2 ಸಮುಯೇಲ 4:4 - ಕನ್ನಡ ಸಮಕಾಲಿಕ ಅನುವಾದ4 ಸೌಲನ ಮಗ ಯೋನಾತಾನನಿಗೆ ಕಾಲು ಕುಂಟಾದ ಒಬ್ಬ ಮಗನಿದ್ದನು. ಸೌಲನೂ, ಯೋನಾತಾನನೂ ಮರಣ ಹೊಂದಿದರೆಂಬ ವರ್ತಮಾನ ಇಜ್ರೆಯೇಲ್ ಎಂಬ ಪಟ್ಟಣದಿಂದ ಬಂದಾಗ, ಅವನು ಐದು ವರ್ಷದವನಾಗಿದ್ದನು. ಆಗ ಅವನ ದಾದಿಯು ಅವನನ್ನು ಎತ್ತಿಕೊಂಡು ಓಡಿ ಹೋದಳು. ಅವಳು ತ್ವರೆಯಾಗಿ ಓಡಿದಾಗ, ಅವನು ಬಿದ್ದು ಕುಂಟನಾದನು. ಅವನ ಹೆಸರು ಮೆಫೀಬೋಶೆತನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾಗಿದ್ದು ಹೇಗೆಂದರೆ, ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ, ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಸೌಲನ ಮಗ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೀಗೆ: ಸೌಲ ಹಾಗು ಯೋನಾತಾನರು ಸತ್ತರೆಂಬ ವರ್ತಮಾನ ಜೆಸ್ರೀಲಿನಿಂದ ಬಂದಾಗ ಐದು ವರ್ಷದವನಾಗಿದ್ದ ಅವನನ್ನು ಅವನ ದಾದಿ ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕಾಲು ಮುರಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಕುಂಟ ಮಗನಿದ್ದನು. ಅವನು ಕುಂಟನಾದದ್ದು ಹೇಗಂದರೆ - ಸೌಲಯೋನಾತಾನರು ಸತ್ತರೆಂಬ ವರ್ತಮಾನವು ಇಜ್ರೇಲಿನಿಂದ ಬಂದಾಗ ಐದು ವರುಷದವನಾಗಿದ್ದ ಅವನನ್ನು ಅವನ ದಾದಿಯು ತೆಗೆದುಕೊಂಡು ಅವಸರದಿಂದ ಓಡಿಹೋಗುವಾಗ ಅವನು ಬಿದ್ದು ಕುಂಟನಾದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಸೌಲನ ಮಗನಾದ ಯೋನಾತಾನನಿಗೆ ಮೆಫೀಬೋಶೆತನೆಂಬ ಒಬ್ಬ ಮಗನಿದ್ದನು. ಸೌಲನು ಮತ್ತು ಯೋನಾತಾನನು ಇಜ್ರೇಲಿನಲ್ಲಿ ಸತ್ತರೆಂಬ ವರ್ತಮಾನವು ಬಂದಾಗ ಯೋನಾತಾನನ ಮಗನಿಗೆ ಐದು ವರ್ಷವಾಗಿತ್ತು. ಅವನನ್ನು ಸಾಕುತ್ತಿದ್ದ ದಾದಿಯು ಭಯಪಟ್ಟು ಅವನನ್ನು ಎತ್ತಿಕೊಂಡು ಓಡತೊಡಗಿದಳು. ಆ ದಾದಿಯು ಅವಸರದಿಂದ ಓಡಿಹೋಗುತ್ತಿದ್ದಾಗ, ಯೋನಾತಾನನ ಮಗನು ಅವಳ ತೋಳುಗಳಿಂದ ಕೆಳಕ್ಕೆ ಬಿದ್ದನು. ಹೀಗೆ ಕೆಳಗೆ ಬಿದ್ದ ಯೋನಾತಾನನ ಮಗನ ಎರಡು ಕಾಲುಗಳು ಕುಂಟಾದವು. ಈ ಮಗನ ಹೆಸರೇ ಮೆಫೀಬೋಶೆತ್. ಅಧ್ಯಾಯವನ್ನು ನೋಡಿ |