Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:2 - ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವೆ ಎಂದು ಹೇಳಿದರು,’ ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಹಿಂದಿನ ದಿನಗಳಲ್ಲಿ ಅಂದರೆ, ಸೌಲನ ಆಡಳಿತದಲ್ಲಿ, ಇಸ್ರಾಯೇಲರ ದಳಾಧಿಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು, ‘ನೀನು ನನ್ನ ಪ್ರಜೆಗಳಾದ ಇಸ್ರಾಯೇಲರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನೆ’” ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಹಿಂದಿನ ದಿವಸಗಳಲ್ಲಿ, ಅಂದರೆ ಸೌಲನ ಆಳ್ವಿಕೆಯಲ್ಲಿ, ಇಸ್ರಯೇಲರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವರು ನೀವೇ. ನಿಮ್ಮನ್ನು ಕುರಿತು ಸರ್ವೇಶ್ವರಸ್ವಾಮಿ, ‘ನೀನು ನನ್ನ ಪ್ರಜೆಗಳಾದ ಇಸ್ರಯೇಲರ ನಾಯಕನೂ ಪಾಲಕನೂ ಆಗಿರುವೆ,’ ಎಂದು ವಾಗ್ದಾನಮಾಡಿದ್ದಾರೆ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನಾವು ನಿನ್ನ ರಕ್ತಸಂಬಂಧಿಗಳಾಗಿದ್ದೇವೆ; ಹಿಂದಿನ ದಿವಸಗಳಲ್ಲಿ ಅಂದರೆ ಸೌಲನ ಆಳಿಕೆಯಲ್ಲಿ ಇಸ್ರಾಯೇಲ್ಯರ ದಳಪತಿಯಾಗಿ ಹೋಗುತ್ತಾ ಬರುತ್ತಾ ಇದ್ದವನು ನೀನೇ. ನಿನ್ನನ್ನು ಕುರಿತು ಯೆಹೋವನು - ನೀನು ನನ್ನ ಪ್ರಜೆಗಳಾದ ಇಸ್ರಾಯೇಲ್ಯರ ನಾಯಕನೂ ಪಾಲಕನೂ ಆಗಿರುವಿಯೆಂದು ಹೇಳಿದ್ದಾನಷ್ಟೆ ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಹಿಂದಿನ ದಿನಗಳಲ್ಲಿ, ಸೌಲನು ರಾಜನಾಗಿದ್ದಾಗಲೂ ನಮ್ಮನ್ನು ಯುದ್ಧದಲ್ಲಿ ಮುನ್ನಡೆಸಿದವನು ನೀನೇ. ಯೆಹೋವನು ನಿನ್ನನ್ನು ಕುರಿತು, ‘ನೀನು ನನ್ನ ಜನರಾದ ಇಸ್ರೇಲರ ನಾಯಕನೂ ಪಾಲಕನೂ ಆಗಿರುವೆ’ ಎಂದು ಹೇಳಿದ್ದಾನೆ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:2
27 ತಿಳಿವುಗಳ ಹೋಲಿಕೆ  

“ ‘ಯೆಹೂದ ಪ್ರಾಂತದಲ್ಲಿರುವ ಬೇತ್ಲೆಹೇಮೇ, ಯೆಹೂದದ ಅಧಿಪತಿಗಳಲ್ಲಿ ನೀನು ಎಷ್ಟು ಮಾತ್ರಕ್ಕೂ ಅಲ್ಪವಲ್ಲ. ಏಕೆಂದರೆ ನನ್ನ ಪ್ರಜೆಗಳಾದ ಇಸ್ರಾಯೇಲನ್ನು ಪರಿಪಾಲಿಸಲು ಒಬ್ಬ ಅಧಿಪತಿಯು ನಿನ್ನೊಳಗಿಂದಲೇ ಬರುವನು,’” ಎಂದು ಹೇಳಿದರು.


ಆತನು ಯೆಹೋವ ದೇವರ ಬಲದಲ್ಲಿಯೂ ತನ್ನ ದೇವರಾದ ಯೆಹೋವ ದೇವರ ಹೆಸರಿನ ಘನತೆಯಲ್ಲಿಯೂ ನಿಂತುಕೊಂಡು ತನ್ನ ಮಂದೆಯನ್ನು ಮೇಯಿಸುವನು. ಅವರು ನೆಲೆಯಾಗಿರುವರು, ಆತನ ಘನತೆಯು ಭೂಮಿಯ ಅಂತ್ಯಗಳ ಮಟ್ಟಿಗೂ ತಲುಪುವುದು.


ನಾನು ಅವುಗಳ ಮೇಲೆ ಒಬ್ಬ ಕುರುಬನನ್ನು ನೇಮಿಸುವೆನು; ಅವನು ಅವುಗಳನ್ನು ಮೇಯಿಸುತ್ತಾನೆ. ನನ್ನ ಸೇವಕನಾದ ದಾವೀದನೇ ಅವುಗಳನ್ನು ಮೇಯಿಸಿ ಅವುಗಳಿಗೆ ಕುರುಬನಾಗುತ್ತಾನೆ.


“ನಾನೇ ಒಳ್ಳೆಯ ಕುರುಬನು. ಒಳ್ಳೆಯ ಕುರುಬನು ಕುರಿಗಳಿಗೋಸ್ಕರ ತನ್ನ ಪ್ರಾಣವನ್ನು ಕೊಡುತ್ತಾನೆ.


ನಾನು ನನ್ನ ಜನರಾದ ಇಸ್ರಾಯೇಲರನ್ನು ಪರಿಪಾಲಿಸಲು ಆಜ್ಞಾಪಿಸಿದ ಇಸ್ರಾಯೇಲಿನ ಅಧಿಪತಿಗಳಲ್ಲಿ ಒಬ್ಬನ ಜೊತೆಯಾದರೂ, “ನೀವು ನನಗೆ ದೇವದಾರು ಮನೆಯನ್ನು ಏಕೆ ಕಟ್ಟಲಿಲ್ಲ,” ಎಂದು, ನಾನು ಸಮಸ್ತ ಇಸ್ರಾಯೇಲಿನ ಸಂಗಡ ಸಂಚರಿಸಿದ ಯಾವ ಸ್ಥಳದಲ್ಲಾದರೂ, ಯಾವಾಗಲಾದರೂ ಕೇಳಿದೆನೋ?’


ಅವರು ತಮ್ಮ ಮಂದೆಯನ್ನು ಕುರುಬನಂತೆ ಮೇಯಿಸುವರು. ಕುರಿಮರಿಗಳನ್ನು ಕೂಡಿಸಿ, ಅವುಗಳನ್ನು ತಮ್ಮ ಎದೆಗಪ್ಪಿಕೊಳ್ಳುವರು, ಎಳೆಯ ಮರಿಗಳನ್ನು ಮೆಲ್ಲಗೆ ನಡಿಸುವರು.


ಇದಲ್ಲದೆ ನನ್ನ ಒಡೆಯನಾದ ನಿನ್ನನ್ನು ಕುರಿತು ಯೆಹೋವ ದೇವರು ಹೇಳಿದ ಒಳ್ಳೆಯದೆಲ್ಲವನ್ನು ನಿನಗೆ ಮಾಡಿ, ನಿನ್ನನ್ನು ಇಸ್ರಾಯೇಲರ ಮೇಲೆ ನಾಯಕನಾಗಿ ನೇಮಿಸಿದಾಗ,


ನಾನು ಅವನನ್ನು ಜನರಿಗೆ ಸಾಕ್ಷಿಯನ್ನಾಗಿಯೂ, ಜನರಿಗೆ ನಾಯಕನನ್ನಾಗಿಯೂ, ಅಧಿಪತಿಯನ್ನಾಗಿಯೂ ಕೊಟ್ಟೆನು.


ಆದ್ದರಿಂದ ಸೌಲನು ಅವನನ್ನು ತನ್ನ ಬಳಿಯಿಂದ ಹೊರಡಿಸಿಬಿಟ್ಟು, ಸಾವಿರ ಜನರಿಗೆ ಪ್ರಧಾನನ್ನಾಗಿ ಮಾಡಿದನು. ಹಾಗೆಯೇ ಅವನು ದಳಪತಿಯಾಗಿ ಸೈನಿಕರನ್ನು ಕರೆದುಕೊಂಡು ಯುದ್ಧಕ್ಕೆ ಹೋಗುತ್ತಾ ಬರುತ್ತಾ ಇದ್ದನು.


ಯೆಹೋವ ದೇವರು ಸಮುಯೇಲನಿಗೆ, “ಇಸ್ರಾಯೇಲಿನ ಅರಸನಾಗಿರದ ಹಾಗೆ ನಾನು ಅಲಕ್ಷ್ಯಮಾಡಿದ ಸೌಲನಿಗೋಸ್ಕರ ನೀನು ಎಷ್ಟರವರೆಗೆ ದುಃಖವುಳ್ಳವನಾಗಿರುವೆ? ನೀನು ನಿನ್ನ ಕೊಂಬನ್ನು ತೈಲದಿಂದ ತುಂಬಿಸಿಕೊಂಡು ಬಾ. ಬೇತ್ಲೆಹೇಮಿನವನಾದ ಇಷಯನ ಬಳಿಗೆ ನಿನ್ನನ್ನು ಕಳುಹಿಸುವೆನು. ಏಕೆಂದರೆ ಅವನ ಮಕ್ಕಳಲ್ಲಿ ನಾನು ಒಬ್ಬನನ್ನು ಅರಸನಾಗಿ ಆಯ್ದುಕೊಂಡೆನು,” ಎಂದರು.


ದೇವರು ಸಮಸ್ತವನ್ನೂ ತಮಗೋಸ್ಕರವೂ ತಮ್ಮ ಮೂಲಕವೂ ಉಂಟುಮಾಡಿ ಬಹುಮಂದಿ ಮಕ್ಕಳನ್ನು ಮಹಿಮೆಗೆ ತರುವಂತೆ ಅವರ ರಕ್ಷಣಾ ನಾಯಕರಾದ ಕ್ರಿಸ್ತ ಯೇಸುವನ್ನು ಬಾಧೆಗಳ ಮೂಲಕ ಸಿದ್ಧಿಗೆ ತರುವುದು ದೇವರಿಗೆ ಯುಕ್ತವಾಗಿತ್ತು.


ಆದರೆ ಇಸ್ರಾಯೇಲ್ ಜನರೂ ಯೆಹೂದ ಜನರೂ ದಾವೀದನು ತಮ್ಮ ಮುಂದೆ ಹೊರಟು ಹೋಗುತ್ತಾ ಬರುತ್ತಾ ಇರುವುದರಿಂದ ಅವನನ್ನು ಪ್ರೀತಿ ಮಾಡಿದರು.


ಸೌಲನು ದಾವೀದನನ್ನು ಎಲ್ಲಿಗೆ ಕಳುಹಿಸಿದರೂ, ಅಲ್ಲಿಗೆ ಹೋಗಿ ಅವನು ಎಲ್ಲವನ್ನು ವಿವೇಕದಿಂದ ಬಹು ಯಶಸ್ವಿಯಾಗಿ ಮಾಡುತ್ತಿದ್ದನು. ಆದ್ದರಿಂದ ಸೌಲನು ಅವನನ್ನು ಸೈನ್ಯದ ಮೇಲೆ ಅಧಿಕಾರಿಯಾಗಿ ನೇಮಿಸಿದನು. ಇದು ಸಮಸ್ತ ಜನರಿಗೂ, ಸೌಲನ ಸಮಸ್ತ ಸೇವಕರಿಗೂ ಮೆಚ್ಚಿಕೆಯಾಗಿತ್ತು.


ಅವನು ಅವರ ಮುಂದಾಗಿ ಹೋಗಲಿ, ಅವರ ಮುಂದಾಗಿ ಬರಲಿ. ಅವರನ್ನು ಕರೆದುಕೊಂಡು ಹೋಗಲಿ, ಕರೆದುಕೊಂಡು ಬರಲಿ. ಯೆಹೋವ ದೇವರ ಈ ಜನಸಮೂಹವು ಕುರುಬನಿಲ್ಲದ ಕುರಿಗಳ ಹಾಗೆ ಇರಬಾರದು,” ಎಂದನು.


“ನೀನು ದಯಮಾಡಿ ನಿನ್ನ ದಾಸಿಯ ತಪ್ಪನ್ನು ಮನ್ನಿಸಬೇಕು. ಏಕೆಂದರೆ ನನ್ನ ಒಡೆಯನು ಯೆಹೋವ ದೇವರ ಯುದ್ಧಗಳನ್ನು ನಡೆಸುತ್ತಾನೆ. ಆದ್ದರಿಂದ ನಿನ್ನ ಜೀವಮಾನದಲ್ಲೆಲ್ಲಾ ನಿನ್ನಲ್ಲಿ ಕೆಟ್ಟತನ ಕಾಣದಿರಲಿ. ಯೆಹೋವ ದೇವರು ನಿಶ್ಚಯವಾಗಿ ನನ್ನ ಒಡೆಯನಾದ ನಿನಗೆ ಶಾಶ್ವತ ರಾಜ್ಯವನ್ನು ಸ್ಥಿರಪಡಿಸುವರು.


ಆದರೆ ಈಗ ನಿನ್ನ ರಾಜ್ಯವು ನಿಲ್ಲಲಾರದು. ಯೆಹೋವ ದೇವರು ನಿನಗೆ ಆಜ್ಞಾಪಿಸಿದ್ದನ್ನು ನೀನು ಕೈಗೊಳ್ಳದೆ ಹೋದದ್ದರಿಂದ, ಅವರು ತಮ್ಮ ಹೃದಯಕ್ಕೆ ತಕ್ಕಂಥ ಒಬ್ಬ ಮನುಷ್ಯನನ್ನು ಹುಡುಕಿ, ಅವನನ್ನು ತಮ್ಮ ಜನರ ಮೇಲೆ ನಾಯಕನನ್ನಾಗಿ ನೇಮಿಸಿದ್ದಾರೆ,” ಎಂದನು.


“ನಾಳೆ ಇಷ್ಟು ಹೊತ್ತಿಗೆ ಬೆನ್ಯಾಮೀನನ ದೇಶದವನಾದ ಒಬ್ಬ ಮನುಷ್ಯನನ್ನು ನಿನ್ನ ಬಳಿಗೆ ಕಳುಹಿಸುವೆನು. ನೀನು ಅವನನ್ನು ನನ್ನ ಜನರಾದ ಇಸ್ರಾಯೇಲಿನ ಮೇಲೆ ನಾಯಕನಾಗಿರಲು ಅಭಿಷೇಕಿಸಬೇಕು. ಅವನು ನನ್ನ ಜನರನ್ನು ಫಿಲಿಷ್ಟಿಯರ ಕೈಯಿಂದ ತಪ್ಪಿಸಿ ರಕ್ಷಿಸುವನು. ಏಕೆಂದರೆ ನನ್ನ ಜನರ ಕೂಗು ನನ್ನ ಬಳಿಗೆ ಬಂದು ಮುಟ್ಟಿತು,” ಎಂಬುದೆ.


ದೇವರು ಅವನಿಗೆ, “ನೀನು ಹಿಂದಿರುಗಿ ಹೋಗಿ ನನ್ನ ಜನರ ನಾಯಕನಾದ ಹಿಜ್ಕೀಯನಿಗೆ, ‘ನಿನ್ನ ತಂದೆಯಾದ ದಾವೀದನ ದೇವರಾದ ಯೆಹೋವ ದೇವರು ಹೇಳಿದ್ದೇನೆಂದರೆ: ನಾನು ನಿನ್ನ ಪ್ರಾರ್ಥನೆಯನ್ನು ಕೇಳಿದ್ದೇನೆ, ನಿನ್ನ ಕಣ್ಣೀರನ್ನೂ ಕಂಡಿದ್ದೇನೆ. ನಾನು ನಿನ್ನನ್ನು ಸ್ವಸ್ಥಮಾಡುತ್ತೇನೆ. ಮೂರನೆಯ ದಿವಸದಲ್ಲಿ ಯೆಹೋವ ದೇವರ ಆಲಯಕ್ಕೆ ಹೋಗುವೆ.


ಆದರೆ ಅವನ ಬಿಲ್ಲು ಸ್ಥಿರವಾಗಿ ನಿಲ್ಲುವುದು. ಅವನ ಬಲವಾದ ತೋಳುಗಳು ಚುರುಕಾಗಿ ನಿಂತವು. ಇದಕ್ಕೆ ಕಾರಣ ಯಾಕೋಬನಿಗೆ ಸರ್ವಶಕ್ತರಾಗಿರುವ ದೇವರ ಹಸ್ತವೇ; ಇದಕ್ಕೆ ಕಾರಣ ಇಸ್ರಾಯೇಲನ ಬಂಡೆಯಾಗಿರುವ ಕುರುಬ.


ಇದಲ್ಲದೆ ಪೂರ್ವದಲ್ಲಿ ಸೌಲನು ನಮ್ಮ ಮೇಲೆ ಅರಸನಾಗಿದ್ದಾಗ, ನೀನು ದಳಪತಿಯಾಗಿ ಇಸ್ರಾಯೇಲನ್ನು ಹೊರಗೆ ನಡೆಸುವವನಾಗಿಯೂ, ಒಳಗೆ ತರುವವನಾಗಿಯೂ ಇದ್ದವನು. ಆದ್ದರಿಂದ ನಿನ್ನ ದೇವರಾದ ಯೆಹೋವ ದೇವರು ನಿನಗೆ, ‘ನೀನು ನನ್ನ ಜನರಾದ ಇಸ್ರಾಯೇಲರ ನಾಯಕನೂ, ಪಾಲಕನೂ ಆಗಿರುವೆ,’ ಎಂದು ವಾಗ್ದಾನ ಮಾಡಿದ್ದು ನಿಮ್ಮನ್ನು ಕುರಿತೇ,” ಎಂದು ಹೇಳಿ ವಂದಿಸಿದರು.


ನಾನು ಈ ಜನರನ್ನು ಪರಿಪಾಲಿಸುವುದಕ್ಕೆ ಜ್ಞಾನವನ್ನೂ, ತಿಳುವಳಿಕೆಯನ್ನೂ ಕೊಡಿರಿ. ಏಕೆಂದರೆ ಈ ನಿಮ್ಮ ಮಹಾಜನರ ನ್ಯಾಯತೀರಿಸುವುದಕ್ಕೆ ಸಾಮರ್ಥ್ಯವುಳ್ಳವರು ಯಾರು?” ಎಂದನು.


ಆದರೆ ದಾವೀದನು ಮೀಕಲಳಿಗೆ, “ನಾನು ಕುಣಿದದ್ದು ಯೆಹೋವ ದೇವರ ಸನ್ನಿಧಿಯಲ್ಲಿ ಮಾತ್ರ; ನಿನ್ನ ತಂದೆಯನ್ನೂ ಅವನ ಮನೆಯವರೆಲ್ಲರನ್ನೂ ಬಿಟ್ಟುಬಿಟ್ಟು, ನನ್ನನ್ನೇ ಆರಿಸಿಕೊಂಡು, ತಮ್ಮ ಪ್ರಜೆಗಳಾದ ಇಸ್ರಾಯೇಲರ ಅರಸನನ್ನಾಗಿ ಮಾಡಿದ ಆ ಯೆಹೋವ ದೇವರ ಮುಂದೆ ಇನ್ನೂ ಹೆಚ್ಚಾಗಿ ಕುಣಿದಾಡುವೆನು.


“ಈಗ ನೀನು ನನ್ನ ಸೇವಕನಾದ ದಾವೀದನಿಗೆ ಹೇಳಬೇಕಾದದ್ದೇನೆಂದರೆ, ‘ಸೇನಾಧೀಶ್ವರ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ: ಕುರಿಗಳ ಹಿಂದೆ ಹೋಗುತ್ತಿದ್ದ ನಿನ್ನನ್ನು ನಾನು ಕುರಿಯ ಹಟ್ಟಿಯಿಂದ ತೆಗೆದುಕೊಂಡು, ನನ್ನ ಜನರಾದ ಇಸ್ರಾಯೇಲರ ಮೇಲೆ ನಾಯಕನಾಗಿರುವಂತೆ ನೇಮಿಸಿದೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು