Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:39 - ಕನ್ನಡ ಸಮಕಾಲಿಕ ಅನುವಾದ

39 ನಾನು ಅರಸನಾಗಿ ಅಭಿಷೇಕ ಹೊಂದಿದ್ದರೂ ಇಂದಿಗೆ ದುರ್ಬಲನಾಗಿದ್ದೇನೆ. ಚೆರೂಯಳ ಪುತ್ರರಾದ ಇವರು ನನ್ನ ಹತೋಟಿಗೆ ಬಾರದವರು. ಕೆಟ್ಟತನ ಮಾಡುವವನಿಗೆ ಯೆಹೋವ ದೇವರು ಅವನ ಕೆಟ್ಟತನಕ್ಕೆ ಸರಿಯಾಗಿ ಪ್ರತಿಫಲ ಕೊಡುವರು,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು ಯೆಹೋವನೇ ಕೆಡುಕರಿಗೆ ಮುಯ್ಯಿ ತೀರಿಸಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ನಾನು ರಾಜಾಭಿಷೇಕ ಹೊಂದಿದ್ದರೂ ಈಗ ಏನೂ ಮಾಡಲು ಅಶಕ್ತನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಸರ್ವೇಶ್ವರನೇ ಕೆಡುಕರಿಗೆ ಮುಯ್ಯಿತೀರಿಸಲಿ,” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

39 ನಾನು ರಾಜ್ಯಾಭಿಷೇಕ ಹೊಂದಿದವನಾಗಿದ್ದರೂ ಈಗ ಏನೂ ಮಾಡಲಾರದವನಾಗಿದ್ದೇನೆ. ಚೆರೂಯಳ ಮಕ್ಕಳಾದ ಇವರು ನನ್ನ ಹತೋಟಿಗೆ ಬಾರದವರು. ಯೆಹೋವನೇ ಕೆಡುಕರಿಗೆ ಮುಯ್ಯಿತೀರಿಸಲಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ನಾನು ರಾಜನಾಗಿದ್ದರೂ ಏನೂ ಮಾಡಲಾರದ ಸ್ಥಿತಿಯಲ್ಲಿದ್ದೇನೆ. ಚೆರೂಯಳ ಗಂಡುಮಕ್ಕಳಾದ ಇವರು ನನಗೆ ಬಹಳ ಕೇಡನ್ನು ಮಾಡಿದರು. ಯೆಹೋವನು ಈ ಜನರಿಗೆ ತಕ್ಕ ದಂಡನೆಯನ್ನು ನೀಡಲಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:39
30 ತಿಳಿವುಗಳ ಹೋಲಿಕೆ  

ದುಷ್ಟತನ ಮಾಡುವವರೆಲ್ಲರನ್ನು ಪ್ರತಿ ಮುಂಜಾನೆ ನಿಲ್ಲಿಸಿಬಿಡುವೆನು; ಯೆಹೋವ ದೇವರ ಪಟ್ಟಣದೊಳಗಿಂದ ಪ್ರತಿಯೊಬ್ಬ ದುಷ್ಟನನ್ನು ಹೊರಗೆ ಹಾಕುವೆನು.


ಅವರ ಕೃತ್ಯಗಳ ಪ್ರಕಾರವಾಗಿಯೂ, ಅವರ ಕೆಟ್ಟತನಗಳ ಪ್ರಕಾರವಾಗಿಯೂ ಅವರಿಗೆ ಪ್ರತಿಫಲಕೊಡಿರಿ; ಅವರ ಕೈಕೃತ್ಯಗಳ ಪ್ರಕಾರವಾಗಿ ಅವರಿಗೆ ಕೊಡಿರಿ, ಅರ್ಹತೆಗೆ ತಕ್ಕಂತೆಯೇ ಅವರಿಗೆ ಬರಮಾಡಿರಿ.


ಕಂಚುಗಾರನಾದ ಅಲೆಕ್ಸಾಂದ್ರನು ನನಗೆ ಬಹಳ ಕೇಡು ಮಾಡಿದ್ದಾನೆ. ಕರ್ತದೇವರು ಅವನ ಕೃತ್ಯಗಳಿಗೆ ಅನುಸಾರವಾಗಿ ಅವನಿಗೆ ಪ್ರತಿಫಲವನ್ನು ಕೊಡಲಿ.


ಏಕೆಂದರೆ, ಅವನು ನಿನಗೆ ಒಳ್ಳೆಯದನ್ನು ಮಾಡುವುದಕ್ಕೋಸ್ಕರ ಇರುವ ದೇವರ ಸೇವಕನಾಗಿರುತ್ತಾನೆ. ಆದರೆ ನೀನು ಕೆಟ್ಟದ್ದನ್ನು ಮಾಡುವವನಾಗಿದ್ದರೆ ಭಯಪಡಬೇಕು. ಏಕೆಂದರೆ ಅವನು ವ್ಯರ್ಥವಾಗಿ ಅಧಿಕಾರವನ್ನು ಪಡೆದಿಲ್ಲ. ಅವನು ದೇವರ ಸೇವಕನಾಗಿದ್ದು ಕೆಟ್ಟದ್ದನ್ನು ಅಭ್ಯಾಸ ಮಾಡುವವನಿಗೆ ದಂಡನೆಯನ್ನು ವಿಧಿಸುತ್ತಾನೆ.


ಅರಸನ ಸನ್ನಿಧಾನದಿಂದ ದುಷ್ಟರನ್ನು ತೆಗೆದುಹಾಕಿದರೆ, ಆಗ ಅವನ ಸಿಂಹಾಸನವು ನೀತಿಯಲ್ಲಿ ಸ್ಥಿರವಾಗುವುದು.


ಯೆಹೋವ ದೇವರೇ, ನಿಮ್ಮಲ್ಲಿ ಒಡಂಬಡಿಕೆಯ ಪ್ರೀತಿ ಇದೆ. ನೀವು ಪ್ರತಿ ಮನುಷ್ಯನಿಗೂ ಅವನ ಕೃತ್ಯಕ್ಕೆ ತಕ್ಕ ಪ್ರತಿಫಲ ಕೊಡುತ್ತೀರಿ.”


ಅವನಿಗೆ, ಈ ಪ್ರಕಾರ ಹೇಳಬೇಕು: ‘ಜಾಗರೂಕನಾಗಿ ಸುಮ್ಮನಿರು, ಭಯಪಡಬೇಡ. ರೆಚೀನ, ಅರಾಮ್ಯರು, ಮತ್ತು ರೆಮಲ್ಯನ ಮಗ ಇವರ ಕೋಪವು ಎಷ್ಟು ಹೆಚ್ಚಿದರೂ ಹೊಗೆಯಾಡುವ ಈ ಎರಡು ಮೋಟುಕೊಳ್ಳಿಗಳಿಗೆ ನಿನ್ನ ಹೃದಯವು ಕುಂದದಿರಲಿ.


ಅರಸನು ತನ್ನ ನ್ಯಾಯತೀರ್ಪಿನ ಸಿಂಹಾಸನದ ಮೇಲೆ ಕೂತಿರುವಾಗ, ತನ್ನ ದೃಷ್ಟಿಯಿಂದ ಸಕಲ ಕೆಟ್ಟತನವನ್ನು ತೂರುವನು.


ದುಷ್ಟರ ಕೊಂಬುಗಳನ್ನೆಲ್ಲಾ ಕಡಿದುಹೋಗುವುದು. ಆದರೆ ನೀತಿವಂತನ ಕೊಂಬುಗಳು ಎತ್ತಲಾಗುವುದು.


ಅಂಥವರ ಕೇಡು ಅವರ ಮೇಲೆಯೇ ತಿರುಗುವುದು; ಅವರ ತಲೆಯ ಮೇಲೆ ಅವರ ಬಲಾತ್ಕಾರವೇ ಇಳಿಯುವುದು.


ದಾವೀದನು, “ನನ್ನ ಮಗ ಸೊಲೊಮೋನನು ಎಳೆಯ ಪ್ರಾಯದವನಾಗಿದ್ದಾನೆ. ಯೆಹೋವ ದೇವರಿಗೆ ಕಟ್ಟಬೇಕಾದ ಆಲಯವು ಸಮಸ್ತ ದೇಶಗಳಲ್ಲಿ ಕೀರ್ತಿಯಲ್ಲಿಯೂ, ಸೌಂದರ್ಯದಲ್ಲಿಯೂ ಅಧಿಕ ಘನವುಳ್ಳದ್ದಾಗಿರಬೇಕು. ನಾನು ಅದಕ್ಕೋಸ್ಕರ ಈಗ ಸಿದ್ಧಮಾಡುವೆನು,” ಎಂದು ಹೇಳಿದನು. ಆದ್ದರಿಂದ ದಾವೀದನು ಸಾಯುವುದಕ್ಕಿಂತ ಮುಂಚೆ ಬಹಳವಾಗಿ ಸಿದ್ಧಮಾಡಿದನು.


ಇದಲ್ಲದೆ ನೀವು ಅಮಾಸನಿಗೆ, ‘ನೀನು ನನ್ನ ರಕ್ತವೂ, ನನ್ನ ಮಾಂಸವೂ ಅಲ್ಲವೋ? ನೀನು ಯೋವಾಬನಿಗೆ ಬದಲಾಗಿ ಯಾವಾಗಲೂ ನನ್ನ ಮುಂದೆ ಸೈನ್ಯದ ಪ್ರಧಾನನಾಗಿರದೆ ಹೋದರೆ, ದೇವರು ನನಗೆ ಏನಾದರೂ ಮಾಡಲಿ,’ ಎಂದು ಹೇಳಿರಿ,” ಎಂದನು.


“ಮನುಷ್ಯನನ್ನು ಸಾಯುವಂತೆ ಹೊಡೆದವನು ಖಂಡಿತವಾಗಿ ಸಾಯಬೇಕು.


ಇದಲ್ಲದೆ ಅರಸನು ತನ್ನ ಸೇವಕರಿಗೆ, “ಇಸ್ರಾಯೇಲಿನಲ್ಲಿ ಈ ಹೊತ್ತು ಪ್ರಧಾನನೂ ದೊಡ್ಡವನೂ ಬಿದ್ದಿದ್ದಾನೆಂದು ಗೊತ್ತಿಲ್ಲವೋ?


ಆದರೆ ಅರಸನು, “ಚೆರೂಯಳ ಮಕ್ಕಳೇ, ನನಗೂ ನಿಮಗೂ ಏನು? ಅವನು ನನ್ನನ್ನು ದೂಷಿಸಲಿ. ಏಕೆಂದರೆ, ‘ದಾವೀದನನ್ನು ದೂಷಿಸು,’ ಎಂದು ಯೆಹೋವ ದೇವರು ಅವನಿಗೆ ಹೇಳಿದ್ದಾರೆ. ಹಾಗಾದರೆ, ‘ಏಕೆ ಹೀಗೆ ಮಾಡುತ್ತೀ?’ ಎಂದು ಹೇಳುವವನ್ಯಾರು?” ಎಂದನು.


ಆದರೆ ದಾವೀದನು, “ಚೆರೂಯಳ ಮಕ್ಕಳೇ, ಈ ಹೊತ್ತು ನೀವು ನನಗೆ ಶತ್ರುಗಳಾಗಿರುವ ಹಾಗೆ ನಿಮ್ಮೊಂದಿಗೆ ನನಗೆ ಏನು? ಈ ಹೊತ್ತು ಇಸ್ರಾಯೇಲಿನಲ್ಲಿ ಯಾರಿಗೂ ಮರಣದಂಡನೆ ಆಗಬಾರದು, ಏಕೆಂದರೆ ಈ ಹೊತ್ತು ನಾನು ಇಸ್ರಾಯೇಲಿನ ಮೇಲೆ ಅರಸನಾಗಿದ್ದೇನೆಂದು ಗೊತ್ತಾಯಿತಲ್ಲಾ?” ಎಂದನು.


ಆಗ ಯೆಹೋವ ದೇವರು ಅವನ ತಲೆಯ ಮೇಲೆ ಅವನ ರಕ್ತಾಪರಾಧವನ್ನು ಬರಮಾಡುವರು. ಏಕೆಂದರೆ ಅವನು ನನ್ನ ತಂದೆ ದಾವೀದನಿಗೆ ತಿಳಿಯದೆ ತನಗಿಂತ ಉತ್ತಮರೂ ನೀತಿವಂತರೂ ಆದ ಇಬ್ಬರು ವ್ಯಕ್ತಿಗಳನ್ನು ಖಡ್ಗದಿಂದ ಕೊಂದನು. ಅವರು ಯಾರೆಂದರೆ, ಇಸ್ರಾಯೇಲಿನ ಸೈನ್ಯಕ್ಕೆ ಅಧಿಪತಿಯೂ ನೇರನ ಮಗನೂ ಆದ ಅಬ್ನೇರನು, ಯೆಹೂದ ಸೈನ್ಯಕ್ಕೆ ಅಧಿಪತಿಯೂ ಯೆತೆರನ ಮಗನೂ ಆದ ಅಮಾಸನು.


ಇದಲ್ಲದೆ ಅರಸನಾದ ದಾವೀದನು ಸಮಸ್ತ ಸಭೆಗೆ ಹೇಳಿದ್ದೇನೆಂದರೆ, “ದೇವರು ಒಬ್ಬನನ್ನೇ ಆಯ್ದುಕೊಂಡ ನನ್ನ ಮಗ ಸೊಲೊಮೋನನು ಚಿಕ್ಕವನೂ ಎಳೆಯ ಪ್ರಾಯದವನೂ ಆಗಿದ್ದಾನೆ. ಆದರೆ ಕೆಲಸವು ದೊಡ್ಡದು. ಈ ಮಹಾ ಕಟ್ಟಡವು ಮನುಷ್ಯರಿಗೋಸ್ಕರವಲ್ಲ, ದೇವರಾದ ಯೆಹೋವ ದೇವರಿಗೋಸ್ಕರವೇ,


ಇದಲ್ಲದೆ ನಿಷ್ಪ್ರಯೋಜಕರಾದ ದುಷ್ಟರು ಅವನ ಬಳಿಗೆ ಕೂಡಿಬಂದು, ಸೊಲೊಮೋನನ ಮಗ ರೆಹಬ್ಬಾಮನು ಎಳೆಯ ಪ್ರಾಯದವನೂ, ನಿರ್ಣಯಿಸಲಾಗದವನೂ ಅವರನ್ನು ಎದುರಿಸಲು ಬಲವಿಲ್ಲದವನೂ ಆಗಿರುವುದರಿಂದ ಅವನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡರು.


ಆಗ ಅರಸನಾದ ಚಿದ್ಕೀಯನು, “ಇಗೋ, ಅವನು ನಿಮ್ಮ ಕೈಯಲ್ಲಿ ಇದ್ದಾನೆ; ನಿಮಗೆ ವಿರೋಧವಾಗಿ ಅರಸನು ಏನು ಮಾಡುವುದಿಲ್ಲ,” ಎಂದನು.


ಆಗ ರಾಜನು ಆಜ್ಞಾಪಿಸಲು, ಅವರು ದಾನಿಯೇಲನನ್ನು ತಂದು ಸಿಂಹದ ಗುಹೆಯಲ್ಲಿ ಹಾಕಿದರು. ಅರಸನು ದಾನಿಯೇಲನಿಗೆ, “ನೀನು ಯಾವಾಗಲೂ ಸೇವಿಸುವ ನಿನ್ನ ದೇವರು ನಿನ್ನನ್ನು ಕಾಪಾಡಲಿ!” ಎಂದು ಹೇಳಿದನು.


“ಆದರೆ ನೀವು ಈ ಪ್ರಕಾರ ಮಾಡದಿದ್ದರೆ ಇಗೋ, ಯೆಹೋವ ದೇವರ ವಿರೋಧವಾಗಿ ಪಾಪಮಾಡಿದವರಾಗುವಿರಿ, ನಿಮ್ಮ ಪಾಪ ನಿಮ್ಮನ್ನು ಹಿಡಿದುಕೊಳ್ಳುವುದೆಂದು ತಿಳಿದುಕೊಳ್ಳಿರಿ.


ಇದಲ್ಲದೆ ಶೆಕೆಮಿನವರು ಮಾಡಿದ ಸಮಸ್ತ ಕೆಟ್ಟತನವನ್ನು ಅವರ ತಲೆಗಳ ಮೇಲೆ ದೇವರು ಬರಮಾಡಿದರು. ಹೀಗೆ ಯೆರುಬ್ಬಾಳನ ಮಗನಾದ ಯೋತಾಮನ ಶಾಪವು ಅವರ ಮೇಲೆ ಬಂದಿತು.


ಆದರೆ ನೀನು ಈಗ ಅವನನ್ನು ನಿರಪರಾಧಿ ಎಂದು ಎಣಿಸಬೇಡ. ನೀನು ಬುದ್ಧಿವಂತನಾಗಿರುವುದರಿಂದ ಅವನಿಗೆ ಏನು ಮಾಡತಕ್ಕದ್ದೋ ನೀನು ಬಲ್ಲೆ. ಆದರೆ ಅವನ ನರೆತಲೆಯನ್ನು ರಕ್ತದಿಂದ ಸಮಾಧಿ ಸೇರುವಂತೆ ಮಾಡು,” ಎಂದನು.


ಕೆಡುಕರಿಗೆ ಕಷ್ಟ! ಅವರಿಗೆ ಕೇಡೇ ಇರಲಿ. ಏಕೆಂದರೆ ಅವರ ಕೈಗಳ ಪ್ರತಿಫಲವು ಅವರಿಗೆ ಕೊಡಲಾಗುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು