2 ಸಮುಯೇಲ 4:5 - ಕನ್ನಡ ಸಮಕಾಲಿಕ ಅನುವಾದ5 ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬನೂ, ಬಾಣನೂ ಹೊರಟು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಈಷ್ಬೋಶೆತನ ಮನೆಗೆ ಬಂದರು. ಅವನು ಮಂಚದ ಮೇಲೆ ಮಲಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬುವರು ಅವನ ಮನೆಯ ಬಳಿಗೆ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್ ಹಾಗು ಬಾಣ ಎಂಬವರು ಅವನ ಮನೆಯ ಬಳಿಗೆಹೋದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಈಷ್ಬೋಶೆತನು ಮಧ್ಯಾಹ್ನದ ಬಿಸಿಲು ಹೊತ್ತಿನಲ್ಲಿ ಮನೆಯೊಳಗೆ ಮಲಗಿರುವಾಗ ಬೇರೋತಿನ ರಿಮ್ಮೋನನ ಮಕ್ಕಳಾದ ರೇಕಾಬ್, ಬಾಣ ಎಂಬವರು ಅವನ ಮನೆಯ ಬಳಿಗೆ ಹೋದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಬೇರೋತಿನ ರಿಮ್ಮೋನನ ಮಕ್ಕಳಾದ ಬಾಣನು ಮತ್ತು ರೇಕಾಬನು ಈಷ್ಬೋಶೆತನ ಮನೆಗೆ ಮಧ್ಯಾಹ್ನದಲ್ಲಿ ಹೋದರು. ಈಷ್ಬೋಶೆತನು ಬಿಸಿಲಿನ ತಾಪದಿಂದ ವಿಶ್ರಾಂತಿ ಪಡೆಯುತ್ತಿದ್ದನು. ಅಧ್ಯಾಯವನ್ನು ನೋಡಿ |
ಯೋವಾಷನು ತೀವ್ರ ಗಾಯಗೊಂಡು ಬಿದ್ದಿರುವಾಗ, ಅರಾಮೀಯರು ಅವನನ್ನು ಬಿಟ್ಟುಹೋದರು. ಅವರು ಹೋದ ತರುವಾಯ ಯಾಜಕನಾದ ಯೆಹೋಯಾದಾವನ ಮಕ್ಕಳ ರಕ್ತಾಪರಾಧದ ನಿಮಿತ್ತವಾಗಿ ಯೋವಾಷನ ಸ್ವಂತ ಸೇವಕರೇ ಅವನಿಗೆ ವಿರೋಧವಾಗಿ ಒಳಸಂಚುಮಾಡಿ, ಅವನ ಮಂಚದ ಮೇಲೆಯೇ ಅವನನ್ನು ಕೊಂದುಹಾಕಿದರು. ಅವರು ಯೋವಾಷನನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು. ಆದರೆ ಅರಸರ ಸಮಾಧಿಯಲ್ಲಿ ಅವನನ್ನು ಸಮಾಧಿಮಾಡಲಿಲ್ಲ.