Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:13 - ಕನ್ನಡ ಸಮಕಾಲಿಕ ಅನುವಾದ

13 ದಾವೀದನು ಹೆಬ್ರೋನನ್ನು ಬಿಟ್ಟುಹೋದ ತರುವಾಯ, ಯೆರೂಸಲೇಮಿನಲ್ಲಿ ಸಹ ಕೆಲವು ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದ್ದರಿಂದ ಅವನಿಗೆ ಇನ್ನೂ ಹೆಚ್ಚು ಪುತ್ರ, ಪುತ್ರಿಯರು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದಾವೀದನು ಹೆಬ್ರೋನಿನಿಂದ ಯೆರೂಸಲೇಮಿಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಮತ್ತು ಉಪಪತ್ನಿಯರನ್ನಾಗಿಯೂ ಮಾಡಿಕೊಂಡಿದ್ದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡು ಹೆಣ್ಣು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಹೆಬ್ರೋನಿನಿಂದ ಜೆರುಸಲೇಮಿಗೆ ಬಂದ ಮೇಲೆ ದಾವೀದನು ಹೆಚ್ಚುಮಂದಿ ಸ್ತ್ರೀಯರನ್ನು ಪತ್ನಿಯರನ್ನಾಗಿ ಹಾಗು ಉಪಪತ್ನಿಯರನ್ನಾಗಿ ಮಾಡಿಕೊಂಡನು. ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣು ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದಾವೀದನು ಹೆಬ್ರೋನಿನಿಂದ ಯೆರೂಸಲೇವಿುಗೆ ಬಂದ ಮೇಲೆ ಅಲ್ಲಿಯೂ ಅನೇಕ ಸ್ತ್ರೀಯರನ್ನು ಪತ್ನಿಯರನ್ನಾಗಿಯೂ ಉಪಪತ್ನಿಯರನ್ನಾಗಿಯೂ ಮಾಡಿಕೊಂಡದರಿಂದ ಅವನಿಗೆ ಇನ್ನೂ ಕೆಲವು ಮಂದಿ ಗಂಡುಹೆಣ್ಣುಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದಾವೀದನು ಹೆಬ್ರೋನಿನಿಂದ ಜೆರುಸಲೇಮಿಗೆ ಹೋದನು. ದಾವೀದನಿಗೆ ಜೆರುಸಲೇಮಿನಲ್ಲಿ ಅನೇಕ ಪತ್ನಿಯರೂ ಉಪಪತ್ನಿಯರೂ ಇದ್ದರು. ಜೆರುಸಲೇಮಿನಲ್ಲಿ ದಾವೀದನಿಗೆ ಅನೇಕ ಮಕ್ಕಳು ಹುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:13
11 ತಿಳಿವುಗಳ ಹೋಲಿಕೆ  

ಉಪಪತ್ನಿಗಳ ಮಕ್ಕಳು ಹೊರತಾಗಿ ಇವರೆಲ್ಲರು ದಾವೀದನ ಮಕ್ಕಳಾಗಿದ್ದರು; ತಾಮಾರಳು ಇವರ ಸಹೋದರಿಯಾಗಿದ್ದಳು.


ಅರಸನು ದಾರಿತಪ್ಪಿ ಹೋಗದಂತೆ ತನಗೆ ಹೆಚ್ಚು ಜನ ಹೆಂಡತಿಯರನ್ನು ಮದುವೆ ಮಾಡಿಕೊಳ್ಳಬಾರದು. ಅವನು ತನಗಾಗಿ ಹೆಚ್ಚು ಬೆಳ್ಳಿಬಂಗಾರವನ್ನು ಕೂಡಿಸಿಟ್ಟುಕೊಳ್ಳಬಾರದು.


ಅಬೀಯನು ಪ್ರಬಲನಾದನು. ಅವನಿಗೆ ಹದಿನಾಲ್ಕು ಮಂದಿ ಹೆಂಡತಿಯರೂ, ಇಪ್ಪತ್ತೆರಡು ಮಂದಿ ಪುತ್ರರೂ, ಹದಿನಾರು ಮಂದಿ ಪುತ್ರಿಯರೂ ಇದ್ದರು.


ಆಗ ದಾವೀದನು, ತನ್ನನ್ನು ಯೆಹೋವ ದೇವರು ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಸ್ಥಿರಪಡಿಸಿದರೆಂದೂ ತಮ್ಮ ಜನರಾದ ಇಸ್ರಾಯೇಲರ ನಿಮಿತ್ತ ತನ್ನ ರಾಜ್ಯವನ್ನು ಉನ್ನತಕ್ಕೇರಿಸಿದರೆಂದೂ ತಿಳಿದುಕೊಂಡನು.


ಅವನಿಗೆ ರಾಜಪುತ್ರಿಯರಾದ ಏಳು ನೂರು ಮಂದಿ ಪತ್ನಿಯರೂ, ಮುನ್ನೂರು ಮಂದಿ ಉಪಪತ್ನಿಯರೂ ಇದ್ದರು. ಅವನ ಪತ್ನಿಯರು ಅವನನ್ನು ದಾರಿ ತಪ್ಪಿಸಿದರು.


ಇದಲ್ಲದೆ ದಾವೀದನು ಇಜ್ರೆಯೇಲ್ ಊರಿನವಳಾದ ಅಹೀನೋವಮಳನ್ನು ಮದುವೆ ಮಾಡಿಕೊಂಡಿದ್ದನು. ಅವರಿಬ್ಬರೂ ಅವನ ಹೆಂಡತಿಯರಾದರು.


ಐಶ್ವರ್ಯವಂತನಿಗೆ ಕುರಿದನಗಳು ಬಹಳವಾಗಿದ್ದವು.


ಹೆಬ್ರೋನಿನಲ್ಲಿ ದಾವೀದನಿಗೆ ಹುಟ್ಟಿದ ಪುತ್ರರು ಯಾರೆಂದರೆ: ಇಜ್ರೆಯೇಲ್ ಪಟ್ಟಣದ ಅಹೀನೋವಮಳ ಚೊಚ್ಚಲ ಮಗ ಅಮ್ನೋನನು; ಕರ್ಮೇಲ್ಯಳಾದ ಅಬೀಗೈಲಳಿಂದ ಹುಟ್ಟಿದ ಎರಡನೆಯವನಾದ ದಾನಿಯೇಲನು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು