2 ಸಮುಯೇಲ 5:24 - ಕನ್ನಡ ಸಮಕಾಲಿಕ ಅನುವಾದ24 ಬಾಕಾಮರಗಳ ತುದಿಗಳಲ್ಲಿ ನಡೆದುಬರುವ ಶಬ್ದವನ್ನು ನೀನು ಕೇಳಿದಾಗಲೇ, ಯೆಹೋವ ದೇವರು ಫಿಲಿಷ್ಟಿಯರ ದಂಡನ್ನು ಹೊಡೆಯಲು ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಆ ಬಾಕಾ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದು ಅವರ ಮೇಲೆ ದಾಳಿಮಾಡು” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಸರ್ವೇಶ್ವರ, ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವುದಕ್ಕಾಗಿ ನಿನ್ನ ಮುಂದಾಗಿ ಹೊರಟರೆಂದು ತಿಳಿದುಕೊಂಡು ಅವರ ಮೇಲೆ ದಾಳಿಮಾಡು,” ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ಆ ಮರಗಳ ತುದಿಯಲ್ಲಿ ಹೆಜ್ಜೆಗಳ ಸಪ್ಪಳ ಕೇಳಿಸುವಾಗ ಯೆಹೋವನು ಫಿಲಿಷ್ಟಿಯರ ಸೈನ್ಯವನ್ನು ಸೋಲಿಸುವದಕ್ಕೋಸ್ಕರ ನಿನ್ನ ಮುಂದಾಗಿ ಹೊರಟನೆಂದು ತಿಳಿದುಕೊಂಡು ಅವರ ಮೇಲೆ ಬೀಳು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಮರಗಳ ತುದಿಯಲ್ಲಿರುವ ನಿಮಗೆ ಫಿಲಿಷ್ಟಿಯರು ಯುದ್ಧಕ್ಕೆ ಹೊರಡುವುದು ಕೇಳಿಸುತ್ತದೆ. ಆಗ ನೀನು ತ್ವರಿತಗತಿಯಿಂದ ಕಾರ್ಯನಿರತನಾಗು. ಆಗ ಯೆಹೋವನಾದ ನಾನು ನಿನಗಾಗಿ ಅದೇ ಸಮಯದಲ್ಲಿ ಫಿಲಿಷ್ಟಿಯರನ್ನು ಸೋಲಿಸಲು ನಿಮ್ಮ ಮುಂದೆ ನಾನು ಹೋಗುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿ |