Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 5:3 - ಕನ್ನಡ ಸಮಕಾಲಿಕ ಅನುವಾದ

3 ಹಾಗೆಯೇ ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲರ ಹಿರಿಯರೆಲ್ಲರೊಡನೆ ಅಲ್ಲಿಯೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆ ಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ, ಇಸ್ರಾಯೇಲರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಹೆಬ್ರೋನಿನಲ್ಲಿದ್ದ ಅರಸ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಯೇಲರ ಹಿರಿಯರೊಡನೆ ಅಲ್ಲೇ ಸರ್ವೇಶ್ವರನ ಸನ್ನಿಧಿಯಲ್ಲಿ ಒಪ್ಪಂದಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಯೇಲರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಹೆಬ್ರೋನಿನಲ್ಲಿದ್ದ ಅರಸನಾದ ದಾವೀದನು ತನ್ನ ಬಳಿಗೆ ಬಂದಿದ್ದ ಇಸ್ರಾಯೇಲ್ಯರ ಹಿರಿಯರೆಲ್ಲರೊಡನೆ ಅಲ್ಲೇ ಯೆಹೋವನ ಸನ್ನಿಧಿಯಲ್ಲಿ ಒಡಂಬಡಿಕೆಮಾಡಿಕೊಂಡನು. ಅವರು ದಾವೀದನನ್ನು ಅಭಿಷೇಕಿಸಿ ಇಸ್ರಾಯೇಲ್ಯರ ಅರಸನನ್ನಾಗಿ ಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ರಾಜನಾದ ದಾವೀದನಿದ್ದ ಹೆಬ್ರೋನಿಗೆ ಇಸ್ರೇಲಿನ ಎಲ್ಲಾ ನಾಯಕರೂ ಬಂದರು. ಹೆಬ್ರೋನಿನಲ್ಲಿ ರಾಜನಾದ ದಾವೀದನು ಯೆಹೋವನ ಸನ್ನಿಧಿಯಲ್ಲಿ ಈ ನಾಯಕರೊಂದಿಗೆ ಒಂದು ಒಪ್ಪಂದವನ್ನು ಮಾಡಿಕೊಂಡನು. ಆಗ ನಾಯಕರು ದಾವೀದನನ್ನು ಇಸ್ರೇಲಿನ ರಾಜನನ್ನಾಗಿ ಅಭಿಷೇಕಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 5:3
16 ತಿಳಿವುಗಳ ಹೋಲಿಕೆ  

ಆಗ ಯೆಹೂದನ ಮನುಷ್ಯರು ಹೆಬ್ರೋನಿಗೆ ಬಂದು ಅಲ್ಲಿ ದಾವೀದನನ್ನು ಯೆಹೂದದವರ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿಸಿದರು. ಯಾಬೇಷ್ ಗಿಲ್ಯಾದಿನವರು ಸೌಲನನ್ನು ಸಮಾಧಿಮಾಡಿದರೆಂದು ದಾವೀದನಿಗೆ ತಿಳಿಸಿದಾಗ,


ಅವರಿಬ್ಬರೂ ಯೆಹೋವ ದೇವರ ಮುಂದೆ ಒಡಂಬಡಿಕೆಯನ್ನು ಮಾಡಿಕೊಂಡರು. ದಾವೀದನು ಹೋರೆಷದಲ್ಲಿಯೇ ಉಳಿದನು. ಆದರೆ ಯೋನಾತಾನನು ತನ್ನ ಮನೆಗೆ ಹೋದನು.


ಸಮುಯೇಲನು ಎಣ್ಣೆ ಇರುವ ಕೊಂಬನ್ನು ತೆಗೆದುಕೊಂಡು, ಅವನನ್ನು ಅವನ ಸಹೋದರರ ಮಧ್ಯದಲ್ಲಿ ಅಭಿಷೇಕ ಮಾಡಿದನು. ಆ ದಿವಸದಲ್ಲೇ ಯೆಹೋವ ದೇವರ ಆತ್ಮರು ಕೂಡಲೆ ದಾವೀದನ ಮೇಲೆ ಇಳಿದು ಬಂದರು. ಅನಂತರ ಸಮುಯೇಲನು ಎದ್ದು ರಾಮಕ್ಕೆ ಹೋದನು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ಯೆಹೋವ ದೇವರಿಗೂ, ಅರಸನಿಗೂ, ಜನರಿಗೂ ಮಧ್ಯೆ ಒಡಂಬಡಿಕೆ ಮಾಡಿದನು. ಹಾಗೆಯೇ ಅರಸನಿಗೂ, ಜನರಿಗೂ ಮಧ್ಯದಲ್ಲಿ ಒಡಂಬಡಿಕೆ ಮಾಡಿಸಿದನು.


ಆಗ ಅಬ್ನೇರನು ದಾವೀದನಿಗೆ, “ಸಮಸ್ತ ಇಸ್ರಾಯೇಲರು ನಿನ್ನ ಸಂಗಡ ಒಡಂಬಡಿಕೆಯನ್ನು ಮಾಡುವ ಹಾಗೆಯೂ, ನಿನ್ನ ಪ್ರಾಣವು ಇಚ್ಛೈಸುವ ಹಾಗೆ ಎಲ್ಲರ ಮೇಲೆ ಆಳುವ ಹಾಗೆಯೂ ನಾನು ಎದ್ದು ಹೋಗಿ, ಸಮಸ್ತ ಇಸ್ರಾಯೇಲರನ್ನು ಅರಸನಾದ ನನ್ನ ಒಡೆಯನ ಬಳಿಗೆ ಕೂಡಿಸಿಕೊಂಡು ಬರುವೆನು,” ಎಂದನು. ದಾವೀದನು ಅಬ್ನೇರನಿಗೆ ಅಪ್ಪಣೆ ಕೊಟ್ಟದ್ದರಿಂದ ಅವನು ಸಮಾಧಾನವಾಗಿ ಹೋದನು.


ಹಾಗೆಯೇ ಯೆಫ್ತಾಹನು ಗಿಲ್ಯಾದಿನ ಹಿರಿಯರ ಸಂಗಡ ಹೋದನು. ಆಗ ಜನರು ಅವನನ್ನು ತಮ್ಮ ಮೇಲೆ ನಾಯಕನನ್ನಾಗಿಯೂ, ಸೈನ್ಯಾಧಿಪತಿಯಾಗಿಯೂ ಇಟ್ಟುಕೊಂಡರು. ಯೆಫ್ತಾಹನು ತನ್ನ ಮಾತುಗಳನ್ನೆಲ್ಲಾ ಮಿಚ್ಪೆಯಲ್ಲಿ ಯೆಹೋವ ದೇವರ ಮುಂದೆ ಹೇಳಿದನು.


“ಇದೆಲ್ಲದರ ನಿಮಿತ್ತ ನಾವು ಒಡಂಬಡಿಕೆಯನ್ನು ಸ್ಥಿರಮಾಡಿ ಬರೆಯುತ್ತೇವೆ. ನಮ್ಮ ಪ್ರಧಾನರೂ, ಲೇವಿಯರೂ, ಯಾಜಕರೂ ಅದಕ್ಕೆ ಮುದ್ರೆ ಹಾಕುತ್ತಾರೆ,” ಎಂದು ಪ್ರಾರ್ಥಿಸಿದರು.


ಅನಂತರ ಯೆಹೋವ ದೇವರ ಜನರಾಗಿರುವಂತೆ ಯೆಹೋಯಾದಾವನು ತನಗೂ, ಸಮಸ್ತ ಜನರಿಗೂ, ಅರಸನಿಗೂ ಒಡಂಬಡಿಕೆ ಮಾಡಿಸಿದನು.


ಇಸ್ರಾಯೇಲಿನ ಹಿರಿಯರೆಲ್ಲರು ಹೆಬ್ರೋನಿನಲ್ಲಿದ್ದ ಅರಸನ ಬಳಿಗೆ ಬಂದಾಗ, ಅರಸನಾದ ದಾವೀದನು ಹೆಬ್ರೋನಿನಲ್ಲಿ ಯೆಹೋವ ದೇವರ ಮುಂದೆ ಅವರ ಸಂಗಡ ಒಡಂಬಡಿಕೆ ಮಾಡಿದನು. ಯೆಹೋವ ದೇವರು ಸಮುಯೇಲನ ಮುಖಾಂತರ ಹೇಳಿದ ವಾಕ್ಯದ ಪ್ರಕಾರ ಅವರು ದಾವೀದನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕ ಮಾಡಿದರು.


ಹಾಗೆಯೇ ಜನರೆಲ್ಲರು ಗಿಲ್ಗಾಲಿಗೆ ಹೋಗಿ, ಆ ಸ್ಥಳದಲ್ಲಿ ಯೆಹೋವ ದೇವರ ಮುಂದೆ ಸೌಲನನ್ನು ಅರಸನನ್ನಾಗಿ ಮಾಡಿ, ಯೆಹೋವ ದೇವರಿಗೆ ಸಮಾಧಾನದ ಬಲಿಗಳನ್ನು ಅರ್ಪಿಸಿದರು. ಅಲ್ಲಿ ಸೌಲನೂ ಸಮಸ್ತ ಇಸ್ರಾಯೇಲರೂ ಬಹಳವಾಗಿ ಸಂತೋಷಪಟ್ಟರು.


“ನೀನು ಹೋಗಿ ಇಸ್ರಾಯೇಲ್ ಹಿರಿಯರನ್ನು ಕೂಡಿಸಿ ಅವರಿಗೆ, ‘ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಯೆಹೋವ ದೇವರು ನನಗೆ ಕಾಣಿಸಿಕೊಂಡು ಹೀಗೆಂದಿದ್ದಾರೆ: ನಾನು ನಿಮ್ಮನ್ನೂ ಈಜಿಪ್ಟಿನಲ್ಲಿ ನಿಮಗೆ ಸಂಭವಿಸಿದ್ದನ್ನೆಲ್ಲವನ್ನೂ ನಿಶ್ಚಯವಾಗಿ ನೋಡಿದ್ದೇನೆ.


ಅನಂತರ ಯೆಹೋಶುವನು ಸಮಸ್ತ ಇಸ್ರಾಯೇಲರ ಸಂಗಡ ಎಗ್ಲೋನಿನಿಂದ ಹೆಬ್ರೋನಿಗೆ ಹೊರಟುಹೋಗಿ, ಅದರ ಮೇಲೆ ಯುದ್ಧಮಾಡಿದನು.


ಅಲ್ಲಿ ಯಾಜಕನಾದ ಚಾದೋಕನೂ, ಪ್ರವಾದಿಯಾದ ನಾತಾನನೂ ಅವನನ್ನು ಇಸ್ರಾಯೇಲಿನ ಮೇಲೆ ಅರಸನಾಗಿರಲು ಅಭಿಷೇಕಿಸಲಿ. ತುತೂರಿಯನ್ನು ಊದಿ, ‘ಅರಸ ಸೊಲೊಮೋನನು ಚಿರಂಜೀವಿಯಾಗಿರಲಿ!’ ಎಂದು ಘೋಷಿಸಿರಿ.


ಇಸ್ರಾಯೇಲರೆಲ್ಲರು ಹೆಬ್ರೋನಿನಲ್ಲಿರುವ ದಾವೀದನ ಬಳಿಗೆ ಬಂದು, “ಇಗೋ, ನಾವು ನಿನ್ನ ಎಲುಬೂ, ನಿನ್ನ ಮಾಂಸವೂ ಆಗಿದ್ದೇವೆ.


ನೀವು ಪರಾಕ್ರಮಶಾಲಿಗಳಾಗಿದ್ದು, ನಿಮ್ಮ ಕೈಗಳು ಬಲವಾಗಿರಲಿ. ಏಕೆಂದರೆ ನಿಮ್ಮ ಯಜಮಾನನಾದ ಸೌಲನು ಮರಣಹೊಂದಿದನು. ಯೆಹೂದನ ಮನೆಯವರು ನನ್ನನ್ನು ತಮ್ಮ ಮೇಲೆ ಅರಸನನ್ನಾಗಿ ಅಭಿಷೇಕ ಮಾಡಿದರು,” ಎಂದನು.


“ಆದರೆ ಇಸ್ರಾಯೇಲಿನ ದೇವರಾದ ಯೆಹೋವ ದೇವರು ಎಂದೆಂದಿಗೂ ಇಸ್ರಾಯೇಲಿನ ಮೇಲೆ ಅರಸನಾಗಿರಲು ನನ್ನ ತಂದೆಯ ಮನೆಯ ಸಮಸ್ತರೊಳಗಿಂದ ನನ್ನನ್ನು ಆರಿಸಿಕೊಂಡರು. ಏಕೆಂದರೆ ಅವನು ನಾಯಕನಾಗಿರಲು ಯೆಹೂದ ಗೋತ್ರವನ್ನೂ, ಯೆಹೂದ ಗೋತ್ರದಿಂದ ನನ್ನ ಕುಟುಂಬವನ್ನೂ ಆದುಕೊಂಡು, ನನ್ನ ತಂದೆಯ ಪುತ್ರರಲ್ಲಿ ನನ್ನನ್ನು ಇಸ್ರಾಯೇಲಿನ ಮೇಲೆ ಅರಸನಾಗಿ ಮಾಡಲು ಚಿತ್ತವುಳ್ಳವರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು