Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 4:12 - ಕನ್ನಡ ಸಮಕಾಲಿಕ ಅನುವಾದ

12 ದಾವೀದನು ತನ್ನ ಜನರಿಗೆ ಆಜ್ಞಾಪಿಸಿದ್ದರಿಂದ, ಅವರು ಅವರನ್ನು ಕೊಂದುಹಾಕಿ, ಅವರ ಕೈಕಾಲುಗಳನ್ನು ಕಡಿದು, ಹೆಬ್ರೋನಿನ ಕೊಳದ ಬಳಿಯಲ್ಲಿ ತೂಗುಹಾಕಿದರು. ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು, ಅದನ್ನು ಹೆಬ್ರೋನಿನಲ್ಲಿರುವ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು, ಕೈಕಾಲುಗಳನ್ನು ಕತ್ತರಿಸಿ, ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಹೂಳಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಅಂತೆಯೇ ತನ್ನ ಆಳುಗಳಿಗೆ ಆಜ್ಞಾಪಿಸಿದನು. ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಇಬ್ನೇರನ ಸಮಾಧಿಯಲ್ಲಿ ಹೂಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ಆಳುಗಳಿಗೆ ಆಜ್ಞಾಪಿಸಲು ಅವರು ಇವರನ್ನು ಕೊಂದು ಕೈಕಾಲುಗಳನ್ನು ಕತ್ತರಿಸಿ ಶವಗಳನ್ನು ಹೆಬ್ರೋನಿನ ಕೆರೆಯ ಬಳಿಯಲ್ಲಿ ನೇತುಹಾಕಿದರು. ಈಷ್ಬೋಶೆತನ ತಲೆಯನ್ನು ಹೆಬ್ರೋನಿನಲ್ಲಿದ್ದ ಅಬ್ನೇರನ ಸಮಾಧಿಯಲ್ಲಿ ಇಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ದಾವೀದನು, ರೇಕಾಬನನ್ನು ಮತ್ತು ಬಾಣನನ್ನು ಕೊಲ್ಲಲು ಯುವಕರಿಗೆ ಆಜ್ಞಾಪಿಸಿದನು. ಆಗ ಆ ಯುವಕರು ರೇಕಾಬನ ಮತ್ತು ಬಾಣನ ಕೈಕಾಲುಗಳನ್ನು ಕತ್ತರಿಸಿಹಾಕಿ, ಹೆಬ್ರೋನಿನ ಕೊಳದ ಬಳಿಯಲ್ಲಿ ಅವರ ದೇಹಗಳನ್ನು ನೇತುಹಾಕಿದರು. ನಂತರ ಅವರು ಈಷ್ಬೋಶೆತನ ತಲೆಯನ್ನು ತೆಗೆದುಕೊಂಡು ಹೋಗಿ, ಹೆಬ್ರೋನಿನಲ್ಲಿ ಅಬ್ನೇರನನ್ನು ಸಮಾಧಿಮಾಡಿದ ಸ್ಥಳದಲ್ಲೇ ಸಮಾಧಿಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 4:12
8 ತಿಳಿವುಗಳ ಹೋಲಿಕೆ  

ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು.


ಯುವಕರಲ್ಲಿ ಒಬ್ಬನನ್ನು ಕರೆದು, “ನೀನು ಇವನನ್ನು ಕೊಲ್ಲು,” ಎಂದನು. ಹಾಗೆಯೇ ಅವನು ಅವನನ್ನು ಹೊಡೆದು ಕೊಂದನು.


ನೀವು ಇತರರ ಬಗ್ಗೆ ಕೊಡುವ ತೀರ್ಪಿನ ಪ್ರಕಾರವೇ ನಿಮಗೂ ತೀರ್ಪಾಗುವುದು, ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆದುಕೊಡಲಾಗುವುದು.


ಆದರೆ ದೇವರೇ, ದುಷ್ಟರನ್ನು ನಾಶದ ಕುಣಿಯಲ್ಲಿ ಇಳಿಯ ಮಾಡುವಿರಿ. ಕೊಲೆಪಾತಕರೂ ಮೋಸಗಾರರೂ ತಮ್ಮ ಆಯುಷ್ಕಾಲದಲ್ಲಿ ಅರ್ಧವನ್ನೂ ಜೀವಿಸುವುದಿಲ್ಲ. ನಾನಾದರೋ ನಿಮ್ಮಲ್ಲಿ ಭರವಸವಿಡುತ್ತೇನೆ.


ಅವರನ್ನು ಗಿಬ್ಯೋನ್ಯರ ಕೈಯಲ್ಲಿ ಒಪ್ಪಿಸಿಕೊಟ್ಟನು. ಅವರು ಇವರನ್ನು ಕೊಂದು, ಯೆಹೋವ ದೇವರ ಮುಂದೆ ಬೆಟ್ಟದ ಮೇಲೆ ನೇತುಹಾಕಿದರು. ಈ ಏಳುಮಂದಿಯೂ ಒಂದೇ ಸಾರಿ ಹತರಾದರು. ಇವರನ್ನು ಕೊಂದಾಗ ಜವೆಗೋಧಿ ಸುಗ್ಗಿಯ ಆರಂಭವಾಗಿತ್ತು.


ಸೌಲನ ಸೈನ್ಯಾಧಿಪತಿಯಾದ ನೇರನ ಮಗನಾಗಿರುವ ಅಬ್ನೇರನು ಸೌಲನ ಮಗ ಈಷ್ಬೋಶೆತನನ್ನು ಮಹನಯಿಮಿಗೆ ಕರೆದುಕೊಂಡು ಹೋದನು.


ಯೆಹೋವ ದೇವರು ಸೌಲನ ಮನೆಯವರ ರಕ್ತವನ್ನು ಸೌಲನಿಗೆ ಪ್ರತಿಯಾಗಿ ಅರಸನಾದ ನಿನ್ನ ಮೇಲೆ ತಿರುಗಿ ಬರಮಾಡಿ, ರಾಜ್ಯವನ್ನು ನಿನ್ನ ಮಗ ಅಬ್ಷಾಲೋಮನ ಕೈಯಲ್ಲಿ ಒಪ್ಪಿಸಿಕೊಟ್ಟರು. ಏಕೆಂದರೆ ನೀನು ಕೊಲೆಗಾರನಾದುದರಿಂದ, ನಿನ್ನ ಕೇಡಿನಲ್ಲಿ ನೀನು ಸಿಕ್ಕಿಕೊಂಡೆ,” ಎಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು