Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:12 - ಕನ್ನಡ ಸಮಕಾಲಿಕ ಅನುವಾದ

12 ನಿನ್ನ ಆಯುಷ್ಕಾಲವು ಮುಗಿದ ಮೇಲೆ ನೀನು ನಿನ್ನ ಪಿತೃಗಳ ಜೊತೆ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ನಿನ್ನ ಆಯುಷ್ಕಾಲವು ಮುಗಿದು, ನೀನು ಪೂರ್ವಿಕರ ಬಳಿಗೆ ಸೇರಿದ ಮೇಲೆ, ನಿನ್ನಿಂದ ಹುಟ್ಟುವ ಮಕ್ಕಳಲ್ಲಿ ಒಬ್ಬನನ್ನು ಎಬ್ಬಿಸಿ, ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ನಿನ್ನ ಆಯುಷ್ಕಾಲ ಮುಗಿದು ನೀನು ನಿನ್ನ ಪೂರ್ವಜರನ್ನು ಸೇರಿ ವಿಶ್ರಮಿಸುವಾಗ ನಿನ್ನ ಮಕ್ಕಳಲ್ಲಿ ಒಬ್ಬನನ್ನು ನಿನಗೆ ಉತ್ತರಾಧಿಕಾರಿಯನ್ನಾಗಿ ನೇಮಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ನಿನ್ನ ಆಯುಷ್ಕಾಲವು ಮುಗಿದು ನೀನು ಪಿತೃಗಳ ಬಳಿಗೆ ಸೇರಿದ ಮೇಲೆ ನಿನ್ನಿಂದ ಹುಟ್ಟುವವನನ್ನು ನೆಲೆಗೊಳಿಸಿ ಅವನ ರಾಜ್ಯವನ್ನು ಸ್ಥಿರಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “‘ನಿನ್ನ ದಿನಗಳು ಮುಗಿದುಹೋಗುತ್ತವೆ; ನೀನು ನಿನ್ನ ಪೂರ್ವಿಕರ ಜೊತೆಯಲ್ಲಿ ಸೇರುತ್ತಿ. ಆ ಸಮಯದಲ್ಲಿ, ನಿನ್ನ ಮಕ್ಕಳಲ್ಲಿ ಒಬ್ಬನನ್ನು ರಾಜನನ್ನಾಗಿ ಮಾಡಿ ಅವನ ರಾಜ್ಯವನ್ನು ಭದ್ರಗೊಳಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:12
36 ತಿಳಿವುಗಳ ಹೋಲಿಕೆ  

ಆದರೆ ಪ್ರವಾದಿಯಾಗಿದ್ದ ದಾವೀದನ ಸಂತತಿಯವರಲ್ಲಿ ಒಬ್ಬರನ್ನು ಅವನ ಸಿಂಹಾಸನದ ಮೇಲೆ ಕುಳ್ಳಿರಿಸುವೆನು, ಎಂದು ಆಣೆಯಿಟ್ಟು ದೇವರು ವಾಗ್ದಾನ ಮಾಡಿದ್ದನ್ನು ದಾವೀದನು ತಿಳಿದಿದ್ದನು.


“ಈಗ ಯೆಹೋವ ದೇವರು ತಾವು ಹೇಳಿದ ವಾಗ್ದಾನವನ್ನು ನೆರವೇರಿಸಿದ್ದಾರೆ. ನಾನು ನನ್ನ ತಂದೆಯಾದ ದಾವೀದನಿಗೆ ಬದಲಾಗಿ ಯೆಹೋವ ದೇವರು ಮಾತುಕೊಟ್ಟ ಪ್ರಕಾರ, ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಂಡು, ಇಸ್ರಾಯೇಲಿನ ದೇವರಾದ ಯೆಹೋವ ದೇವರ ಹೆಸರಿಗೋಸ್ಕರ ಈ ಆಲಯವನ್ನು ಕಟ್ಟಿಸಿದ್ದೇನೆ.


ಆದರೆ ದಾವೀದನ ಸಾಯುವ ಕಾಲ ಸಮೀಪಿಸಿದ್ದರಿಂದ ಅವನು ತನ್ನ ಮಗ ಸೊಲೊಮೋನನಿಗೆ ಆಜ್ಞಾಪಿಸಿದ್ದೇನೆಂದರೆ,


“ದಾವೀದನು ತನ್ನ ಜೀವಮಾನದಲ್ಲಿ ದೇವರ ಉದ್ದೇಶಕ್ಕೆ ಅನುಗುಣವಾಗಿ ಸೇವೆಮಾಡಿ ಮರಣಹೊಂದಿದನು. ಅವನ ಪಿತೃಗಳೊಂದಿಗೆ ಅವನನ್ನು ಸೇರಿಸಿದರು. ಅವನ ದೇಹ ಕೊಳೆತುಹೋಯಿತು.


ನಿನ್ನ ಆಯುಷ್ಕಾಲವು ಮುಗಿದ ಮೇಲೆ, ನೀನು ನಿನ್ನ ಪಿತೃಗಳ ಬಳಿಗೆ ಹೋಗಿ ವಿಶ್ರಮಿಸುವಾಗ, ನಾನು ನಿನ್ನ ಸಂತತಿಯಲ್ಲಿ ಒಬ್ಬನನ್ನು ನಿನ್ನ ಉತ್ತರಾಧಿಕಾರಿಯನ್ನಾಗಿ ನೇಮಿಸಿ, ಅವನ ರಾಜ್ಯವನ್ನು ಸ್ಥಿರಮಾಡುವೆನು.


ಆಗ ಯೆಹೋವ ದೇವರು ಮೋಶೆಗೆ, “ನೀನು ಮೃತನಾಗಿ, ನಿನ್ನ ಪಿತೃಗಳ ಸಂಗಡ ಸೇರುವಿ. ಈ ಜನರು ದೇವದ್ರೋಹಿಗಳಾಗಿ, ಅವರು ಪ್ರವೇಶಿಸುವ ದೇಶದ ಅನ್ಯದೇವರುಗಳನ್ನು ಅನುಸರಿಸಿ ಪೂಜೆ ಮಾಡಿ, ನನ್ನನ್ನು ಬಿಟ್ಟು ನಾನು ಅವರ ಸಂಗಡ ಮಾಡಿದ ಒಡಂಬಡಿಕೆಯನ್ನು ಮೀರುವರು.


ಏಕೆಂದರೆ ಯೇಸು ಸತ್ತು ಪುನಃ ಜೀವಂತವಾಗಿ ಎದ್ದರೆಂದು ನಾವು ನಂಬಿದರೆ, ಅದರಂತೆ ಯೇಸುವಿನಲ್ಲಿ ನಿದ್ರೆಹೋದವರನ್ನು ಸಹ ದೇವರು ಅವರೊಡನೆ ಕರೆದುಕೊಂಡು ಬರುವರು.


ನಾನು ರಹಸ್ಯವಾಗಿದ್ದ ಸಂಗತಿಯನ್ನು ನಿಮಗೆ ಹೇಳುತ್ತೇನೆ ಕೇಳಿರಿ: ನಾವೆಲ್ಲರೂ ನಿದ್ರೆ ಹೋಗುವುದಿಲ್ಲ, ನಾವೆಲ್ಲರೂ ರೂಪಾಂತರವಾಗುವೆವು.


ಆ ದಿನದಲ್ಲಿ ಇಷಯನ ವಂಶದಿಂದ ಜನರಿಗೆ ಒಂದು ಬೇರು ಗುರುತಿನ ಧ್ವಜವಾಗಿ ನಿಲ್ಲುವುದು. ಅವರ ವಿಶ್ರಾಂತಿ ಸ್ಥಳವು ಮಹಿಮೆಯುಳ್ಳದ್ದಾಗಿರುವುದು.


ಅವರ ಆಡಳಿತದ ಶ್ರೇಷ್ಠತೆ ಮತ್ತು ಶಾಂತಿಗೆ ಅಂತ್ಯವಿಲ್ಲ. ಅವರ ಮುಖಾಂತರ ದಾವೀದನ ಸಿಂಹಾಸನದ ಆಡಳಿತವು ಅಭಿವೃದ್ಧಿಯಾಗುವುದು, ದಾವೀದನ ರಾಜ್ಯವು ಇಂದಿನಿಂದ ಯಾವಾಗಲೂ ನೀತಿನ್ಯಾಯಗಳ ಮೂಲಕ ಸ್ಥಾಪಿತವಾಗಿ ಸ್ಥಿರಗೊಳ್ಳುವುದು, ಸೇನಾಧೀಶ್ವರ ಯೆಹೋವ ದೇವರ ಅನುಗ್ರಹವು ಇದನ್ನು ನೆರವೇರಿಸುವುದು.


ಇಲ್ಲದಿದ್ದರೆ ನನ್ನ ಒಡೆಯನೂ ಅರಸನೂ ತನ್ನ ಪಿತೃಗಳ ಸಂಗಡ ಸಮಾಧಿ ಸೇರಿದಾಗ, ನಾನೂ, ನನ್ನ ಮಗ ಸೊಲೊಮೋನನೂ ಅಪರಾಧಿಗಳಾಗಿ ಎಣಿಕೆಯಾಗುವೆವು,” ಎಂದಳು.


ಭೂಮಿಯ ಧೂಳಿನೊಳಗೆ ನಿದ್ರೆ ಮಾಡುವವರಲ್ಲಿ ಅನೇಕರು ಎಚ್ಚತ್ತು, ಕೆಲವರು ನಿತ್ಯಜೀವವನ್ನೂ ಮತ್ತು ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ಆತನ ಸಂತತಿಯನ್ನು ಸಹ ಎಂದೆಂದಿಗೂ ಆತನ ಸಿಂಹಾಸನವನ್ನು ಆಕಾಶ ಇರುವವರೆಗೂ ಮಾಡುವೆನು.


ಆಗ ಯೆಹೋವ ದೇವರ ವಾಕ್ಯವು, “ಈ ಮನುಷ್ಯನು ನಿನ್ನ ಉತ್ತರಾಧಿಕಾರಿಯಾಗುವುದಿಲ್ಲ. ನಿನ್ನಿಂದಲೇ ಹುಟ್ಟಿಬರುವ ನಿನ್ನ ಮಗನು ನಿನ್ನ ವಾರಸುದಾರನಾಗುವನು,” ಎಂದು ಹೇಳಿ,


ಕ್ರಿಸ್ತ ಯೇಸುವಿನ ವಂಶಾವಳಿಯ ದಾಖಲೆ. ಯೇಸು ದಾವೀದನ ವಂಶದವರು, ದಾವೀದನು ಅಬ್ರಹಾಮನ ವಂಶದವನು:


ಅವರು ದೊಡ್ಡವರಾಗಿ ಮಹೋನ್ನತರ ಪುತ್ರ ಎಂದು ಎನಿಸಿಕೊಳ್ಳುವರು. ಕರ್ತದೇವರು ಅವರ ತಂದೆ ದಾವೀದನ ಸಿಂಹಾಸನವನ್ನು ಅವರಿಗೆ ಕೊಡುವರು.


ಮೋಶೆಯ ಮತ್ತು ಎಲ್ಲಾ ಪ್ರವಾದಿಗಳಿಂದ ಆರಂಭಿಸಿ, ಪವಿತ್ರ ವೇದಗಳಲ್ಲಿ ತನ್ನ ವಿಷಯವಾಗಿ ಬರೆದವುಗಳನ್ನು ಯೇಸು ಅವರಿಗೆ ವಿವರಿಸಿದರು.


‘ಕಣ್ಣುಗಳು ನೋಡುತ್ತಿರುವಾಗ ಇಂದು ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವ ಉತ್ತರಾಧಿಕಾರಿಯನ್ನು ನನಗೆ ಕೊಟ್ಟಿರುವ ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ,’ ಎಂದು ಹೇಳಿದ್ದಾರೆ,” ಎಂದನು.


ಯೆಹೋವ ದೇವರು, ‘ನಿನ್ನ ಮಕ್ಕಳು ತಾವು ಪೂರ್ಣಹೃದಯದಿಂದಲೂ, ಪೂರ್ಣಪ್ರಾಣದಿಂದಲೂ ನನ್ನ ಮುಂದೆ ನಂಬಿಗಸ್ತರಾಗಿ ನಡೆದುಕೊಳ್ಳುವ ಹಾಗೆ ತಮ್ಮ ಮಾರ್ಗವನ್ನು ಕಾದುಕೊಂಡರೆ ಅವರು ಇಸ್ರಾಯೇಲಿನ ಸಿಂಹಾಸನದ ಮೇಲೆ ತಪ್ಪದೇ ಕುಳಿತುಕೊಳ್ಳುವರು,’ ಎಂದು ನನಗೆ ಹೇಳಿದ ತಮ್ಮ ವಾಕ್ಯವನ್ನು ಸ್ಥಿರಪಡಿಸುವರು.


ಆದ್ದರಿಂದ, ನನ್ನ ದೇವರಾದ ಯೆಹೋವ ದೇವರ ಹೆಸರಿಗೆ ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಅದರ ವಿಷಯವಾಗಿ ಯೆಹೋವ ದೇವರು ನನ್ನ ತಂದೆಯಾದ ದಾವೀದನಿಗೆ, ‘ನಿನಗೆ ಬದಲಾಗಿ ನಿನ್ನ ಸಿಂಹಾಸನದ ಮೇಲೆ ನಾನು ಕುಳ್ಳಿರಿಸುವ ನಿನ್ನ ಮಗನೇ ನನ್ನ ಹೆಸರಿಗೆ ದೇವಾಲಯವನ್ನು ಕಟ್ಟಿಸುವನು,’ ಎಂದು ಹೇಳಿದ್ದಾರಲ್ಲವೇ.


ನಂತರ ರಾಜನು ಹೀಗೆ ಹೇಳಿದನು: “ಇಸ್ರಾಯೇಲಿನ ದೇವರಾದ ಯೆಹೋವ ದೇವರಿಗೆ ಸ್ತೋತ್ರವಾಗಲಿ, ಅವರು ನನ್ನ ತಂದೆಯಾದ ದಾವೀದನಿಗೆ ತಮ್ಮ ಬಾಯಿಂದ ವಾಗ್ದಾನ ಮಾಡಿದ್ದನ್ನು, ತಮ್ಮ ಕೈಗಳಿಂದಲೇ ನೆರವೇರಿಸಿದರು. ಅವರು ಹೇಳಿದ್ದೇನೆಂದರೆ,


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ಇಸ್ರಾಯೇಲಿನ ಸಿಂಹಾಸನದ ಮೇಲೆ ಕುಳಿತುಕೊಳ್ಳಲು ನಿನಗೆ ಉತ್ತರಾಧಿಕಾರಿಯ ಕೊರತೆಯಾಗುವುದಿಲ್ಲವೆಂದು ನಾನು ನಿನ್ನ ತಂದೆ ದಾವೀದನಿಗೆ ಮಾತುಕೊಟ್ಟ ಪ್ರಕಾರ, ‘ಇಸ್ರಾಯೇಲಿನಲ್ಲಿ ನಿನ್ನ ರಾಜ್ಯದ ಸಿಂಹಾಸನವನ್ನು ನಿರಂತರವಾಗಿ ಸ್ಥಿರಪಡಿಸುವೆನು.’


ಆದರೂ ಯೆಹೋವ ದೇವರು ಯೆಹೂದದ ರಾಜ್ಯವನ್ನು ನಾಶಮಾಡಲಿಲ್ಲ. “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂಬುದಾಗಿ ತಮ್ಮ ದಾಸನಾದ ದಾವೀದನಿಗೆ ಪ್ರಮಾಣ ಮಾಡಿದ ಕಾರಣ ಉಳಿಸಿದರು.


ಈಗ ಯೆಹೋವ ದೇವರೇ, ನೀವು ನನ್ನ ತಂದೆ ದಾವೀದನಿಗೆ ಮಾಡಿದ ವಾಗ್ದಾನವು ದೃಢವಾಗಲಿ. ಏಕೆಂದರೆ ಭೂಮಿಯ ಧೂಳಿನಷ್ಟು ಅಸಂಖ್ಯಾತ ಜನರ ಮೇಲೆ ನನ್ನನ್ನು ಅರಸನನ್ನಾಗಿ ಮಾಡಿದ್ದೀರಿ.


ಇಸ್ರಾಯೇಲಿನ ದೇವರಾದ ಯೆಹೋವ ದೇವರು ಇಸ್ರಾಯೇಲಿನ ಮೇಲೆ ರಾಜ್ಯವನ್ನು ಎಂದೆಂದಿಗೂ ದಾವೀದನಿಗೂ, ಅವನ ವಂಶದವರಿಗೂ ಉಪ್ಪಿನ ಒಡಂಬಡಿಕೆಯಿಂದ ಕೊಟ್ಟರೆಂದು ನಿಮಗೆ ಗೊತ್ತಿಲ್ಲವೋ.


ಆದರೆ ಯೆಹೋವ ದೇವರು ದಾವೀದನಿಗೆ, “ನಿನ್ನ ಮತ್ತು ನಿನ್ನ ಸಂತಾನದವರ ದೀಪವನ್ನು ಎಂದೂ ನಂದಿಸುವುದಿಲ್ಲ,” ಎಂದು ಪ್ರಮಾಣ ಮಾಡಿದ ಕಾರಣ, ದೇವರು ದಾವೀದನ ಮನೆತನದವರನ್ನು ನಾಶಮಾಡುವುದಕ್ಕೆ ಇಷ್ಟಪಡಲಿಲ್ಲ.


ಆಗ ಸಭೆಯವರೆಲ್ಲರು ದೇವರ ಆಲಯದಲ್ಲಿ ಅರಸನ ಸಂಗಡ ಒಡಂಬಡಿಕೆಯನ್ನು ಮಾಡಿದರು. ಯೆಹೋಯಾದನು ಅವರಿಗೆ, “ಇಗೋ, ರಾಜಪುತ್ರನು, ಯೆಹೋವ ದೇವರು ದಾವೀದನ ವಂಶದವರ ಬಗ್ಗೆ ಮಾಡಿದ ವಾಗ್ದಾನಕ್ಕೆ ಅನುಸಾರವಾಗಿ ಆಳತಕ್ಕವನು ಇವನೇ.


“ಅವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ, ದಾವೀದನಿಗೂ, ಅವನ ಸಂತತಿಯವರಿಗೂ ದಯೆಯನ್ನು ಯುಗಯುಗಕ್ಕೂ ಅನುಗ್ರಹಿಸುವರು.”


ಹೀಗೆಯೇ ದಾವೀದನು ಮರಣಹೊಂದಿ ತನ್ನ ಪಿತೃಗಳ ಜೊತೆ ಸೇರಿದನು. ದಾವೀದನ ಶವವನ್ನು ದಾವೀದನ ಪಟ್ಟಣದಲ್ಲಿ ಸಮಾಧಿಮಾಡಿದರು.


ಆದರೆ ನೀನು ಆಲಯವನ್ನು ಕಟ್ಟಬಾರದು. ನಿನ್ನಿಂದ ಹುಟ್ಟುವ ಮಗನೇ, ನನ್ನ ಹೆಸರಿಗೋಸ್ಕರ ಆಲಯವನ್ನು ಕಟ್ಟಬೇಕು,’ ಎಂದು ಹೇಳಿದರು.


ನಿಮ್ಮ ಸೇವಕನಾದಂಥ ನನ್ನ ತಂದೆಯಾದ ದಾವೀದನಿಗೆ ಕೊಟ್ಟ ಮಾತನ್ನು ನೆರವೇರಿಸಿ, ನೀವು ನಿಮ್ಮ ಬಾಯಿಂದ ಹೇಳಿದ್ದನ್ನು ಇಂದು ಈಡೇರಿಸಿದ್ದೀರಿ.


ಯೆಹೋವ ದೇವರಾದ ನಾನು ಹೇಳುವುದೇನೆಂದರೆ: ‘ದಾವೀದನು ಎಂದಿಗೂ ಇಸ್ರಾಯೇಲ್ ಸಿಂಹಾಸನದಲ್ಲಿ ಕುಳಿತುಕೊಳ್ಳಲು ಒಬ್ಬ ವ್ಯಕ್ತಿಯನ್ನು ಹೊಂದಲು ವಿಫಲನಾಗುವುದಿಲ್ಲ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು