2 ಸಮುಯೇಲ 6:12 - ಕನ್ನಡ ಸಮಕಾಲಿಕ ಅನುವಾದ12 “ದೇವರ ಮಂಜೂಷದ ನಿಮಿತ್ತ ಯೆಹೋವ ದೇವರು ಓಬೇದ್ ಏದೋಮನ ಮನೆಯನ್ನೂ, ಅವನಿಗೆ ಉಂಟಾದದ್ದೆಲ್ಲವನ್ನೂ ಆಶೀರ್ವದಿಸಿದ್ದಾರೆ,” ಎಂದು ಅರಸನಾದ ದಾವೀದನಿಗೆ ತಿಳಿಸಲಾಯಿತು. ಆಗ ದಾವೀದನು ಹೋಗಿ, ಓಬೇದ್ ಏದೋಮನ ಮನೆಯೊಳಗಿಂದ ದೇವರ ಮಂಜೂಷವನ್ನು ದಾವೀದನ ಪಟ್ಟಣಕ್ಕೆ ಸಂತೋಷವಾಗಿ ತಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಯೆಹೋವನು ಹೀಗೆ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ, ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸಾಹದಿಂದ ದಾವೀದನಗರಕ್ಕೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಹೀಗೆ ಸರ್ವೇಶ್ವರ ತಮ್ಮ ಮಂಜೂಷದ ಕಾರಣ ಓಬೇದೆದೋಮನನ್ನೂ ಅವನಿಗಿರುವುದೆಲ್ಲವನ್ನೂ ಆಶೀರ್ವದಿಸಿದ್ದಾರೆಂಬ ವರ್ತಮಾನ ದಾವೀದನಿಗೆ ಮುಟ್ಟಿತು. ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ಯೆಹೋವನು ಹೀಗೆ ತನ್ನ ಮಂಜೂಷದ ದೆಸೆಯಿಂದ ಓಬೇದೆದೋಮನನ್ನೂ ಅವನಿಗಿರುವದೆಲ್ಲವನ್ನೂ ಆಶೀರ್ವದಿಸಿದ್ದಾನೆಂಬ ವರ್ತಮಾನವು ದಾವೀದನಿಗೆ ಮುಟ್ಟಿದಾಗ ಅವನು ಹೋಗಿ ಓಬೇದೆದೋಮನ ಮನೆಯಲ್ಲಿದ್ದ ದೇವರ ಮಂಜೂಷವನ್ನು ಉತ್ಸವದಿಂದ ದಾವೀದನಗರಕ್ಕೆ ತಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ತರುವಾಯ ಜನರು ದಾವೀದನಿಗೆ, “ದೇವರ ಪವಿತ್ರ ಪೆಟ್ಟಿಗೆಯು ಓಬೇದೆದೋಮನ ಮನೆಯಲ್ಲಿರುವುದರಿಂದ ಯೆಹೋವನು ಅವನ ಕುಟುಂಬವನ್ನೂ ಅವನ ಸಮಸ್ತವನ್ನೂ ಆಶೀರ್ವದಿಸಿದನು.” ಎಂದು ಹೇಳಿದರು. ಆದ್ದರಿಂದ ದಾವೀದನು ಹೋಗಿ ಓಬೇದೆದೋಮನ ಮನೆಯಿಂದ ಪವಿತ್ರ ಪೆಟ್ಟಿಗೆಯನ್ನು ಸಂತೋಷದಿಂದ ತಂದನು. ಅಧ್ಯಾಯವನ್ನು ನೋಡಿ |