2 ಸಮುಯೇಲ 6:14 - ಕನ್ನಡ ಸಮಕಾಲಿಕ ಅನುವಾದ14 ಇದಲ್ಲದೆ ದಾವೀದನು ನಾರಿನ ಏಫೋದನ್ನು ಧರಿಸಿಕೊಂಡು, ತನ್ನ ಪೂರ್ಣಬಲದಿಂದ ಯೆಹೋವ ದೇವರ ಮುಂದೆ ಕುಣಿದಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ, ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ದಾವೀದನು ಏಫೋದೆಂಬ ನಾರುಮಡಿಯನ್ನು ಮಾತ್ರ ಉಟ್ಟುಕೊಂಡು ಸರ್ವೇಶ್ವರನ ಸನ್ನಿಧಿಯಲ್ಲಿ ಪೂರ್ಣಾವೇಶದಿಂದ ಕುಣಿದಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ದಾವೀದನು ನಾರಿನ ಏಫೋದನ್ನು ಧರಿಸಿಕೊಂಡವನಾಗಿ ಯೆಹೋವನ ಸನ್ನಿಧಿಯಲ್ಲಿ ಪೂರ್ಣಾಸಕ್ತಿಯಿಂದ ಕುಣಿದಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಆಗ ದಾವೀದನು ಯೆಹೋವನ ಸನ್ನಿಧಿಯಲ್ಲಿ ತನ್ನ ಶಕ್ತಿಮೀರಿ ನರ್ತಿಸಿದನು. ಅವನು ಏಫೋದನ್ನು ಧರಿಸಿದ್ದನು. ಅಧ್ಯಾಯವನ್ನು ನೋಡಿ |
ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು.