2 ಸಮುಯೇಲ 7:1 - ಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಅರಸನ ಸುತ್ತಲಿದ್ದ ಎಲ್ಲಾ ಶತ್ರುಗಳಿಂದ ತಪ್ಪಿಸಿ, ಅರಸನು ವಿಶ್ರಾಂತಿಯಿಂದ ತನ್ನ ಅರಮನೆಯಲ್ಲಿ ವಾಸಿಸುತ್ತಿದ್ದಾಗ, ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಯೆಹೋವನ ಅನುಗ್ರಹದಿಂದ ಸುತ್ತಣ ವೈರಿಗಳ ಭಯವೆಲ್ಲಾ ತಪ್ಪಿಹೋಗಿ ಅರಸನು ಅರಮನೆಯಲ್ಲಿ ಸಮಾಧಾನದಿಂದ ವಾಸಿಸುತ್ತಿದ್ದಾಗ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ದಾವೀದನು ತನ್ನ ಅರಮನೆಯಲ್ಲಿ ಸುಖವಾಗಿ ವಾಸಿಸುವಂತೆಯೂ ಅವನ ಸುತ್ತಲಿನ ಶತ್ರುಗಳಿಂದ ಭಯವಿಲ್ಲದಂತೆಯೂ ಯೆಹೋವನು ಮಾಡಿದನು. ಅಧ್ಯಾಯವನ್ನು ನೋಡಿ |
ಪೂರ್ವಕಾಲದಲ್ಲಿ ನಾನು ನನ್ನ ಜನರಾದ ಇಸ್ರಾಯೇಲರ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ಆ ದಿವಸದಿಂದ ಈಚೆಗೂ ದುಷ್ಟರು ಅವರನ್ನು ಕುಗ್ಗಿಸಿದಂತೆ ಇನ್ನು ಮೇಲೆ ಕುಗ್ಗಿಸದೆ ಇರುವರು. “ ‘ನಿನ್ನನ್ನು, ನಿನ್ನ ಸಮಸ್ತ ಶತ್ರುಗಳಿಂದ ತಪ್ಪಿಸಿ, ನಿನಗೆ ವಿಶ್ರಾಂತಿಯನ್ನು ಉಂಟುಮಾಡುವೆನು. ಇದಲ್ಲದೆ ಯೆಹೋವ ದೇವರು ನಿನಗೆ ತಿಳಿಸುವುದೇನೆಂದರೆ, ನಾನು ನಿನ್ನ ರಾಜವಂಶವನ್ನು ಸ್ಥಿರಪಡಿಸುವೆನು.