Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:11 - ಕನ್ನಡ ಸಮಕಾಲಿಕ ಅನುವಾದ

11 ಆಗ ಟೈರಿನ ಅರಸನಾದ ಹೀರಾಮನು ದಾವೀದನ ಬಳಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು, ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ, ದೇವದಾರುಮರಗಳನ್ನೂ, ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ದಾವೀದನಿಗೋಸ್ಕರ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಟೈರಿನ ರಾಜನಾದ ಹೀರಾಮನು ದಾವೀದನಿಗೆ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಹಾಗು ಶಿಲ್ಪಿಗಳನ್ನು ಕಳುಹಿಸಿದನು. ಅವರು ದಾವೀದನಿಗೆ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ತೂರಿನ ಅರಸನಾದ ಹೀರಾಮನು ದಾವೀದನಿಗೆ ದೂತರನ್ನೂ ದೇವದಾರುಮರಗಳನ್ನೂ ಬಡಗಿಯವರನ್ನೂ ಶಿಲ್ಪಿಗಳನ್ನೂ ಕಳುಹಿಸಲು ಅವರು ಇವನಿಗೋಸ್ಕರ ಅರಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ತೂರಿನ ರಾಜನಾದ ಹೀರಾಮನು ದಾವೀದನ ಬಳಿಗೆ ಸಂದೇಶಕರನ್ನು ಕಳುಹಿಸಿದನು. ಹೀರಾಮನು ದೇವದಾರು ಮರಗಳನ್ನು, ಬಡಗಿಗಳನ್ನು ಮತ್ತು ಕಲ್ಲಿನಲ್ಲಿ ಕೆತ್ತನೆ ಮಾಡುವ ಶಿಲ್ಪಿಗಳನ್ನೂ ಸಹ ಕಳುಹಿಸಿದನು. ಅವರು ದಾವೀದನಿಗಾಗಿ ಒಂದು ಮನೆಯನ್ನು ಕಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:11
15 ತಿಳಿವುಗಳ ಹೋಲಿಕೆ  

ಟೈರಿನ ಅರಸನಾದ ಹೀರಾಮನು ದಾವೀದನಿಗೆ ಅರಮನೆಯನ್ನು ಕಟ್ಟುವುದಕ್ಕೋಸ್ಕರ ದೂತರನ್ನು, ದೇವದಾರು ಮರಗಳನ್ನು, ಬಡಗಿಯವರನ್ನು ಮತ್ತು ಕಲ್ಲುಕುಟಿಗರನ್ನು ಕಳುಹಿಸಿದನು.


ಸೊಲೊಮೋನನ ಶಿಲ್ಪಕಾರರೂ, ಹೀರಾಮನ ಶಿಲ್ಪಕಾರರೂ, ಗೆಬಾಲ್ಯರೂ ಅವುಗಳನ್ನು ಕಡಿದು, ಆಲಯವನ್ನು ಕಟ್ಟುವುದಕ್ಕೆ ಕಲ್ಲುಗಳನ್ನೂ, ಮರಗಳನ್ನೂ ಸಿದ್ಧಮಾಡಿದರು.


ಒಂದು ದಿನ ಅರಸನು ಪ್ರವಾದಿಯಾದ ನಾತಾನನಿಗೆ, “ನೋಡು, ನಾನು ದೇವದಾರು ಮರದ ಅರಮನೆಯಲ್ಲಿ ವಾಸವಾಗಿದ್ದೇನೆ. ಆದರೆ ದೇವರ ಮಂಜೂಷವು ಗುಡಾರದಲ್ಲಿರುತ್ತದೆ,” ಎಂದನು.


ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.


ಅವರು ಕಲ್ಲುಕುಟಿಕರಿಗೂ, ಬಡಗಿಯವರಿಗೂ, ಹಣವನ್ನು ಕೊಟ್ಟು ಪಾರಸಿಯ ಅರಸನಾದ ಕೋರೆಷನಿಂದ ಹೊಂದಿದ ಅಪ್ಪಣೆಯ ಪ್ರಕಾರ, ಲೆಬನೋನಿನಿಂದ ಯೊಪ್ಪದ ಸಮುದ್ರದ ಮಟ್ಟಿಗೂ ದೇವದಾರು ಮರಗಳನ್ನು ತೆಗೆದುಕೊಂಡು ಬರಲು ಸೀದೋನ್ಯರಿಗೂ, ಟೈರಿನವರಿಗೂ ಅನ್ನಪಾನಗಳನ್ನೂ, ಎಣ್ಣೆಯನ್ನೂ ಕೊಟ್ಟರು.


ಯೆಹೋವ ದೇವರೇ, ನಿಮ್ಮನ್ನು ಕೊಂಡಾಡುವೆನು; ನೀವು ನನ್ನ ಶತ್ರುಗಳು ನನ್ನ ವಿಷಯದಲ್ಲಿ ಸಂತೋಷಪಡದಂತೆ ಮಾಡಿದ್ದೀರಿ. ನನ್ನನ್ನು ಮೇಲಕ್ಕೆ ಎತ್ತಿದ್ದೀರಿ.


“ಮನುಷ್ಯಪುತ್ರನೇ, ಟೈರ್, ಯೆರೂಸಲೇಮಿನ ವಿಷಯವಾಗಿ, ‘ಆಹಾ, ಜನರ ದ್ವಾರವಾಗಿದ್ದದ್ದು ಮುರಿದುಹೋಯಿತು, ಅದು ನನ್ನ ಕಡೆಗೆ ತೆರೆದುಕೊಂಡಿದೆ. ಯೆರೂಸಲೇಮು ಹಾಳಾದದ್ದರಿಂದ ನಾನು ವೃದ್ಧಿಗೊಳ್ಳುವೆನು,’


ಅಲ್ಲಿಂದ ರಾಮಾ, ಟೈರ್ ಎಂಬ ಕೋಟೆಪಟ್ಟಣದವರೆಗೂ ಹೋಗುತ್ತದೆ. ಅಲ್ಲಿಂದ ಹೋಸಾ ಕಡೆ ಹೊರಟು ಮೆಡಿಟೆರಿಯನ್ ಸಮುದ್ರದ ಬಳಿ ಅಕ್ಜೀಬ್ ಮೇರೆಯ ಅಂಚಿಗೆ ಮುಗಿಯುತ್ತದೆ.


ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ,


ಇದಲ್ಲದೆ ಸೊಲೊಮೋನನಿಗೆ ಹೊರೆ ಹೊರುವವರು ಎಪ್ಪತ್ತು ಸಾವಿರವೂ, ಬೆಟ್ಟಗಳಲ್ಲಿ ಕಲ್ಲುಕುಟಿಗರು ಎಂಬತ್ತು ಸಾವಿರವೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು