Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 6:10 - ಕನ್ನಡ ಸಮಕಾಲಿಕ ಅನುವಾದ

10 ದಾವೀದನು ಯೆಹೋವ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ತರಲು ಮನಸ್ಸಿಲ್ಲದೆ, ಗಿತ್ತೀಯನಾದ ಓಬೇದ್ ಏದೋಮನ ಮನೆಗೆ ತೆಗೆದುಕೊಂಡು ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಅದನ್ನು ದಾವೀದನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅದನ್ನು ದಾವೀದ ನಗರಕ್ಕೆ ತರಲೊಲ್ಲದೆ ಗತ್ ಊರಿನ ಓಬೇದೆದೋಮನ ಮನೆಗೆ ಕಳುಹಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನ ಪವಿತ್ರ ಪೆಟ್ಟಿಗೆಯನ್ನು ದಾವೀದ ನಗರದೊಳಕ್ಕೆ ತರಲಿಲ್ಲ. ದಾವೀದನು ಪವಿತ್ರ ಪೆಟ್ಟಿಗೆಯನ್ನು ಗತ್‌ನ ಓಬೇದೆದೋಮನ ಮನೆಯಲ್ಲಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 6:10
11 ತಿಳಿವುಗಳ ಹೋಲಿಕೆ  

ಅವರು ಯಾರೆಂದರೆ: ಮುಖ್ಯಸ್ಥನಾದ ಆಸಾಫನೂ, ಅವನ ತರುವಾಯ ಜೆಕರ್ಯನೂ, ಯೆಜೀಯೇಲನೂ, ಶೆಮೀರಾಮೋತನೂ, ಯೆಹೀಯೇಲನೂ, ಮತ್ತಿತ್ಯನೂ, ಎಲೀಯಾಬನೂ, ಬೆನಾಯನೂ, ಓಬೇದ್ ಏದೋಮನೂ, ಯೆಹಿಯೇಲನೂ ಇವರು ವೀಣೆಗಳನ್ನೂ, ಕಿನ್ನರಿಗಳನ್ನೂ ಬಾರಿಸುತ್ತಿದ್ದರು. ಆದರೆ ಆಸಾಫನು ತಾಳಗಳನ್ನು ಬಾರಿಸುತ್ತಿದ್ದನು.


ಅವರ ಸಂಗಡ ಎರಡನೆಯ ದರ್ಜೆಯವರಾದ ತಮ್ಮ ಸಹೋದರರಾಗಿರುವ ಜೆಕರ್ಯನನ್ನೂ ಬೇನನನ್ನೂ ಯಾಜೀಯೇಲನನ್ನೂ, ಶೆಮೀರಾಮೋತನನ್ನೂ ಯೆಹೀಯೇಲನನ್ನೂ, ಉನ್ನೀಯನ್ನೂ, ಎಲೀಯಾಬನನ್ನೂ, ಬೆನಾಯನನ್ನೂ, ಮಾಸೇಯನನ್ನೂ, ಮತ್ತಿತ್ಯನನ್ನೂ, ಎಲೀಫೆಲೇಹುನನ್ನೂ ಮಿಕ್ನೇಯನನ್ನೂ ದ್ವಾರಪಾಲಕರಾದ ಓಬೇದ್ ಏದೋಮನನ್ನೂ ಯೆಹೀಯೇಲನನ್ನೂ ನೇಮಿಸಿದರು.


ದಾವೀದನು ಜನರಲ್ಲಿ ಮೂರನೆಯ ಪಾಲನ್ನು ಯೋವಾಬನಿಗೂ, ಎರಡನೆಯ ಪಾಲನ್ನು ಚೆರೂಯಳ ಮಗನೂ ಯೋವಾಬನ ತಮ್ಮನೂ ಆಗಿರುವ ಅಬೀಷೈಗೂ, ಮೂರನೆಯ ಪಾಲನ್ನು ಗಿತ್ತೀಯನಾದ ಇತ್ತೈಗೂ ಒಪ್ಪಿಸಿದನು. ತರುವಾಯ ಅರಸನು ಸೈನಿಕರಿಗೆ, “ನಾನೂ ನಿಮ್ಮ ಸಂಗಡ ಹೊರಟು ಬರುತ್ತೇನೆ,” ಎಂದನು.


ಆಗ ಅರಸನು ಗಿತ್ತೀಯನಾದ ಇತ್ತೈಯನ್ನು ಕಂಡು, “ನೀನು ನಮ್ಮ ಸಂಗಡ ಬರುವುದು ಏಕೆ? ನಿನ್ನ ಸ್ಥಳಕ್ಕೆ ಹಿಂದಿರುಗಿ ಹೋಗಿ, ಅರಸನ ಸಂಗಡ ಇರು. ಏಕೆಂದರೆ ನೀನು ವಿದೇಶಿ. ನಿನ್ನ ದೇಶದಿಂದ ಸೆರೆಯಾಳಾಗಿ ಬಂದವನು.


ಆದರೆ ಬೇರೋತ್ಯರು ಗಿತ್ತಯಿಮಿಗೆ ಓಡಿಹೋಗಿ ಇಂದಿನವರೆಗೂ ಅಲ್ಲಿ ಪ್ರವಾಸಿಗಳಾಗಿದ್ದಾರೆ.


ಯೆಹುದ್, ಬೆನೇ ಬೆರಕ್, ಗತ್ ರಿಮ್ಮೋನ್,


ಆದರೂ ದಾವೀದನು ಚೀಯೋನಿನ ಕೋಟೆಯನ್ನು ವಶಪಡಿಸಿಕೊಂಡನು. ಅದೇ ದಾವೀದನ ಪಟ್ಟಣವು.


ದಾವೀದನು ಕೋಟೆಯಲ್ಲಿ ವಾಸಮಾಡಿದನು, ಅದಕ್ಕೆ ದಾವೀದನ ಪಟ್ಟಣವೆಂದು ಹೆಸರಿಟ್ಟನು. ಇದಲ್ಲದೆ ಅವನು ಅದರ ಸುತ್ತಲೂ ಮಿಲ್ಲೋವಿನಿಂದ ಪ್ರಾರಂಭಿಸಿ, ಒಳಗಿನ ಪೌಳಿಗೋಡೆಯನ್ನು ಕಟ್ಟಿಸಿದನು.


ಯಾಜಕರಾದ ಶೆಬನ್ಯ, ಯೋಷಾಫಾಟ್, ನೆತನೆಯೇಲ್, ಅಮಾಸೈಯೂ, ಜೆಕರ್ಯನೂ, ಬೆನಾಯನೂ, ಎಲೀಯೆಜೆರನೂ ದೇವರ ಮಂಜೂಷದ ಮುಂದೆ ತುತೂರಿಗಳನ್ನು ಊದುತ್ತಾ ಇದ್ದರು. ಓಬೇದ್ ಏದೋಮನೂ, ಯೆಹೀಯನೂ ಮಂಜೂಷಕ್ಕೆ ದ್ವಾರಪಾಲಕರಾಗಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು