಂಡು, ಆ ಬಾಷಾನಿಗೆ ತನ್ನ ಹೆಸರಿನ ಪ್ರಕಾರ ಇಂದಿನವರೆಗೆ ಹವ್ವೋತ್ ಯಾಯೀರೆಂದು ಹೆಸರಿಟ್ಟನು.


ಆಗ ಅರಸನು ನಡುಗುತ್ತಾ ಊರು ಬಾಗಿಲ ಮೇಲಿರುವ ಕೊಠಡಿಗೆ ಏರಿಹೋದನು. ಹೋಗುವಾಗ, “ನನ್ನ ಮಗನಾದ ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನಾದ ಅಬ್ಷಾಲೋಮನೇ, ನಿನಗೆ ಬದಲಾಗಿ ನಾನು ಸತ್ತಿದ್ದರೆ ಉತ್ತಮವಾಗುತ್ತಿತ್ತು. ಅಬ್ಷಾಲೋಮನೇ, ನನ್ನ ಮಗನೇ, ನನ್ನ ಮಗನೇ,” ಎಂದು ಹೇಳಿ ಅತ್ತನು.


ಆದರೆ ಅರಸನು, “ಅವನು ತನ್ನ ಮನೆಗೆ ತಿರುಗಿ ಹೋಗಲಿ. ಅವನು ನನ್ನ ಮುಖವನ್ನು ನೋಡಬಾರದು,” ಎಂದನು. ಆದ್ದರಿಂದ ಅಬ್ಷಾಲೋಮನು ಅರಸನ ಮುಖವನ್ನು ನೋಡದೆ ತನ್ನ ಮನೆಗೆ ತಿರುಗಿಹೋದನು.


ಕಾಲಾಂತರದಲ್ಲಿ ದಾವೀದನ ಮಗ ಅಬ್ಷಾಲೋಮನಿಗೆ ತಾಮಾರಳೆಂಬ ಹೆಸರುಳ್ಳ ಸುಂದರಿಯಾದ ಒಬ್ಬ ಸಹೋದರಿ ಇದ್ದಳು. ಅವಳನ್ನು ದಾವೀದನ ಮಗ ಅಮ್ನೋನನು ಪ್ರೀತಿಮಾಡಿದನು.


ಅಬ್ಷಾಲೋಮನು ಯೋವಾಬನಿಗೆ, “ನಾನು ಗೆಷೂರಿನಿಂದ ಏಕೆ ಬಂದೆನೆಂದು ಅರಸನಿಗೆ ಹೇಳುವುದಕ್ಕೆ ನಿನ್ನನ್ನು ಕಳುಹಿಸುವ ಹಾಗೆ ‘ಇಲ್ಲಿಗೆ ಬಾ’ ಎಂದು ನಿನ್ನನ್ನು ಕರೆಕಳುಹಿಸಿದೆನು. ನಾನು ಇನ್ನೂ ಅಲ್ಲಿಯೇ ಇದ್ದಿದ್ದರೆ ನನಗೆ ಉತ್ತಮವಾಗಿತ್ತು. ಈಗ ನಾನು ಅರಸನ ಮುಖವನ್ನು ನೋಡಬೇಕು. ನನ್ನಲ್ಲಿ ಅಕ್ರಮ ಇದ್ದರೆ, ಅವನು ನನ್ನನ್ನು ಕೊಂದು ಹಾಕಲಿ,” ಎಂದನು.


ನಾಲ್ಕು ವರ್ಷಗಳಾದ ತರುವಾಯ ಅಬ್ಷಾಲೋಮನು ಅರಸನಿಗೆ, “ನಾನು ಯೆಹೋವ ದೇವರಿಗೆ ಮಾಡಿಕೊಂಡಿದ್ದ ನನ್ನ ಹರಕೆಯನ್ನು ಹೆಬ್ರೋನಿನಲ್ಲಿ ಸಲ್ಲಿಸಲು ಹೋಗುವುದಕ್ಕೆ ಅಪ್ಪಣೆಕೊಡಬೇಕು.


ಏಕೆಂದರೆ, ‘ಯೆಹೋವ ದೇವರು ನನ್ನನ್ನು ಯೆರೂಸಲೇಮಿಗೆ ತಿರುಗಿ ನಿಜವಾಗಿಯೂ ಬರಮಾಡಿದರೆ, ನಾನು ಯೆಹೋವ ದೇವರನ್ನು ಸೇವಿಸುವೆನು,’ ಎಂದು ನಿನ್ನ ಸೇವಕನು ಅರಾಮ್ಯ ದೇಶದ ಗೆಷೂರಿನಲ್ಲಿ ವಾಸಿಸಿರುವಾಗ ಹರಕೆ ಮಾಡಿಕೊಂಡಿದ್ದನು,” ಎಂದನು.


ಅವನ ತಂದೆಯು ಎಂದಾದರೂ, “ನೀನು ಹೀಗೆ ಏಕೆ ಮಾಡಿದೆ?” ಎಂದು ಹೇಳಿ ಅವನನ್ನು ಗದರಿಸಲಿಲ್ಲ. ಅವನು ಬಹು ಒಳ್ಳೆಯ ರೂಪವಂತನಾಗಿದ್ದನು. ಅಬ್ಷಾಲೋಮನ ತರುವಾಯ ಅವನ ತಾಯಿ ಅವನನ್ನು ಹೆತ್ತಳು.


ಆಗ ಅವನು, “ರಾಜ್ಯವು ನನ್ನದಾಗಿತ್ತೆಂದೂ, ನಾನು ಆಳುವ ಸಮಸ್ತ ಇಸ್ರಾಯೇಲರು ನನ್ನ ಮೇಲೆ ಕಣ್ಣಿಟ್ಟಿದ್ದರೆಂದೂ ನೀನು ಬಲ್ಲೆ. ಆದರೆ ಎಲ್ಲವೂ ಬದಲಾಗಿ, ರಾಜ್ಯವು ನನ್ನ ಸಹೋದರನಿಗೆ ದೊರಕಿತು. ಏಕೆಂದರೆ ಅದು ಅವನಿಗೆ ಯೆಹೋವ ದೇವರಿಂದ ಉಂಟಾಯಿತು.


ಗೆಷೂರಿನ ಅರಸನಾಗಿರುವ ತಲ್ಮಾಯನ ಮಗಳಾದ ಮಾಕಳಿಂದ ಹುಟ್ಟಿದ ಅವನ ಮೂರನೆಯ ಮಗ ಅಬ್ಷಾಲೋಮನು, ಹಗ್ಗೀತಳಿಂದ ಹುಟ್ಟಿದ ನಾಲ್ಕನೆಯ ಮಗ ಅದೋನೀಯನು.


ಹಾಗೆಯೇ ಯೋವಾಬನು ಎದ್ದು ಗೆಷೂರಿಗೆ ಹೋಗಿ ಅಬ್ಷಾಲೋಮನನ್ನು ಯೆರೂಸಲೇಮಿಗೆ ಕರೆದುಕೊಂಡು ಬಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು