Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:31 - ಕನ್ನಡ ಸಮಕಾಲಿಕ ಅನುವಾದ

31 ದಾವೀದನು ಯೋವಾಬನಿಗೂ, ಅವನ ಸಂಗಡವಿದ್ದ ಸಮಸ್ತ ಜನರಿಗೂ, “ನೀವು ನಿಮ್ಮ ವಸ್ತ್ರಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಉಟ್ಟುಕೊಂಡು, ಅಬ್ನೇರನ ಮುಂದೆ ಗೋಳಾಡಿರಿ,” ಎಂದನು. ಅರಸನಾದ ದಾವೀದನು ತಾನೇ ಅವನ ಶವದ ಪೆಟ್ಟಿಗೆಯ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಅರಸನಾದ ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣಿತಟ್ಟುಗಳನ್ನು ಕಟ್ಟಿಕೊಂಡು, ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ” ಎಂದು ಆಜ್ಞಾಪಿಸಿ ತಾನು ಶವಯಾತ್ರೆ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು, ಗೋಣೀತಟ್ಟುಗಳನ್ನು ಉಟ್ಟುಕೊಂಡು, ಸಂತಾಪಸೂಚಿಸುತ್ತಾ ಅಬ್ನೇರನ ಶವದ ಮುಂದೆ ನಡೆಯಿರಿ,” ಎಂದು ಆಜ್ಞಾಪಿಸಿದನು. ತಾನೂ ಚಟ್ಟದ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

31 ದಾವೀದನು ಯೋವಾಬನಿಗೂ ಅವನ ಸಂಗಡ ಇದ್ದ ಜನರಿಗೂ - ನಿಮ್ಮ ಬಟ್ಟೆಗಳನ್ನು ಹರಕೊಂಡು ಗೋಣೀತಟ್ಟುಗಳನ್ನು ಕಟ್ಟಿಕೊಂಡು ಗೋಳಾಡುತ್ತಾ ಅಬ್ನೇರನ ಶವದ ಮುಂದೆ ನಡಿಯಿರಿ ಎಂದು ಆಜ್ಞಾಪಿಸಿ ತಾನು ಚಟ್ಟದ ಹಿಂದೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31-32 ದಾವೀದನು ಯೋವಾಬನಿಗೆ ಮತ್ತು ಅವನ ಜೊತೆಯಲ್ಲಿದ್ದ ಜನರಿಗೆಲ್ಲ, “ನಿಮ್ಮ ಬಟ್ಟೆಗಳನ್ನು ಹರಿದುಕೊಂಡು ಮತ್ತು ಶೋಕಸೂಚಕ ವಸ್ತ್ರಗಳನ್ನು ಧರಿಸಿಕೊಂಡು ಅಬ್ನೇರನಿಗಾಗಿ ಶೋಕಿಸಿ” ಎಂದು ಹೇಳಿದನು. ರಾಜನಾದ ದಾವೀದನೂ ಶವಸಂಸ್ಕಾರಕ್ಕೆ ಹೋದನು. ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಸಮಾಧಿ ಮಾಡಿದರು. ಅಬ್ನೇರನ ಸಮಾಧಿಯ ಹತ್ತಿರ ರಾಜನಾದ ದಾವೀದನೂ ಇತರ ಜನರೂ ಗೋಳಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:31
12 ತಿಳಿವುಗಳ ಹೋಲಿಕೆ  

ಆಗ ಯಾಕೋಬನು ತನ್ನ ವಸ್ತ್ರಗಳನ್ನು ಹರಿದುಕೊಂಡು ತನ್ನ ನಡುವಿಗೆ ಗೋಣಿಯನ್ನು ಕಟ್ಟಿಕೊಂಡು ತನ್ನ ಮಗನಿಗೋಸ್ಕರ ಬಹುದಿನ ದುಃಖಪಟ್ಟನು.


ಆಗ ದಾವೀದನೂ, ಅವನ ಸಂಗಡ ಇದ್ದ ಸಮಸ್ತ ಜನರೂ ತಮ್ಮ ವಸ್ತ್ರಗಳನ್ನು ಹರಿದುಕೊಂಡು,


ಮೂರನೆಯ ದಿನದಲ್ಲಿ ಒಬ್ಬನು ತನ್ನ ವಸ್ತ್ರಗಳನ್ನು ಹರಿದುಕೊಂಡು, ತನ್ನ ತಲೆಯ ಮೇಲೆ ಮಣ್ಣು ಹಾಕಿಕೊಂಡು, ಸೌಲನ ಪಾಳೆಯದಿಂದ ಹೊರಟು ದಾವೀದನ ಬಳಿಗೆ ಬಂದು, ನೆಲದ ಮಟ್ಟಿಗೂ ಬಾಗಿ ನಮಸ್ಕರಿಸಿದನು.


ಅವನು ಅವಳನ್ನು ನೋಡಿದಾಗ, ತನ್ನ ವಸ್ತ್ರಗಳನ್ನು ಹರಿದುಕೊಂಡು, “ಅಯ್ಯೋ, ನನ್ನ ಮಗಳೇ, ನೀನು ನನ್ನನ್ನು ಬಹಳವಾಗಿ ಕುಂದಿಸಿದೆ. ನನ್ನನ್ನು ತೊಂದರೆ ಪಡಿಸುವವರಲ್ಲಿ ನೀನೂ ಒಬ್ಬಳಾದೆ. ಏಕೆಂದರೆ ನಾನು ಯೆಹೋವ ದೇವರಿಗೆ ನನ್ನ ಬಾಯಿತೆರೆದು, ಪ್ರಮಾಣಮಾಡಿದೆನು, ಹಿಂದೆಗೆಯಲಾರೆನು,” ಎಂದನು.


ಆಗ ಯೆಹೋಶುವನು ತನ್ನ ವಸ್ತ್ರಗಳನ್ನು ಹರಿದುಕೊಂಡನು. ಇಸ್ರಾಯೇಲಿನ ಹಿರಿಯರೂ ತಮ್ಮ ತಲೆಗಳ ಮೇಲೆ ಧೂಳನ್ನು ಹಾಕಿಕೊಂಡು ಸಂಜೆಯವರೆಗೆ ಯೆಹೋವ ದೇವರ ಮಂಜೂಷದ ಮುಂದೆ ನೆಲದ ಮೇಲೆ ಬೋರಲು ಬಿದ್ದರು.


ಅನಂತರ ಯೇಸು ಬಂದು ಶವದ ಚಟ್ಟವನ್ನು ಮುಟ್ಟಿದಾಗ, ಅದನ್ನು ಹೊತ್ತುಕೊಂಡಿದ್ದವರು ಹಾಗೆಯೇ ನಿಂತರು. ಆಗ ಯೇಸು, “ಯುವಕನೇ, ನಾನು ನಿನಗೆ ಹೇಳುತ್ತೇನೆ, ಎದ್ದೇಳು!” ಎಂದರು.


ಅರಸನಾದ ಹಿಜ್ಕೀಯನು ಅದನ್ನು ಕೇಳಿದಾಗ, ತನ್ನ ಬಟ್ಟೆಗಳನ್ನು ಹರಿದುಕೊಂಡು, ಗೋಣಿ ತಟ್ಟಿನಿಂದ ತನ್ನನ್ನು ಮುಚ್ಚಿಕೊಂಡು, ಯೆಹೋವ ದೇವರ ಆಲಯಕ್ಕೆ ಹೋದನು.


ರೂಬೇನನು ಗುಂಡಿಯ ಬಳಿಗೆ ತಿರುಗಿ ಬಂದಾಗ, ಯೋಸೇಫನು ಗುಂಡಿಯಲ್ಲಿ ಇಲ್ಲದ್ದರಿಂದ, ತನ್ನ ವಸ್ತ್ರಗಳನ್ನು ಹರಿದುಕೊಂಡನು.


ನನ್ನ ಇಬ್ಬರು ಸಾಕ್ಷಿಗಳಿಗೆ ಗೋಣಿತಟ್ಟುಗಳನ್ನು ಹೊದ್ದುಕೊಂಡು, ಸಾವಿರದ ಇನ್ನೂರ ಅರವತ್ತು ದಿನಗಳ ತನಕ ಪ್ರವಾದಿಸುವಂತೆ ಮಾಡುವೆನು,”


ಆಗ ಅವನ ಸೇವಕರು ಅವನಿಗೆ, “ಇಸ್ರಾಯೇಲಿನ ಮನೆಯ ಅರಸರು ಕರುಣೆಯುಳ್ಳವರೆಂದು ನಾವು ಕೇಳಿದ್ದೇವೆ. ನಾವು ಗೋಣಿಯನ್ನು ಸೊಂಟಕ್ಕೆ ಕಟ್ಟಿಕೊಂಡು, ಹಗ್ಗಗಳನ್ನು ನಮ್ಮ ತಲೆಗೆ ಸುತ್ತಿಕೊಂಡು ಇಸ್ರಾಯೇಲಿನ ಅರಸನ ಬಳಿಗೆ ಹೋಗೋಣ. ಒಂದು ವೇಳೆ ಅವನು ನಿನ್ನ ಪ್ರಾಣವನ್ನು ರಕ್ಷಿಸುವನು,” ಎಂದರು.


ಆದರೆ ಅಹಾಬನು ಆ ಮಾತುಗಳನ್ನು ಕೇಳಿದಾಗ, ಅವನು ತನ್ನ ವಸ್ತ್ರಗಳನ್ನು ಹರಿದು, ತನ್ನ ಶರೀರದ ಮೇಲೆ ಗೋಣಿಯನ್ನು ಹಾಕಿಕೊಂಡು, ಉಪವಾಸಮಾಡುತ್ತಾ ದೀನತೆಯಿಂದ ನಡೆದನು.


ಇದಲ್ಲದೆ ಅವನು ಅರಮನೆಯ ಮೇಲ್ವಿಚಾರಕನಾಗಿದ್ದ ಎಲ್ಯಾಕೀಮ್, ಕಾರ್ಯದರ್ಶಿಯಾದ ಶೆಬ್ನ, ಹಿರಿಯ ಯಾಜಕರು ಇವರನ್ನು ಕರೆಸಿ, “ನೀವು ಗೋಣಿತಟ್ಟನ್ನು ಕಟ್ಟಿಕೊಂಡು ಆಮೋಚನ ಮಗನಾದ ಪ್ರವಾದಿ ಯೆಶಾಯನ ಬಳಿಗೆ ಹೋಗಿರಿ,” ಎಂದು ಹೇಳಿ ಕಳುಹಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು