2 ಸಮುಯೇಲ 6:20 - ಕನ್ನಡ ಸಮಕಾಲಿಕ ಅನುವಾದ20 ಆಗ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ತಿರುಗಿದಾಗ, ಸೌಲನ ಮಗಳಾದ ಮೀಕಲಳು ದಾವೀದನಿಗೆ ಎದುರಾಗಿ ಬಂದು, “ನಿಷ್ಪ್ರಯೋಜಕ ಮನುಷ್ಯರಲ್ಲಿ ಒಬ್ಬನು ನಾಚಿಕೆ ಇಲ್ಲದೆ ತನ್ನ ವಸ್ತ್ರಗಳನ್ನು ಬಿಚ್ಚಿ ಹಾಕಿದ ಹಾಗೆಯೇ, ಈ ಹೊತ್ತು ತನ್ನ ಸೇವಕರ ದಾಸಿಯರ ಕಣ್ಣು ಮುಂದೆ ತನ್ನ ವಸ್ತ್ರಗಳನ್ನು ಬಿಚ್ಚಿಹಾಕಿದ್ದ ಇಸ್ರಾಯೇಲಿನ ಅರಸನು ಈ ಹೊತ್ತು ಎಷ್ಟು ಘನಹೊಂದಿದನು?” ಎಂದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು, “ಈ ಹೊತ್ತು ಇಸ್ರಾಯೇಲರ ಅರಸನು ಎಂಥ ಗೌರವದಿಂದ ನಡೆದುಕೊಂಡನು. ಹುಚ್ಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ” ಅಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವುದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದಳು. “ಈ ದಿನ ಇಸ್ರಯೇಲರ ಅರಸರು ಎಂಥ ಅಗೌರವದಿಂದ ನಡೆದುಕೊಂಡರು! ಹುಚ್ಚರಲ್ಲಿ ಒಬ್ಬರಂತೆ ತಮ್ಮ ಜನಸಾಮಾನ್ಯರಾದ ದಾಸಿಯರ ಮುಂದೆ ಬೆತ್ತಲೆಯಾಗಿದ್ದರಲ್ಲಾ!” ಎಂದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)20 ಅನಂತರ ದಾವೀದನು ತನ್ನ ಮನೆಯವರನ್ನು ಆಶೀರ್ವದಿಸುವದಕ್ಕೆ ಹೋದಾಗ ಸೌಲನ ಮಗಳಾದ ಮೀಕಲಳು ಅವನೆದುರಿಗೆ ಬಂದು - ಈ ಹೊತ್ತು ಇಸ್ರಾಯೇಲ್ಯರ ಅರಸನು ಎಂಥ ಗೌರವದಿಂದ ನಡೆದುಕೊಂಡನು! ನೀಚರಲ್ಲೊಬ್ಬನಂತೆ ತನ್ನ ಜನರ ದಾಸಿಯರ ಮುಂದೆ ಬೆತ್ತಲೆಯಾಗಿದ್ದನಲ್ಲಾ ಅಂದಳು. ಆಗ ದಾವೀದನು ಆಕೆಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ದಾವೀದನು ತನ್ನ ಕುಟುಂಬದವರನ್ನು ಆಶೀರ್ವದಿಸಲು ಹೋದನು. ಆದರೆ ಸೌಲನ ಮಗಳಾದ ಮೀಕಲಳು ಅವನನ್ನು ಭೇಟಿಮಾಡಲು ಹೊರಗೆ ಬಂದು, “ಇಸ್ರೇಲರ ರಾಜನು ಈ ದಿನ ತನ್ನ ಗೌರವವನ್ನು ಕಾಪಾಡಿಕೊಳ್ಳಲಿಲ್ಲ! ನಾಚಿಕೆಯಿಲ್ಲದೆ ತನ್ನೆಲ್ಲ ಬಟ್ಟೆಗಳನ್ನೂ ತೆಗೆದುಹಾಕುವ ಮೂರ್ಖನಂತೆ, ನೀನು ನಿನ್ನ ಸೇವಕರ ಮತ್ತು ದಾಸಿಯರ ಮುಂದೆ ನಿನ್ನ ಬಟ್ಟೆಗಳನ್ನೆಲ್ಲ ತೆಗೆದು ಹಾಕಿದೆಯಲ್ಲ” ಎಂದಳು. ಅಧ್ಯಾಯವನ್ನು ನೋಡಿ |